ಷರತ್ತುಬದ್ಧ ಗಣೇಶೋತ್ಸವಕ್ಕೆ ಅನುಮತಿ: ಸಚಿವ ಆರ್ ಅಶೋಕ

Monday, September 6th, 2021
R Ashoka

ಬೆಂಗಳೂರು :  ಗಣೇಶ ವಿಸರ್ಜನೆಗೆ ಈ ಬಾರಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ವಿಸರ್ಜನೆಯ ಜಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ವಿಸರ್ಜನೆ ಮಾಡುವವರು ವಿಗ್ರಹವನ್ನ ನಿರ್ದಿಷ್ಟ ಸ್ಥಳದಲ್ಲಿ ಇರಿಸಬೇಕು. ಸಂಘಟಕರಿಗೆ ವಿಸರ್ಜನೆಗೆ ಅವಕಾಶ ಇರುವದಿಲ್ಲ. ನುರಿತ ಈಜುಗಾರರನ್ನ ಪಾಲಿಕೆ ವತಿಯಿಂದ ನೇಮಿಸಲಾಗಿದ್ದು, ಅವರೇ ಈ ಕಾರ್ಯವನ್ನು ಕೈಗೊಳ್ಳುತ್ತಾರೆ. ವಿಸರ್ಜನೆಯ ತಂಡದಲ್ಲಿ 20ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳ ಕೂಡದು. ಅದನ್ನ ಎಸಿಪಿ ದರ್ಜೆಯ ಅಧಿಕಾರಿ ಇದರ ನಿಗಾ ವಹಿಸಲಿದ್ದಾರೆ ಎಂದು  ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. “ಗಣೇಶನನ್ನ ಪ್ರತಿಷ್ಠಾಪಿಸಿರುವ […]

ಗಣೇಶೋತ್ಸವಕ್ಕೆ ಹೆಚ್ಚಿನ ವಿನಾಯಿತಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ: ಸಚಿವ ಆರ್ ಅಶೋಕ

Sunday, September 5th, 2021
R Ashoka

ಬೆಂಗಳೂರು  : ಈ ವರ್ಷ ಗಣೇಶೋತ್ಸವ ಆಚರಣೆಗೆ ಸಾಕಷ್ಟು ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,”ಮುಖ್ಯಮಂತ್ರಿಗಳೊಂದಿಗೆ ಗಣೇಶೋತ್ಸವ ಆಚರಣೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಈ ಬಾರಿ ಹೆಚ್ಚಿನ ಸಡಿಲಿಕೆ ಮಾಡಲು ಕೋರಿಕೊಳ್ಳಲಾಗಿದೆ. ಭಾನುವಾರ ಮುಖ್ಯಮಂತ್ರಿಗಳು ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದು, ಕೋವಿಡ್ ನಿಯಮಗಳನ್ನ ಪಾಲಿಸುವುದರ ಜೊತೆಗೆ ಕಳೆದ ವರ್ಷಕ್ಕಿಂತ ಹೆಚ್ಚಿನ ವಿನಾಯಿತಿ ನೀಡಲಾಗುವುದು ಎಂಬ ನಂಬಿಕೆ ನನಗೆಯಿದೆ”, ಎಂದು ತಿಳಿಸಿದರು. […]

ಶಾಲೆಗಳನ್ನು ತೆರೆಯಲು ಎಲ್ಲಾ ಸುರಕ್ಷತೆಗಳನ್ನ ತೆಗೆದುಕೊಳ್ಳಲಾಗಿದೆ: ಆರ್ ಅಶೋಕ

Saturday, August 21st, 2021
R Ashoka

ಬೆಂಗಳೂರು  : ಸರ್ಕಾರ ಆಗಸ್ಟ್ 23ರಿಂದ ಭೌತಿಕವಾಗಿ ಒಂಬತ್ತು ಮತ್ತು ಹತ್ತನೇ ತರಗತಿಗಳನ್ನ ಆರಂಭಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ತಯಾರಿಗಳ ಕುರಿತು ಕಂದಾಯ ಸಚಿವ ಆರ್ ಅಶೋಕ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಸಚಿವರು,”ಬೆಂಗಳೂರಿನಲ್ಲಿ ಬಿಬಿಎಂಪಿ ಶಾಲೆಗಳನ್ನು ತೆರೆಯುತ್ತದೆ. ಶಾಲೆಗಳಿಂದ ಕೋವಿಡ್ ಹರಡದಂತೆ ತಡೆಯಲು ಅಗತ್ಯವಿರುವ ಎಲ್ಲ ತಯಾರಿಗಳನ್ನ ಈಗಾಗಲೇ ಮಾಡಿಕೊಳ್ಳಲಾಗಿದೆ. ಶಾಲಾ ತರಗತಿಗಳಲ್ಲಿ ಮತ್ತು ಆವರಣಗಳಲ್ಲಿ ಕೋವಿಡ್ ನಿಯಮಾವಳಿಗಳನ್ನ ಕಡ್ಡಾಯವಾಗಿ ಪಾಲಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತುಂಬ ಯೋಚಿಸಿ ಈ […]

ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಕಂದಾಯ ಸಚಿವ

Sunday, August 8th, 2021
R Ashoka

ಮಂಗಳೂರು  : ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿಡಲು ಕ್ರೀಡೆಗಳು ಅತ್ಯಗತ್ಯ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಭಾನುವಾರ ಕುಮಾರಸ್ವಾಮಿ ಲೇಔಟ್‌ನ ಕಾರ್ಮೆಲ್ ಶಾಲಾ ಮೈದಾನದಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯುವಕರು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಆಟಗಳಿಗೆ ಆದ್ಯತೆ ನೀಡಬೇಕು ಮತ್ತು ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದರು. ಬಿಎಚ್‌ಸಿಎಸ್ ಲೇಔಟ್‌ನಲ್ಲಿ ಅಳವಡಿಸಿದ ಸಿಸಿಟಿವಿಗಳನ್ನು ಉದ್ಘಾಟಿಸಿದ ಆರ್ ಅಶೋಕ್ ಕಂದಾಯ ಸಚಿವ ಆರ್ ಅಶೋಕ ಭಾನುವಾರ […]

ಪ್ರಾದೇಶಿಕ ಆಯುಕ್ತರ ಕಚೇರಿ ರದ್ದುಗೊಳಿಸಲು ಸರ್ಕಾರ ಚಿಂತನೆ: ಸಚಿವ ಆರ್ ಅಶೋಕ

Thursday, July 8th, 2021
R Ashoka

ಬೆಂಗಳೂರು : “ನಾಲ್ಕು ಪ್ರಾದೇಶಿಕ ಆಯುಕ್ತರ ಹುದ್ದೆಗಳನ್ನು ರದ್ದುಗೊಳಿಸಿ, ಬದಲಿಗೆ ಬೆಂಗಳೂರಿನಲ್ಲಿ ಪ್ರಾದೇಶಿಕ ಆಯುಕ್ತರನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ಚಿಂತನೆ‌ ನಡೆಸಿದೆ”. ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಕಂದಾಯ ಸಚಿವರು, “ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಎಲ್ಲಾ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಪಡಿಸಬಹುದು ಮತ್ತು ಬದಲಿಗೆ ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತರನ್ನು ಸ್ಥಾಪಿಸಬಹುದು ಎಂದು ಶಿಫಾರಸು ಮಾಡಿದೆ. ಪ್ರಾದೇಶಿಕ ಆಯುಕ್ತರ ಕಚೇರಿಗಳು ಬಿಳಿ ಆನೆಗಳಾಗಿ […]

ಕಂದಾಯ ಸಚಿವ ಆರ್ ಅಶೋಕ್ ರಿಂದ ಸಾವಿರಕ್ಕೂ ಹೆಚ್ಚು ದಿನಸಿ ಕಿಟ್ ವಿತರಣೆ

Sunday, July 4th, 2021
Padmanabha nagara

ಬೆಂಗಳೂರು  : “ಕೋವಿಡ್ ನಮಗೆ ಮಾನವೀಯತೆ ಮಹತ್ವ ಎಷ್ಟು ದೊಡ್ಡದು ಎನ್ನುವ ಪಾಠ ಕಲಿಸಿದೆ. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿ ಇರುವವರಿಗೆ ನಾವು ಸಹಾಯ ಮಾಡಬೇಕಿದೆ” ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ಪದ್ಮನಾಭನಗರದ ಕಾರ್ಮೆಲ್ ಸ್ಕೂಲ್ ಆಟದ ಮೈದಾನದಲ್ಲಿ, ಆಟೊ, ಕ್ಯಾಬ್ ಚಾಲಕರು ಮತ್ತು ದಿನಗೂಲಿ ನೌಕರರಿಗೆ ದಿನಸಿ ಕಿಟ್ ವಿತರಿಸಿ, ಮಾತನಾಡಿದ ಸಚಿವರು “ಕೋವಿಡ್ ಸೋಂಕಿತ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಮಗನೇ ನಿರಾಕರಿಸಿದ್ದು, ಎಷ್ಟೋ ಜನರು ಅವರ ಮನೆಯವರ ಶವವನ್ನು ಬಿಟ್ಟುಹೋಗಿದ್ದು ಇಂತಹ […]

ಕೆಂಪೇಗೌಡರ ಕನಸಿನ ಬೆಂಗಳೂರನ್ನ ಸಾಕಾರಗೊಳಿಸಲು ಸರ್ಕಾರ ಬದ್ಧ: ಸಚಿವ ಆರ್ ಅಶೋಕ

Sunday, June 27th, 2021
Kempe Gowda

ಬೆಂಗಳೂರು  : ನಾಡಪ್ರಭು ಕೆಂಪೇಗೌಡ ಅವರ ಬೆಂಗಳೂರಿನ ಕುರಿತು ಹೊಂದಿದ್ದ ಕನಸುಗಳನ್ನು ಸಾಕಾರಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ನಗರಕ್ಕೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಅಗತ್ಯ ಯೋಜನೆಗಳನ್ನು ಜಾರಿ ತರಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಬಾನುವಾರ ಕೆ.ಆರ್‌.ಪುರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 512ನೇ ಜನ್ಮ ಶತಮಾನೋತ್ಸವದಲ್ಲಿ ಪಾಲ್ಗೊಂಡು, ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಡಪ್ರಭು ಕೇಂಪೇಗೌಡರು ಓರ್ವ ದೂರದೃಷ್ಟಿಯ […]

ಸುಲಿಗೆ ಮಾಡುವ ಆ್ಯಂಬುಲೆನ್ಸ್ ಚಾಲಕರ ವಿರುದ್ಧ ಕಠಿಣ ಕ್ರಮ: ಆರ್ ಅಶೋಕ

Sunday, May 30th, 2021
R Ashoka

ಬೆಂಗಳೂರು : ದುಬಾರಿ ಹಣ ವಸೂಲಿ ಮಾಡುವುದು ಗಮನಕ್ಕೆ ಬಂದರೆ ಅಂತಹ ಆ್ಯಂಬುಲೆನ್ಸ್ ಚಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. “ಪ್ರಧಾನಿ ಮೋದಿಯವರ ಆಡಳಿತಕ್ಕೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಕ್ಷೇತ್ರದಲ್ಲಿ ಚಾಲನೆ ನೀಡಿ ಮಾತನಾಡುತ್ತಾ,”ಕೆಲ ಆ್ಯಂಬುಲೆನ್ಸ್ ಚಾಲಕರು ಸೋಂಕಿನಿಂದ ಸಾವನ್ನಪ್ಪಿರುವವರ ಶವ ಸಾಗಿಸಲು, ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲು ಸುಲಿಗೆ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇಂಥಹ ಚಾಲಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ […]

ಸ್ಟಿರಾಯ್ಡ್ ಬಳಕೆಗೆ ಕೆಲ ನಿರ್ಬಂಧನೆಗಳು ಅಗತ್ಯ: ಆರ್ ಅಶೋಕ

Friday, May 21st, 2021
R Ashok

ಬೆಂಗಳೂರು : ಕೋವಿಡ್ ಸೋಂಕಿತರು ಅತೀಯಾದ ಸ್ಟಿರಾಯ್ಡ್ ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಬ್ಲಾಕ್ ಫಂಗಸ್ ಗೆ ತುತ್ತಾಗುವುದಕ್ಕೆ ಇದು ಒಂದು ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಇದರ ಬಳಕೆಗೆ ಸೂಕ್ತ ಕಡಿವಾಣ ಹಾಕಬೇಕಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡ್ರಗ್ಸ್ ಲಾಜಿಸ್ಟಿಕ್ಸ್ ಸೊಸೈಟಿಯಧಿಕಾರಿಗಳ ಜೊತೆಗೆ ಸಚಿವ ಆರ್ ಅಶೋಕ ಅವರು ಕೋವಿಡ್ ಔಷಧಿ ಲಭ್ಯತೆ ಕುರಿತಂತೆ ಪರಾಮರ್ಶೆ ಸಭೆ […]