ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Friday, June 12th, 2020
Madikeri

ಮಂಗಳೂರು :  ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು ಮಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಕಳೆದ 2 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ನೆರೆಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿರುತ್ತದೆ. ರಸ್ತೆಗಳನ್ನು ಮಳೆಹಾನಿ ದುರಸ್ಥಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸಕ್ತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿರುತ್ತದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಡ್ಡುವ ನಿಟ್ಟಿನಲ್ಲಿ ಹಾಗೂ ಭಾರಿ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ರಸ್ತೆಗಳು, ಸಾರ್ವಜನಿಕ […]

ಅಕ್ರಮ ಮರ ಸಾಗಾಟ : ಸಂಪಾಜೆಯಲ್ಲಿ ಮೂವರ ಬಂಧನ

Wednesday, December 4th, 2019
Madikeri

ಮಡಿಕೇರಿ : ಸುಮಾರು 2.50 ಲಕ್ಷ ರೂ. ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಸಂಪಾಜೆ ಅರಣ್ಯ ತನಿಖಾ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೆ.ಎಂ.ಹಂಸ ಎಂಬವರಿಗೆ ಸೇರಿದ ಲಾರಿಯಲ್ಲಿ ಮರವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದ ಪಿ.ಕೆ.ಮಜೀದ್, ಕಲ್ಲುಬಾಣೆಯ ಕೆ.ಕೆ.ಮಜೀದ್ ಹಾಗೂ ನಾಪೋಕ್ಲುವಿನ ಕೆ.ಎಸ್.ಹನೀಫ್ ಅವರನ್ನು ಬಂಧಿಸಿ ಲಾರಿಯಲ್ಲಿದ್ದ ಮರಗಳನ್ನು ವಶಕ್ಕೆ ಪಡೆಯಲಾಯಿತು. ಉಪ […]

ತುಳುನಾಡ ರಕ್ಷಣಾ ವೇದಿಕೆ ಸದಸ್ಯರಿಂದ ಸಂಪಾಜೆ ನಿರಾಶ್ರೀತರಿಗೆ ಅಗತ್ಯ ಸಾಮಾಗ್ರಿ ವಿತರಣೆ

Friday, August 31st, 2018
TRV-sampaje

ಮಂಗಳೂರು : ತುಳುನಾಡ ರಕ್ಷಣಾ ವೇದಿಕೆ ಆಂಬ್ಯುಲೆನ್ಸ್ ಚಾಲಕ ಮಾಲಕರ  ಘಟಕದ ವತಿಯಿಂದ , ಘಟಕದ ಪ್ರಧಾನ ಕಾರ್ಯದರ್ಶಿ ರಾಧಿಕಾರವರ ನೇತ್ರತ್ವದಲ್ಲಿ ಸಂಪಾಜೆ ನಿರಾಶ್ರಿತರ ತಾಣದಲ್ಲಿ ಅಗತ್ಯ ಸಾಮಾಗ್ರಿಗಳಾದ ಬಟ್ಟೆ , ಅಕ್ಕಿ ತರಕಾರಿ ಹಾಗೂ ಇತರ ಸಾಮಾಗ್ರಿಗಳನ್ನು ಗುರುವಾರ ನೀಡಲಾಯಿತು. ಸ್ಥಾಪಕಾದ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, ಶಿವ್ ಶೆಟ್ಟಿ, ಭಾರ್ಗವಿ , ಸುನಿಲ್, ಸುಳ್ಯ ಘಟಕ ದ ಅದ್ಯಕ್ಷರಾದ ಪ್ರಶಾಂತ್ ರೈ ಮರವಂಜ, ಶ್ರೀಮತಿ ಪ್ರವೀಣ  ರೈ, ಮತ್ತಿತರ ತುರವೇ ಪ್ರಮುಖರು ಉಪಸ್ಥಿತರಿದ್ದರು.  

ಸಂಪಾಜೆ ಬಳಿ ಭಾರೀ ಭೂ ಕುಸಿತ..3 ಮನೆ ಧ್ವಂಸ!

Saturday, August 18th, 2018
road

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶ ಸಂಪಾಜೆ ಬಳಿ ಭಾರೀ ಭೂ ಕುಸಿತ ಆಗಿ, 3 ಮನೆಗಳು ಧ್ವಂಸಗೊಂಡಿವೆ. ಮಣ್ಣಿನಡಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇಬ್ಬರು ಮಕ್ಕಳು ಹಾಗೂ ಮಹಿಳೆಯೊಬ್ಬರು ಮಣ್ಣಿನಡಿಗೆ ಸಿಲುಕಿರುವ ಶಂಕೆ ಇದೆ. ಮಣ್ಣಿನಡಿಗೆ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ ಆರಂಭವಾಗಿದೆ. ಸಂಪಾಜೆಯಿಂದ ಮಡಿಕೇರಿಗೆ ಸಾಗುವ ಮಾರ್ಗ ಮದ್ಯದ ಜೋಡುಪಾಲ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಗುರುವಾರ ಸಂಜೆಯಿಂದ ಗುಡ್ಡ ಮೇಲಿನಿಂದಲೇ ಜಾರತೊಡಗಿತ್ತು. ಶುಕ್ರವಾರದಂದು ಏಕಾಏಕಿ ಗುಡ್ಡ ಜರುಗಿದೆ. ಈ ಪರಿಣಾಮ ಮೂರು ಮನೆಗಳು […]

ಸಂಪಾಜೆಯಲ್ಲಿ ಗುಂಡು ಹಾರಿಸಿಕೊಂಡು ವಕೀಲ ಆತ್ಮಹತ್ಯೆ

Monday, December 18th, 2017
advocate

ದಕ್ಷಿಣ ಕನ್ನಡ: ಕೌಟುಂಬಿಕ ಕಲಹದಿಂದ ಬೇಸತ್ತು ವಕೀಲರೊಬ್ಬರು ಪಿಸ್ತೂಲಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟ‌ನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದೆ. ದೇವಿಚರಣ್ (39) ಆತ್ಮಹತ್ಯೆ ಮಾಡಿಕೊಂಡ ವಕೀಲ. ನಿನ್ನೆ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಸಂಪಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.