ಪಂಪ್ವೆಲ್`ನಲ್ಲಿ ನೂತನ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ – ಸಂಸದ ನಳಿನ್

Thursday, May 14th, 2020
pumpwell bus stand

ಮಂಗಳೂರು : ಪಂಪ್ವೆಲ್ ಬಳಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಶರವೇಗದಲ್ಲಿ ಅಭಿವೃದ್ಧಿಯೆಡೆಗೆ ಸಾಗುತ್ತಿರುವ ಮಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ವಾಹನ ದಟ್ಟಣೆಯಿಂದ ನಗರ ಪ್ರದೇಶದಲ್ಲಿ ಜನರು ಸಂಕಷ್ಟಕ್ಕೀಡಾಗುವುದರಿಂದ ಪ್ರತ್ಯೇಕ ಬಸ್ ನಿಲ್ದಾಣ ನಿರ್ಮಿಸುವಂತೆ ಕಳೆದ ಅನೇಕ ವರ್ಷಗಳಿಂದ ಸಾರ್ವಜನಿಕರ ಬೇಡಿಕೆಯಾಗಿತ್ತು‌. ನಮ್ಮ ಸರಕಾರದ ಅವಧಿಯಲ್ಲಿ ಮಂಗಳೂರಿನ ಬಹುದಿನದ ಬೇಡಿಕೆಯನ್ನು ಈಡೇರಿಸಲು ನಿರ್ಧರಿಸಿದಂತೆ ರಾಜ್ಯ ಸರಕಾರ ಕ್ಯಾಬಿನೆಟ್ ನಲ್ಲಿ […]

ವಲಸೆ ಕಾರ್ಮಿಕರ ಪ್ರಯಾಣ: ರೈಲು ವ್ಯವಸ್ಥೆ- ಸಂಸದ ನಳಿನ್

Friday, May 8th, 2020
Nalin Kateel

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ಹೋಗಲು ಅಗತ್ಯ ಇರುವಷ್ಟು ರೈಲುಗಳನ್ನು ಒದಗಿಸಲು ಸಿದ್ಧರಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ ಎಂದು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಈ ಸಂಬಂಧ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ಸಂಬಂಧ ತಾನು ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರೊಂದಿಗೆ ಮಾತನಾಡಿದ್ದು, ಮಂಗಳೂರಿಗೆ […]

ಜಿಲ್ಲೆಯಲ್ಲಿ ಹೈ ಅಲರ್ಟ್- ರಾಂಚಿ ಪ್ರವಾಸ ರದ್ದುಗೊಳಿಸಿದ ಸಂಸದ ನಳಿನ್‌

Saturday, July 7th, 2018
Nalin Kumar

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಭಾರಿ ಮಳೆ ಸುರಿದು ಜೀವ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ ಅವರು ತನ್ನ ರಾಂಚಿ ಪ್ರವಾಸವನ್ನು ಮೊಟಕುಗೊಳಿಸಿ ಶನಿವಾರ ರಾತ್ರಿ ಮಂಗಳೂರಿಗೆ ಮರಳಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಸಮಿತಿಯ ರಾಂಚಿ ಹಾಗೂ ಪಾಟ್ನಾ ಅಧ್ಯಯನ ಪ್ರವಾಸ ಜು.7ರಿಂದ 11ರವರೆಗೆ ನಿಗದಿಯಾಗಿತ್ತು. ಸಂಸದ ನಳಿನ್‌ಕುಮಾರ್ ಕೃಷಿ ಸಮಿತಿಯ ಸದಸ್ಯರಾಗಿದ್ದು ಈ ಅಧ್ಯಯನ ಪ್ರವಾಸಕ್ಕೆ ತೆರಳಿದ್ದರು. ಜಿಲ್ಲೆಯಲ್ಲಿ ಹೈ ಅಲರ್ಟ್ ಸ್ಥಿತಿ ಇರುವುದನ್ನು ಸಮಿತಿಗೆ ಮನವರಿಕೆ ಮಾಡಿರುವ ಸಂಸದರು […]

ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿ ಅಭಿಯಾನ :ಸಂಸದ ನಳಿನ್

Wednesday, October 11th, 2017
mudra yojan

ಮಂಗಳೂರು: ಅ.16ರಂದು ನಗರದ ಪುರಭವನದಲ್ಲಿ ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿಯನ್ನು ನೀಡುವ ಜತೆಗೆ ಕೇಂದ್ರ ಸರಕಾರದ ವಿವಿಧ ಸಾಲ ಸೌಲಭ್ಯಗಳ ಕುರಿತಂತೆ ಮಾಹಿತಿ ಒದಗಿಸುವ ವಿಶೇಷ ಅಭಿಯಾನ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು. ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದ ಕೌಶಲಾಭಿವೃದ್ಧಿ ಸಚಿವ ಅನಂತ ಹೆಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ದ.ಕ. ಜಿಲ್ಲೆಯಲ್ಲಿ ಮುದ್ರಾ ಯೋಜನೆಯಡಿ ಈಗಾಗಲೇ 59,408 ಫಲಾನುಭವಿಗಳಿಗೆ 748.95 ಕೋಟಿ […]

ರಕ್ಷಣಾ ಕ್ರಮಗಳ ಅಳವಡಿಕೆಗೆ ಕ್ರಮಕೈಗೊಳ್ಳುವಂತೆ ಸೂಚನೆ: ಸಂಸದ ನಳಿನ್‌

Tuesday, July 5th, 2016
Z-P Meeting

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಜಾಗದಲ್ಲಿರುವ ಅಕ್ರಮ ಕಟ್ಟಡ ತೆರವುಗೊಳಿಸಲು ತತ್‌ಕ್ಷಣ ಕಾರ್ಯಾಚರಣೆ ಪ್ರಾರಂಭಿಸುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಜರಗಿದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಜಾಗದಲ್ಲಿ ಯಾವುದೇ ಅನಧಿಕೃತ ಕಟ್ಟಡಗಳು, ಅಂಗಡಿಗಳು ನಿರ್ಮಾಣವಾಗದಂತೆ ಇಲಾಖೆಯ ಅಧಿಕಾರಿಗಳು ನಿಗಾವಹಿಸಬೇಕು ಹಾಗೂ ಈಗಾಗಲೇ ಇರುವ ಅಕ್ರಮ ಕಟ್ಟಡಗಳು, ಅಂಗಡಿಗಳನ್ನು ತೆರವುಗೊಳಿಸಲು […]

ಬಲಿಷ್ಟ ಭಾರತದ ನಿರ್ಮಾಣದ ಬಜೆಟ್ : ಸಂಸದ ನಳಿನ್

Thursday, July 10th, 2014
Nalin kumar

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿತ್ವದ, ಅಭಿವೃದ್ಧಿಶೀಲ, ಬಲಿಷ್ಟ ಭಾರತದ ನಿರ್ಮಾಣಕ್ಕೆ ಪೂರಕವಾದ ಬಜೆಟನ್ನು ಸಚಿವ ಅರುಣ್ ಜೆಟ್ಲಿ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಪೂರಕವಾದ ಅಂಶಗಳನ್ನು ಗಮನಿಸಿ, ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ಬಟ್ಟೆಬರೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ವೇತನ ವರ್ಗದವರಿಗೆ ಆದಾಯ ಮಿತಿ 2.50ಲಕ್ಷಗೆ ವಿಸ್ತರಿಸಲಾಗಿದೆ. ಕೃಷಿ ಉತ್ತೇಜನ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಎಲ್ಲಾ ಮನೆಗಳಿಗೆ […]