ಉಡುಪಿ : ತುಳಸಿ ಸಂಕೀರ್ತನೆ ಸಪ್ತಾಹ ಸ್ಪರ್ಧೆ ಉದ್ಘಾಟನೆ

Tuesday, October 15th, 2019
udupi

ಉಡುಪಿ : ಭಕ್ತಿ, ನೃತ್ಯ, ಹಾಡುಗಾರಿಕೆ ಒಳಗೊಂಡಿರುವ ತುಳಸಿ ಸಂಕೀರ್ತನೆ ಕಲೆ ಅಪೂರ್ವವಾದುದು. ನಶಿಸುತ್ತಿರುವ ಈ ಕಲೆಗೆ ಜೀವ ನೀಡುವ ತುಶಿಮಾಮ ಸಂಘಟನೆ ಪ್ರಯತ್ನ ಅಭಿನಂದನೀಯ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದರು. ಮಧ್ವಮಂಟಪದಲ್ಲಿ ಪರ್ಯಾಯ ಪಲಿಮಾರು ಮಠ ಮತ್ತು ತುಳು ಶಿವಳ್ಳಿ ಮಾಧ್ವ ಮಹಾಮಂಡಲ ವತಿಯಿಂದ ಒಂದು ವಾರ ನಡೆಯುವ ತುಳಸಿ ಸಂಕೀರ್ತನೆ ಸಪ್ತಾಹ ಸ್ಪರ್ಧೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ, ಹಿರಿಯ […]

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಪಶ್ಚಿಮ ಜಾಗರ ಪೂಜೆ

Thursday, October 10th, 2019
Udupi

ಉಡುಪಿ : ಕೃಷ್ಣ ಮಠದಲ್ಲಿ ಬೆಳಗ್ಗಿನ ಜಾವ ಸೂರ್ಯೋದಯಕ್ಕೂ ಮುನ್ನ ನಡೆಯುವ ಪಶ್ಚಿಮ ಜಾಗರ ಪೂಜೆ ಆಶ್ವಯುಜ ಮಾಸದ ಶುಕ್ಷಪಕ್ಷದ ಏಕಾದಶಿ ದಿನವಾದ ಬುಧವಾರ ಆರಂಭವಾಗಿದ್ದು, ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ನೆರವೇರಿಸಿದರು. ಕೃಷ್ಣನಿಗೆ ನಿತ್ಯ 14 ಬಗೆಯ ಪೂಜೆಗಳೊಂದಿಗೆ ಬುಧವಾರದಿಂದ ಪಶ್ಚಿಮ ಜಾಗರ (ಜಾಗರಣೆ) ಪೂಜೆ ಸೇರ್ಪಡೆಗೊಂಡಿದ್ದು, ಇನ್ನು ಒಂದು ತಿಂಗಳು ನಿತ್ಯ 15 ಪೂಜೆ ನಡೆದು ಉತ್ಥಾನ ದ್ವಾದಶಿಯಂದು ಸಂಪನ್ನಗೊಳ್ಳಲಿದೆ. ಬೆಳಗ್ಗೆ ನಿರ್ಮಾಲ್ಯ, ಉಷಃಕಾಲ, ಅಕ್ಷಯಪಾತ್ರೆ ಪೂಜೆ, ಪಂಚಾಮೃತ ಅಭಿಷೇಕದ ಬಳಿಕ ಪಶ್ಚಿಮ […]