ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಣೆ

Wednesday, January 10th, 2024
veerendra-heggade

ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಅವರು ಹೇಳಿದರು. ಶ್ರೀ ರಾಮ ಮಂದಿರ ನಿರ್ಮಾಣದ ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ – ನವೆಂಬರ್ 29 ರಿಂದ ಡಿಸೆಂಬರ್ 3, 2021

Sunday, November 28th, 2021
Dharmasthala-Deepothsava

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟನೆ

Monday, October 12th, 2020
Matsya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಲಿತೋದ್ಯಾನದಲ್ಲಿನ ಮತ್ಸ್ಯ ಪ್ರದರ್ಶನಾಲಯದಲ್ಲಿ ಅಲಂಕಾರಿಕ ಮೀನುಗಳನ್ನು‌ ಕೊಳಕ್ಕೆ ಬಿಡುವುದರ ಮೂಲಕ  ಮತ್ಸ್ಯ ಪ್ರದರ್ಶನಾಲಯವನ್ನು  ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಉದ್ಘಾಟಿಸಿದರು. ಆತ್ಮ ನಿರ್ಭರ ಯೋಜನೆಯಡಿಯಲ್ಲಿ ಮೀನುಗಾರಿಕೆಯಲ್ಲಿ ರಾಜ್ಯವು 1ನೇ ಸ್ಥಾನಕ್ಕೆ ಬರುವಂತೆ ಪ್ರಯತ್ನಿಸಲಾಗುವುದು. ಯಾವುದೇ ಸಾಮಾಜಿಕ ಯೋಜನೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಾದರಿಯಾಗಿದೆ. ಮೀನುಗಾರಿಕಾ ಇಲಾಖೆ ಹೊಸ ಹೆಜ್ಜೆ ಇಟ್ಟಿದ್ದು, ಇಂದಿನ ಕಾರ್ಯಕ್ರಮದಿಂದ ಆತ್ಮವಿಶ್ವಾಸ ಇಮ್ಮಡಿಯಾಗಿದೆ ಎಂದು ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. […]

ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಣ್ಣುಆನೆ ಮರಿಗೆ ಶಿವಾನಿ ಎಂದು ನಾಮಕರಣ

Wednesday, September 2nd, 2020
Shivani

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇಗುಲದಲ್ಲಿ ಜುಲೈ1 ರಂದು ಜನಿಸಿದ ಆನೆ ಮರಿಗೆ ಮಂಗಳವಾರ ನಾಮಕರಣ ಶಾಸ್ತ್ರ ನಡೆಸಲಾಗಿದ್ದು, ಶಿವಾನಿ ಎಂದು ಹೆಸರಿಡಲಾಗಿದೆ. ದೇಗುಲದ ಆನೆ ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಆ ಆನೆ ಮರಿಯ ನಾಮಕರಣ ಆ.31 ರಂದು ಅಂದರೆ ಇಂದು ತುಲಾ ಲಗ್ನ ಮುಹೂರ್ತದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ಶ್ರೀ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ವಿಧಿ ನೆರವೇರಿಸಿದರು. ಧರ್ಮಸ್ಥಳದ […]

ಹೆಣ್ಣು ಮರಿಗೆ ಜನ್ಮನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲಕ್ಷ್ಮೀ

Wednesday, July 1st, 2020
Lakshmi elephant

ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೇಗುಲದ ಆನೆ ಲಕ್ಷ್ಮೀ ಮುದ್ದಾದ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದ್ದಾಳೆ. ಲಕ್ಷ್ಮೀ ಆನೆಯನ್ನು ವಿಜಯನಗರ ಶಾಸಕ ಆನಂದ್ ಸಿಂಗ್ ಅವರು 2009 ರಲ್ಲಿ ಧರ್ಮಸ್ಥಳ ದೇಗುಲಕ್ಕೆ ಕೊಡುಗೆಯಾಗಿ ನೀಡಿದ್ದರು. ಇದೀಗ ಆನೆ ಮರಿಗೆ ಜನ್ಮ ನೀಡಿರೋದು ಎಲ್ಲರ ಸಂತಸಕ್ಕೆ ಕಾರಣವಾಗಿದ್ದು, ಆನೆಯ ಮಾವುತರು ಆನೆಯ ಆರೈಕೆಯಲ್ಲಿ ತೊಡಗಿದ್ದಾರೆ. ಲಕ್ಷ್ನೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಭಕ್ತರ ಸಂಭ್ರಮವನ್ನು ಹೆಚ್ಚಿಸಿದೆ.  

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಜೆ.ಸಿ.ಮಾಧುಸ್ವಾಮಿ

Saturday, October 26th, 2019
madhu-swamy

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆ ಹಾವಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶನಿವಾರ ಭೇಟಿ ನೀಡುವ ಮುನ್ನ ರಾಜ್ಯ ಸರಕಾರದ ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಶಾಸಕ ಹರೀಶ್ ಪೂಂಜ ಮತ್ತಿರರು ಇದ್ದರು. ಬಳಿಕ ನೆರೆ ಹಾವಳಿಯಿಂದ ಹಾನಿಗೀಡಾದ ಕುಕ್ಕಾವು ಸೇತುವೆ ಪ್ರದೇಶಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.  

21 ನೇ ವರ್ಷದ ಭಜನಾತರಬೇತಿ ಶಿಬಿರ ಮತ್ತು ಸ೦ಸ್ಕೃತಿ ಸ೦ವರ್ಧನಾ ಕಾರ್ಯಗಾರ

Friday, September 20th, 2019
Bajana Kammata

ಧರ್ಮಸ್ಥಳ : ಕನ್ನಡ ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಸುದೀರ್ಘಇತಿಹಾಸವಿದೆ. ಈ ಸಾಹಿತ್ಯ ಅನೇಕ ರೂಪಗಳಲ್ಲಿ ಅಭಿವ್ಯಕ್ತಿಯನ್ನು ಪಡೆಯಿತು. ಇವುಗಳಲ್ಲಿ ಕೀರ್ತನೆಯುಅಥವಾ ಭಜನೆಯು ಒಂದು. ಇದು ಭಕ್ತಿ ಪಂಥವು ಬಳಸಿದ ಒಂದು ಪ್ರಮುಖ ಸಂವಹನ ಮಾಧ್ಯಮವಾಯಿತು. ಇದುಒಂದುಯುಗಧರ್ಮವನ್ನೇಅಭಿವ್ಯಕ್ತಿಸಬಲ್ಲ ಸಾಹಿತ್ಯ ಮಾಧ್ಯಮವಾಯಿತು. ಜನರಿಗೆ ನೇರವಾಗಿ ತಲುಪಲು ರಂಜನೀಯ. ಪ್ರಭಾವಿಯೂ ಆಗಿ ಕೀರ್ತನರೂಪವಾಗಿ ಅವಿಷ್ಕಾರವಾಯಿತು. ಮಾಧ್ಯಕಾಲೀನ ಭಕ್ತಿಯುಗ ಈ ಭಜನಾ ಸಂಪ್ರದಾಯಕ್ಕೆ ಹತ್ತಿರವಾದದ್ದು ಶೈವ ಹಾಗೂ ವೈಷ್ಣವ ಪಂಥಗಳೆರಡು ವ್ಯಾಪಕವಾಗಿ ಭಜನಾ ಪರಂಪರೆಯನ್ನು ಹುಟ್ಟು ಹಾಕಿದವು.ಈ ಪರಂಪರೆಯ ದಾಸರು ಭಜನೆಗಳಿಗೆ ತಾತ್ವಿಕ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ : ನೂತನ ಕಚೇರಿ ಉದ್ಘಾಟನೆ

Tuesday, June 25th, 2019
Guruvayana ketre

ಬೆಳ್ತಂಗಡಿ  : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ 1982 ರಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಗೊಂಡ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಇಂದು ರಾಜ್ಯದೆಲ್ಲೆಡೆ ವಿಸ್ತರಿಸಿದೆ. ಜನಪರ ಚಳವಳಿಯಾಗಿ ಪ್ರತಿ ಮನೆಗೂ ಯೋಜನೆ ತಲುಪಿದೆ. ಜನರಎಲ್ಲಾ ಬೇಡಿಕೆಗಳನ್ನು ಪೂರೈಸಿ ಜೀವನ ಮಟ್ಟ ಸುಧಾರಣೆಯೊಂದಿಗೆ ಸ್ವಾವಲಂಬಿಜೀವನಕ್ಕೆಕಾಯಕಲ್ಪ ನೀಡಿದೆಎಂದುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಹೇಳಿದರು. ಅವರು ಮಂಗಳವಾರ ಗುರುವಾಯನಕೆರೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿಯನ್ನು ಉದ್ಘಾಟಿಸಿ […]

ರಾಹುಲ್ ಗಾಂಧಿ ಟೆಂಪಲ್ ರನ್ ವಿರುದ್ಧ ಸಾಧ್ವಿ ಬಾಲಿಕಾ ಸರಸ್ವತಿ ವಾಗ್ದಾಳಿ

Saturday, April 28th, 2018
rahul-gandhi

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಸಾಧ್ವಿ ಬಾಲಿಕಾ ಸರಸ್ವತಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ದುಷ್ಟ ಶಕ್ತಿಗಳೊಂದಿಗೆ ರಾಷ್ಟ್ರೀಯ ಪಕ್ಷವೊಂದು ಚುನಾವಣೆಗೋಸ್ಕರ ಒಪ್ಪಂದ ಮಾಡಿಕೊಂಡಿರುವುದು ದುರದೃಷ್ಟಕರ ಈ ಬೆಳವಣಿಗೆ ಮುಂಬರುವ ದಿನಗಳಲ್ಲಿ ಹಿಂದೂಗಳ ಸ್ಥಿತಿ ಏನಾಗಲಿದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಗಾಂಧಿ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೀಡ್ ಪ್ರಯಾಣ ತಂಡ ಭೇಟಿ

Saturday, January 27th, 2018
dharmastala

ಮಂಗಳೂರು: ಜೀವನ ಮೌಲ್ಯಗಳನ್ನು ನೀಡುವಂತಹ ವಿದ್ಯೆಯು ಶಾಶ್ವತವಾಗಿ ಉಳಿಯಬಲ್ಲದು. ಪ್ರತಿಯೊಬ್ಬರು ದೇಶಪ್ರೇಮವನ್ನು ಹೃದಯದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುವುದರಿಂದ ದೇಶದ ಅಭಿವೃದ್ಧಿ ಖಂಡಿತ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳೆಲ್ಲರೂ ದೇಶಪ್ರೇಮವನ್ನು ಬೆಳೆಸಿಕೊಳ್ಳಿರಿ. ಬೆಳೆಯುತ್ತಿರುವ ತಾಂತ್ರಿಕತೆ , ಆಧುನೀಕರಣತೆಗಳಲ್ಲಿ ಮಾನವ ಸಂಬಂಧಗಳು ದೂರಾಗುತ್ತಿವೆ. ತಂತ್ರಜ್ಞಾನದ ಜೊತೆಗೆ ಹೃದಯ ಶ್ರೀಮಂತಿಕೆಯನ್ನು ಬೆಳೆಸಿಕೊಂಡು ಸಮಾಜಕ್ಕಾಗಿ ಬಾಳುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳೋಣ” ಎಂಬುದಾಗಿ ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮರವರು ದೇಶ್‌ಪಾಂಡೆ ಫೌಂಡೇಶನ್ ವತಿಯಿಂದ ಲೀಡ್ ಪ್ರಯಾಣ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ವಿವಿಧ […]