ನವೆಂಬರ್ 5 ರಂದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿ

Tuesday, November 3rd, 2020
Karyakarini

ಮಂಗಳೂರು : ನವೆಂಬರ್ 5 ರಂದು ಮಂಗಳೂರಿನಲ್ಲಿ ನಡೆಯಲಿರುವ  ಬಿಜೆಪಿಯ ವಿಶೇಷ ಕಾರ್ಯಕಾರಿ ಸಭೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸರುವರು ಎಂದು,  ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಮಂಗಳೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು,  ಟಿ ವಿ ರಮಣ್ ಪೈ ಹಾಲ್‌ನಲ್ಲಿ ನಡೆಯಲಿರುವ ಬಿಜೆಪಿಯ ವಿಶೇಷ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನವೆಂಬರ್ 4 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ” ಎಂದು  ಅವರು ಮಾಹಿತಿ ನೀಡಿದರು. ಸಿಎಂ ಯಡಿಯೂರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು […]

ಜುಲೈ 23ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ತೆರವು

Tuesday, July 21st, 2020
srinivas-poojary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ  16 ರಿಂದ ಒಂದು ವಾರ ವಿಧಿಸಲಾಗಿದ್ದ ಲಾಕ್‌ಡೌನ್‌ನ್ನುಜುಲೈ 23ಕ್ಕೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್‌ನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಜು.22ರಂದು ರಾತ್ರಿವರೆಗೆ ಇರಲಿದೆ. ಜು.23ರಂದು ಬೆಳಗ್ಗೆ 5ಗಂಟೆಯಿಂದ ಲಾಕ್‌ಡೌನ್ ತೆರವುಗೊಳ್ಳಲಿದ್ದು, ಅಂದು ಎಲ್ಲ ಅಂಗಡಿ-ಮುಂಗಟ್ಟುಗಳು ಸಂಪೂರ್ಣವಾಗಿ ತೆರೆಯಲಿವೆ. ವಾಣಿಜ್ಯ ವ್ಯಾಪಾರವು ಮುಕ್ತವಾಗಿರಲಿದೆ ಎಂದು ಹೇಳಿದರು.

ಹಳೆಯಂಗಡಿ : ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಚಿವರಿಗೆ ಮನವಿ

Thursday, September 19th, 2019
haleyangady

ಹಳೆಯಂಗಡಿ : ಪಟ್ಟಣವಾಗಿ ಬೆಳೆಯುತ್ತಿರುವ ಹಳೆಯಂಗಡಿಯ ಮಾರುಕಟ್ಟೆಯನ್ನು ಆಧುನಿಕ ರೀತಿಯಲ್ಲಿ ನವೀಕರಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿಯವರಲ್ಲಿ ದ.ಕ. ಜಿ. ಪಂ. ಸದಸ್ಯ ವಿನೋದ್‌ ಕುಮಾರ್‌ ಬೊಳ್ಳೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸಚಿವರು ಕಾರ್ಯ ನಿಮಿತ್ತ ಮಂಗ ಳೂರಿಗೆ ತೆರಳುತ್ತಿದ್ದಾಗ ಹಳೆಯಂಗಡಿಯ ಪೇಟೆಯಲ್ಲಿ ವಿವಿಧ ಸಂಘ - ಸಂಸ್ಥೆಗಳ ಪ್ರಮುಖರೊಂದಿಗೆ ಸೌಹಾರ್ದ ಭೇಟಿ ನೀಡಿದ ಸಂದರ್ಭದಲ್ಲಿ ಜಿ.ಪಂ. ಸದಸ್ಯರು ಮನವಿ ನೀಡಿದರು. ಬಹಳ ವರ್ಷ ಗಳಿಂದ ದುಸ್ಥಿತಿಯಲ್ಲಿ ಇರುವ ಮೀನು ಮಾರುಕಟ್ಟೆಯನ್ನು ಸಂಪೂರ್ಣವಾಗಿ ನವೀಕರಿಸಿ, […]

ಕೋಟ ಶ್ರೀನಿವಾಸ್ ಪೂಜಾರಿ : ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ

Thursday, August 22nd, 2019
Shreenivas-poojari

ಮಂಗಳೂರು : ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು ಮಂಗಳೂರಿಗೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ನೆರೆಪರಿಹಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪರಿಹಾರ ಕ್ರಮವನ್ನು ಕೈಗೊಂಡಿದ್ದಾರೆ. ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ ತಲಾ 10,000 ರೂ. ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಸಂತ್ರಸ್ತರ ಖಾತೆಗೆ ಜಮಾ ಆಗಿದೆ. ಎಂದು ಹೇಳಿದರು. ನೆರೆ ಪರಿಸ್ಥಿತಿ ನಿಭಾಯಿಸಲು ರಾಜ್ಯದ ಜಿಲ್ಲಾಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ […]