ಗ್ರಾಮ ಪಂಚಾಯತ್ ಮತ್ತು ನಗರ, ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಲಸಿಕೆ ನೀಡಲು ಸರ್ಕಾರಿ ಆದೇಶ – ಸಚಿವ ಕೋಟ ಹೇಳಿಕೆ

Saturday, June 5th, 2021
kota srinivas poojary

ಮಂಗಳೂರು :  ರಾಜ್ಯದಾದ್ಯಂತ 6020ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮತ್ತು ಇತರ ನಗರ, ಸ್ಥಳೀಯಾಡಳಿತ ಸಂಸ್ಥೆಗಳ ಸುಮಾರು 1ಲಕ್ಷ ಜನಪ್ರತಿನಿಧಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ತುರ್ತು ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ ಮಾಡಿದ […]

ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಕೊರೋನಾಗೆ ಉಚಿತ ಚಿಕಿತ್ಸೆ – ಸಚಿವ ಕೋಟ 

Monday, July 13th, 2020
corona free

ಮಂಗಳೂರು : ಕೊರೋನಾ ಸೋಂಕಿತರಿಗೆ ಜಿಲ್ಲೆಯ ಎಲ್ಲಾ ಖಾಸಗಿ ಮೆಡಿಕಲ್ ಕಾಲೇಜುಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಸೋಮವಾರ ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಹಾಗೂ ಸಾಮಥ್ರ್ಯವನ್ನು ಪರಿಶೀಲಿಸಿ, ಬಳಿಕ ಮಾತನಾಡುತ್ತಾ, ಬಿಪಿಎಲ್, ಎಪಿಎಲ್ ಕುಟುಂಬಗಳು, ವಲಸೆ ಕಾರ್ಮಿಕರು, ರೇಶನ್ ಕಾರ್ಡ್ ಇಲ್ಲದವರು ಸೇರಿದಂತೆ ಎಲ್ಲರಿಗೂ ಜಿಲ್ಲೆಯ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ರೋಗಿಗಳು ಆಸ್ಪತ್ರೆಯಲ್ಲಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತ […]

ಎಸ್.ಎಸ್.ಎಲ್.ಸಿ. ಪರೀಕ್ಷೆ – ವಿದ್ಯಾರ್ಥಿಗಳ ಜವಾಬ್ದಾರಿ ಸರ್ಕಾರದ್ದು: ಸಚಿವ ಕೋಟ 

Monday, June 22nd, 2020
sslc

ಮಂಗಳೂರು : ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯುವುದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಂಡಿದ್ದು  ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಪರಿಕ್ಷೆಗೆ ಹಾಜರಾಗುವ ಪತ್ರಿಯೊಬ್ಬ ವಿದ್ಯಾರ್ಥಿಯ ಜವಬ್ದಾರಿ ಸರ್ಕಾರದ ಮೇಲೆಯಿದ್ದು, ಪೋಷಕರು ಅಂತಕ ಒಳಗಾಗುವುದು ಬೇಡ. ಅವಶ್ಯಕತೆವಿದ್ದಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಲು ಒಂದು ಬಸ್ಸಿನ ವ್ಯವಸ್ಥೆ ಮಾಡಲೂ ಸರಕಾರ ಸಿದ್ದ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನಾ […]

ಗ್ರಾಮ ಮಟ್ಟದಲ್ಲಿ ಕರೋನ ತೊಲಗಿಸಿ. ಪಂಚಾಯತ್ ಅಧ್ಯಕ್ಷರುಗಳಿಗೆ ದಕ್ಷಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಸೂಚನೆ

Wednesday, April 29th, 2020
kota Srinivas

ಮಂಗಳೂರು  : ಪುತ್ತೂರು, ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕಿನ ಆಯ್ದ 30 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರತಿ ಗ್ರಾಮ ಪಂಚಾಯತ್ ಗಳ ಮಟ್ಟದಲ್ಲಿ ಪಂಚಾಯತ್ ಕಾರ್ಯಪಡೆ ಒಂದು ತಂಡವಾಗಿ, ಕರಾರುವಾಕ್ಕಾಗಿ ಕೆಲಸ ಮಾಡಿದ್ದಲ್ಲಿ ಕರೋನದ ಮೂಲೋಚ್ಚಾಟನೆ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆ ಸಂದರ್ಶಿಸುವ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಜೊತೆ, […]

ಲಾಕ್ ಡೌನ್ ನಲ್ಲಿ ವಿನಾಯಿತಿ ಇಲ್ಲ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಸೂಚನೆ

Sunday, April 26th, 2020
Kota Meeting

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕಸಬಾ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೋರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಚಿವರು ಹಾಗೂ ಸಂಸದರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು. ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್ ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ […]

ಕೊರೋನಾ ವಾರಿಯರ್ಸ್ ಗಳ ಮೇಲೆ ಕೈ ಮಾಡಿದರೆ ಗೂಂಡಾ ಕೇಸ್ : ಸಚಿವ ಕೋಟ

Wednesday, April 22nd, 2020
SCDCC-bank-rice

ಮಂಗಳೂರು : ಕೊರೋನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಲ್ಲೆ ಮಾಡಿದವರನ್ನು ಗೂಂಡಾ ಕೇಸ್ ಹಾಕುವ ಮೂಲಕ ಜೈಲಿಗಟ್ಟಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ನೀಡಿರುವ ದಿನಸಿ ಸಾಮಾಗ್ರಿಗಳನ್ನು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಸ್ತಾಂತರ ಮಾಡಿ ಮಾತನಾಡಿದರು. […]

ಬೀಡಿ ಉದ್ಯಮ ಸೋಮವಾರ ಪುನರಾರಂಭ: ಸಚಿವ ಕೋಟ

Saturday, April 18th, 2020
Beedi

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ (ಏ.20) ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀಡಿ ಕಂಪೆನಿಗಳ ಮಾಲೀಕರು, ಬೀಡಿ ಕಾರ್ಮಿಕ ಮುಖಂಡರ ಜತೆ ಸಭೆ ನಡೆಸಿ ಮಾತನಾಡುತ್ತಿದ್ದರು. ದ.ಕ. ಜಿಲ್ಲೆಯಲ್ಲಿ 1.90 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 21 ಸಾವಿರದಷ್ಟು ಬೀಡಿ ಕಾರ್ಮಿಕರಿದ್ದಾರೆ. ಕೋರೋನಾ ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಬಡವರ ಜೀವನಾಧಾರಕ್ಕೆ ಸಮಸ್ಯೆಯಾಗಿರುವುದು ಸರಕಾರದ […]

ಸೌತಡ್ಕ ಗಣಪತಿಯ ಹರಕೆ ಘಂಟೆ ಮಾರಾಟ – ತನಿಖೆಗೆ ಸಚಿವ ಕೋಟ ಆದೇಶ

Monday, April 6th, 2020
Southadka

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕೊಕ್ಕಡ ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ವಿಚಾರದಲ್ಲಿ ಸ್ಥಳೀಯ ಶಾಸಕ ಶ್ರೀ ಹರೀಶ್ ಪೂಂಜರವರ ದೂರಿನಂತೆ, ಇಡೀ ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸಿ, ದೇವಸ್ಥಾನದ ಕಾರ್ಯನಿರ್ವಹಣ ಅಧಿಕಾರಿ ಮೇಲೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು, ರಾಜ್ಯ ಧಾರ್ಮಿಕ ದತ್ತಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇಲಾಖೆಯ ಆಯುಕ್ತರಿಗೆ ನೀಡಿದ ಆದೇಶದಲ್ಲಿ ತಿಳಿಸಿದ್ದು, ಅಗತ್ಯವಿದ್ದಲ್ಲಿ ಕಾರ್ಯನಿರ್ವಹಣಾ ಅಧಿಕಾರಿಯವರನ್ನು ಅಮಾನತು ಮಾಡಿ, ಪಾರದರ್ಶಕ ತನಿಖೆ […]

ದಿನಸಿ ಅಂಗಡಿಯ ಪರವಾನಿಗೆ ಹೊಂದಿರುವವರು ಮಾರ್ಚ್ 31 ರಂದು ಕಡ್ಡಾಯವಾಗಿ ತೆರೆಯಬೇಕು : ಸಚಿವ ಕೋಟ

Monday, March 30th, 2020
Kota Srinivas

ಬಂಟ್ವಾಳ: ಮಾರ್ಚ್ 31ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 3ರ ವರೆಗೆ ತೆರೆಯಲಿದ್ದು, ದಿನಸಿ ಅಂಗಡಿಯ ಪರವಾನಿಗೆ ಹೊಂದಿರುವವರು ಕಡ್ಡಾಯವಾಗಿ ಅಂಗಡಿಯನ್ನು ತೆರೆಯಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಬಂಟ್ವಾಳ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ಅಂಗಡಿಗಳ ಮುಂದೆ ಮಾರ್ಕಿಂಗ್ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದು, ವಿಎ, ಗ್ರಾಮ ಸಹಾಯಕರು, ಪಿಡಿಒ, ಟಾಸ್ಕ್ ಫೋರ್ಸ್ ಸಮಿತಿಯವರು ಅದನ್ನು ನೋಡಿಕೊಳ್ಳಬೇಕಿದೆ. ಜತೆಗೆ ತಮ್ಮ ಅಂಗಡಿಗಳನ್ನು ವಸ್ತುಗಳನ್ನು ದಾಸ್ತಾನು ಇರಿಸಲು ಸೂಚನೆ ನೀಡಲಾಗಿದೆ. ದಿನಗೂಲಿ […]