ವಿಶ್ಚ ಪಾರಂಪರಿಕ ಕೇಂದ್ರ ಅಭಿವೃದ್ಧಿಯ ಪರಿಕಲ್ಪನೆಯಿಂದ ತುಂಬಿದೆ : ಅರವಿಂದ ಲಿಂಬಾವಳಿ

Monday, July 19th, 2021
Limbavali

ಬೆಂಗಳೂರು  : ಬಾನಂದೂರಿನಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ವದರ್ಜೆಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರ ಬಾನಂದೂರಿನ ಜನರು ಹಾಗೂ ಸಾರ್ವಜನಿಕರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಅವರು ಇಂದು ಬಾನಂದೂರಿನಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರ ಜತೆ ಪಾರಂಪರಿಕ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ವಿಶ್ವ ಪಾರಂಪರಿಕ ಕೇಂದ್ರದ ಪರಿಕಲ್ಪನೆಯ ಸಾಕ್ಷ್ಯ ಚಿತ್ರ ವೀಕ್ಷಿಸಿದ ನಂತರ ಮಾತನಾಡಿದರು. […]

ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕ : ಜಿಲ್ಲಾಧಿಕಾರಿ

Friday, November 15th, 2019
Kanakadasa-Jayanthi

ಮಡಿಕೇರಿ :  ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಕನಕದಾಸರ ಸಂದೇಶಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಿ.ದೇವರಾಜು ಅರಸು ಭವನದಲ್ಲಿ ಶುಕ್ರವಾರ ನಡೆದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕನಕದಾಸರು ’ನಾನು ಹೋದರೆ, ಹೋದೇನೂ’ ಎಂಬ ಸಂದೇಶ ಸಾರಿದ್ದಾರೆ. ’ನಾನು’ ಎಂಬುದನ್ನು ಬಿಡಬೇಕು, […]