ಬಸವರಾಜ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟದ ಖಾತೆಗಳ ವಿವರ ಇಲ್ಲಿದೆ ನೋಡಿ

Saturday, August 7th, 2021
Basavaraja Bommai

ಬೆಂಗಳೂರು :   ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಮೊದಲ ಬಾರಿಗೆ ರಾಜ್ಯ ಸಂಪುಟದಲ್ಲಿ ಸ್ಥಾನ ಪಡೆದಿರುವ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ನೀಡಲಾಗಿದೆ. ಸಚಿವ ಸಂಪುಟ […]

ನಾಳೆ (ಏಪ್ರಿಲ್ 27) ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್

Monday, April 26th, 2021
yedyurappa

ಬೆಂಗಳೂರು: ಕೊರೊನಾ 2 ನೇ ಅಲೆ ವ್ಯಾಪಿಸುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಮತ್ತಷ್ಟು ಬಿಗಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಏಪ್ರಿಲ್ 27 ರಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಇರಲಿದೆ,   15 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. […]

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ 7 ಹೊಸ ಮಂತ್ರಿಗಳೊಂದಿಗೆ ವಿಸ್ತರಣೆ

Wednesday, January 13th, 2021
BSY Cabinate

ಬೆಂಗಳೂರು  : ರಾಜಭವನದಲ್ಲಿ ಬುಧವಾರದಂದು 7 ಮಂದಿ ಶಾಸಕರಿಗೆ ರಾಜ್ಯಪಾಲ ವಜುಭಾಯಿವಾಲ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಏಳು ಮಂದಿ ಶಾಸಕರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ಸೇರಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ಮಧ್ಯಾಹ್ನ 3.50 ಕ್ಕೆ ಪದ ಗ್ರಹಣ ನಡೆಯಿತು. ಎಲ್ಲರೂ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಕ್ರಮವಾಗಿ ಉಮೇಶ ಕತ್ತಿ, ಮುರುಗೇಶ ನಿರಾಣಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್‌, […]

ಇಂದು ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ

Monday, January 20th, 2020
jp nadda

ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ. ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ ಗುರುತಿಸಲ್ಪಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೇ ನಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಮಾಪ್ತರಾಗಿದ್ದಾರೆ. ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಕಳೆದ ಲೋಕಸಭಾ ಚುನಾವಣೆಯ ಬಳಿಕ ಪ್ರಧಾನಿ […]

ಯಡಿಯೂರಪ್ಪನವರು ಸಚಿವ ಸಂಪುಟದಲ್ಲಿ ಕರಾವಳಿಗೆ ಮೂರು ಸಚಿವ ಸ್ಥಾನ

Tuesday, July 30th, 2019
bsy

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಸಚಿವ ಸಂಪುಟದಲ್ಲಿ ಕರಾವಳಿಗೆ ಎರಡು ಸಚಿವ ಸ್ಥಾನ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹುದ್ದೆ ಲಭ್ಯವಾಗುವ ಸಾಧ್ಯತೆ  ಇದೆ ಎಂದು ಹೇಳಲಾಗಿದೆ. ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಶಾಸಕ ಅಂಗಾರ , ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಸುನಿಲ್‌ ಕುಮಾರ್‌ ಅವರ ಹೆಸರು ಮುಂಚೂಣಿಯಲ್ಲಿವೆ.  ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಳಿ ಚರ್ಚಿಸಿದ ಬಳಿಕ ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ಅಗ್ರಪಂಕ್ತಿಯ ನಾಯಕರಿಗೆ, ಪ್ರಾದೇಶಿಕ ಮತ್ತು […]

ಲೋಕಾ ವ್ಯಾಪ್ತಿಗೆ ಮುಖ್ಯಮಂತ್ರಿ ಸಂಪುಟ ಸದಸ್ಯರು

Saturday, February 22nd, 2014
Siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೋಕಪಾಲ ಕಾಯಿದೆ ಹಿನ್ನೆಲೆಯಲ್ಲಿ ರಾಜ್ಯದ ಲೋಕಾಯುಕ್ತ ಕಾಯ್ದೆಯನ್ನು ಬಲಪಡಿಸುವ ವಿಧೇಯಕವನ್ನು ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಮಹತ್ವದ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಹೊಸ ಕಾನೂನಿನ ಪ್ರಕಾರ ಮುಖ್ಯಮಂತ್ರಿ ಕಚೇರಿಯನ್ನೂ ಲೋಕಾಯುಕ್ತ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ, ಸಂಪುಟದ ಇತರೆ ಎಲ್ಲ ಸದಸ್ಯರು, ಮುಖ್ಯ ಕಾರ್ಯದರ್ಶಿಯನ್ನು […]

ಸಿದ್ದರಾಮಯ್ಯ ಸಚಿವ ಸಂಪುಟ, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ರಿಂದ ಪ್ರಮಾಣ ವಚನ ಸ್ವೀಕಾರ

Saturday, May 18th, 2013
Ministers

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಚನೆಯಾದ, 28 ಸಚಿವರನ್ನೊಳಗೊಂಡ ಸಚಿವ ಸಂಪುಟ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗ ಹೀಗೆ ಎಲ್ಲಾ ಸಮುದಾಯಗಳಿಗೂ ಸಾಮಜಿಕ ನ್ಯಾಯವನ್ನು ಒದಗಿಸಿದ್ದಾರೆ.  ಬೆಳಗ್ಗೆ 10.30 ಕ್ಕೆ ಸರಿಯಾಗಿ ರಾಜ್ಯಪಾಲರ ರಾಜಭವನದ ಗಾಜಿನ ಮನೆಯಲ್ಲಿ ಹಲವು ಗಣ್ಯರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ರವರು […]