ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತ

Friday, November 17th, 2023
Sanjeeva-Matandooru

ಪುತ್ತೂರು : ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಆಸ್ಪತ್ರೆಗೆ ದಾಖಲಾದ ಘಟನೆ ಘಟನೆ ನ.16 ರಂದು ರಾತ್ರಿ ನಡೆದಿದೆ. ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರಿಗೆ ಕಡಂಬಳ (ಕಟ್ಟಮಳಕ್ಕರಿ) ಕಡಿದಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವಿನ ಕಡಿತ ತರಚಿದಂತ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ವಾಕಿಂಗ್ ಸಂದರ್ಭ ಅವರ ಜೊತೆಗಿದ್ದ ಹಿರೇಬಂಡಾಡಿ .ಪಂ. ಅಧ್ಯಕ್ಷ ಹಮ್ಮಬ್ಬ […]

ಅಣಬೆ ಪದಾರ್ಥ ತಿಂದು ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲು, ಮಹಿಳೆ ಗಂಭೀರ

Thursday, October 7th, 2021
Anabe

ಪುತ್ತೂರು: ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು (ಬುಧವಾರ) ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಅಣಬೆ ಪದಾರ್ಥ ಸೇವಿಸಿ ಒಂದೇ‌ ಕುಟುಂಬದ 10 ಮಂದಿ ಅಸ್ವಸ್ಥಪಡ್ನೂರು ಕೊಡಂಗೆ ಸಾಂತಪ್ಪ ಅವರ ಪುತ್ರ ರಾಘವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ರಾಘವ ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ […]

ಪಂಚೆಯುಟ್ಟು ಗದ್ದೆಗೆ ಇಳಿದು, ಉಳುಮೆ ಮಾಡಿದ ಪುತ್ತೂರು ಶಾಸಕ

Sunday, July 4th, 2021
Sanjeeva-Matandooru

ಪುತ್ತೂರು: ಕೆಲ ದಿನಗಳ ಹಿಂದೆ ಟ್ರಾಕ್ಟರ್ ಚಲಾಯಿಸಿ ಗದ್ದೆ ಉಳುಮೆಗೆ ಚಾಲನೆ ನೀಡಿ ಗಮನ ಸೆಳೆದಿದ್ದ ಶಾಸಕ ಸಂಜೀವ ಮಠಂದೂರು,   ರವಿವಾರ ಸ್ವತಃ ಗದ್ದೆಗೆ ಇಳಿದು ನೇಗಿಲು ಹಿಡಿದು ಉಳುಮೆ ಮಾಡಿದರು. ಪುತ್ತೂರು ತಾಲೂಕಿನ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲಿರುವ ಗದ್ದೆಯಲ್ಲಿ ಪಂಚೆಯುಟ್ಟು ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದು `ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ’ ಅಭಿಯಾನ ಕ್ಕೆ ಚಾಲನೆ ನೀಡಿದರು. ಆರ್ಯಾಪು ಗ್ರಾಮದ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಹಾಗೂ ಸಂಪ್ಯ ನವಚೇತನಾ ಯುವಕ ಮಂಡಲದ […]

ವಿಟ್ಲ ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಂಜೀವ ಮಠಂದೂರು

Friday, September 11th, 2020
vitla Subregister

ಬಂಟ್ವಾಳ:  ವಿಟ್ಲ ಉಪನೋಂದಣಿ ಕಚೇರಿಗೆ ದಿಢೀರನೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ವಿಟ್ಲ ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ. ಸಾರ್ವಜನಿಕರ ನಿರಂತರ ದೂರಿನ ಹಿನ್ನೆಲೆಯಲ್ಲಿ  ವಿಟ್ಲ ಉಪ ನೋಂದಣಿ  ಕಚೇರಿಗೆ ಭೇಟಿ ನೀಡಿದ ಶಾಸಕರು ಉಪನೋಂದಣಾಧಿಕಾರಿ ಪ್ರೇಮಾ  ಅವರನ್ನು  ನೀವು ಬೆಳಿಗ್ಗೆ 11 ಗಂಟೆಗೆ ಕರ್ತವ್ಯ ಹಾಜರಾಗುತ್ತಿದ್ದೀರಿ, ಪ್ರತಿನಿತ್ಯ ಜನರು ತಮ್ಮ ಕೆಲಸಕ್ಕೆ ಕಾಯಬೇಕು. ಕೆಲವರು ಕೆಲಸ ನಡೆಯದೇ ಹಿಂತಿರುಗುತ್ತಿದ್ದಾರೆ. ಜನರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದೀರಿ ಎಂಬ ದೂರು ಬರುತ್ತಿದೆ. ನಾನು […]

ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಇಂದು ಮಂಗಳೂರಿಗೆ ಆಗಮನ

Thursday, August 29th, 2019
nalin-kumar

ಮಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಂಗಳವಾರ ಬೆಂಗಳೂರಿ ನಲ್ಲಿ ಅಧಿಕಾರ ಸ್ವೀಕರಿಸಿದ ಅನಂತರ ನಳಿನ್‌ ಕುಮಾರ್‌ ಕಟೀಲು ಅವರು ಇದೇ ಮೊದಲ ಬಾರಿಗೆ ಆ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ಸ್ವಾಗತಿಸಲು ದ.ಕ. ಬಿಜೆಪಿ ಸರ್ವ ಸಿದ್ಧತೆ ನಡೆಸಿದೆ. ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ನಳಿನ್‌ ಕುಮಾರ್‌ ಕಟೀಲು ಅವರನ್ನು ದ.ಕ. ಜಿಲ್ಲಾ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸ್ವಾಗತಿಸಿ ವಾಹನಗಳ ಮೆರವಣಿಗೆ ಮೂಲಕ ನಗರಕ್ಕೆ ಕರೆತರಲಿದ್ದಾರೆ. ಸುಮಾರು 500ರಷ್ಟು ವಾಹನಗಳು ಮೆರವಣಿಗೆಯಲ್ಲಿ […]

ನಳಿನ್‌ ಕುಮಾರ್ ಪದಗ್ರಹಣದಲ್ಲಿ ದ.ಕದಿಂದ 2,500ಕ್ಕೂ ಅಧಿಕ ಕಾರ್ಯಕರ್ತರು

Tuesday, August 27th, 2019
nalin-kumar-kateel

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಪದಗ್ರಹಣ ಸಮಾರಂಭವು ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 2,500ಕ್ಕೂ ಅಧಿಕ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ನಳಿನ್‌ ಅವರು ಹಾಲಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಭ್ರಮದಲ್ಲಿ ದಕ್ಷಿಣ ಕನ್ನಡದಿಂದ 2,500ಕ್ಕೂ ಅಧಿಕ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸುತ್ತಿದ್ದಾರೆ. ಸುಮಾರು […]

ದಕ್ಷಿಣ ಕನ್ನಡದಲ್ಲಿ ಯಾರೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಿಲ್ಲ : ಶಾಸಕ ಸಂಜೀವ ಮಠಂದೂರು

Thursday, August 8th, 2019
matandoor

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಿಂದ ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾರನ್ನು ಮಂತ್ರಿ ಮಾಡಿದರೂ, ಅದನ್ನು ಒಂದೇ ರೀತಿಯಲ್ಲಿ ಸ್ವೀಕರಿಸಲಾಗುತ್ತೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಶಾಸಕರಿಂದ ಪತ್ರಿಕಾಗೋಷ್ಠಿಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ದಕ್ಷಿಣ ಕನ್ನಡದಲ್ಲಿ ಯಾರೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಿಲ್ಲ. ಕೇಂದ್ರ ವರಿಷ್ಠರು, ಮುಖ್ಯಮಂತ್ರಿ ಗಳು ಯಾರನ್ನು ಉಸ್ತುವಾರಿ ಸಚಿವ ಮಾಡಿದರೂ ಅದನ್ನು ಸಮಾನವಾಗಿ ಸ್ವೀಕರಿಸುತ್ತೇವೆ ಎಂದರು. […]

ಕಸಾಯಿಖಾನೆ ಯೋಜನೆಗಾಗಿ ಯು.ಟಿ.ಖಾದರ್ 15 ಕೋಟಿ ಲೂಟಿ ಮಾಡಿದ್ದಾರೆ: ಸಂಜೀವ ಮಠಂದೂರು 

Wednesday, October 10th, 2018
Bjp (1) (1)

ಮಂಗಳೂರು: ಕಸಾಯಿಖಾನೆ ವಿವಾದಕ್ಕೆ ಸಂಬಂಧಪಟ್ಟಂತೆ ಶಾಸಕ ಸಂಜೀವ ಮಠಂದೂರು ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಿಂದ ಅರ್ಧದಲ್ಲೇ ಹೊರನಡೆದ ಘಟನೆ ನಡೆದಿದೆ. ಕಸಾಯಿಖಾನೆ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಶಾಸಕ ಸಂಜೀವ ಮಠಂದೂರು, ದ‌.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ 15 ಕೋಟಿ ಲೂಟಿ ಮಾಡುವ ರೀತಿಯಲ್ಲಿ ಕುದ್ರೋಳಿ ಕಸಾಯಿಖಾನೆಗೆ ಅನುದಾನವನ್ನು ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಪ್ರಶ್ನೆಗಳನ್ನು ಕೇಳುತ್ತಿದ್ದಂತೆ ತಬ್ಬಿಬ್ಬಾದ ಶಾಸಕರು ಗೋಷ್ಠಿಯನ್ನು ಅರ್ಧದಲ್ಲಿಯೇ ಮುಗಿಸಿ ಹೊರನಡೆಯಲು ಸಜ್ಜಾದರು. ಆಗ ಪತ್ರಕರ್ತರು ಪ್ರಶ್ನೆಗಳನ್ನು […]

ಸಾರ್ವಜನಿಕರು ರಾಜಕೀಯ ಪ್ರೇರಿತ ಬಂದ್‌ನ್ನು ಬೆಂಬಲಿಸಬಾರದು : ಸಂಜೀವ ಮಠಂದೂರು

Saturday, September 8th, 2018
sanjeeva-matandooru

ಮಂಗಳೂರು  :  ಇಂದನ ಬೆಲೆ ಜಾಗತಿಕ ಮಾರುಕಟ್ಟೆಯ ಆಧಾರದಲ್ಲಿ ಏರಿಳಿತ ಆಗುತ್ತಿರುವುದು ಸಾಮಾನ್ಯ ಜನರಿಗೂ ತಿಳಿದಿರುವ ವಿಚಾರ. ಇಂಧನದ ಬೆಲೆ ಏರಿಕೆ ಆದಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೆರಿಗೆ ಪ್ರಮಾಣವನ್ನು ಏರಿಕೆ ಮಾಡುವುದು ಸಾಮಾನ್ಯ ವಿಚಾರ. ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ರಾಜ್ಯದ ಕಾಂಗ್ರೇಸ್ ಜನತಾ ದಳ ಮೈತ್ರಿ ಸರಕಾರ ಇಂಧನ ಬೆಲೆಯಲ್ಲಿ ಕಳೆದ ಬಾರಿ 2 ರೂ. ಹೆಚ್ಚಿಸಿ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಿದೆ. ಈ ಸಂದರ್ಭದಲ್ಲಿ ಕಣ್ಣು ಮುಚ್ಚಿ ಕುಳಿತ ಕಾಂಗ್ರೇಸ್ […]

ಪುತ್ತೂರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗೆಲುವು

Tuesday, May 15th, 2018
sanjeev-matondar

ಪುತ್ತೂರು: ಕಾಂಗ್ರೆಸ್ ಕೈಯಲ್ಲಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರವನ್ನು ಕಸಿದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಶಕುಂತಳಾ ಶೆಟ್ಟಿಯವರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ವಿರುದ್ಧ ಪರಾಭವಗೊಂಡಿದ್ದಾರೆ.