ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, July 29th, 2021
Bommai

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ […]

ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

Thursday, February 11th, 2021
jagadeesha Adhikari

ಪುತ್ತೂರು: ತನನ್ನ ಮಾತಿನಲ್ಲಿ ತಪ್ಪಾಗಿದೆ ಎಂಬುವುದು ನನಗೆ ಅರಿವಾಗಿದೆ. ತನ್ನ ತಪ್ಪನ್ನು ಮನ್ನಿಸುವಂತಹ ಅನುಗ್ರಹವನ್ನು ಕರುಣಿಸಬೇಕೆಂದು ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರು ಕೋಟಿ-ಚೆನ್ನಯ್ಯರ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚಿಸಿದ್ದಾರೆ. ಪಡುಮಲೆಯಲ್ಲಿರುವ ಕೋಟಿ ಚೆನ್ನಯ್ಯರ ಮೂಲಕ್ಷೇತ್ರದಲ್ಲಿ ದೇಯಿ ಬೈದೆತಿ ಅವರ ಸಮಾಧಿ ಸ್ಥಳದಲ್ಲಿ ಕೈ ಕಾಣಿಕೆ ಒಪ್ಪಿಸಿ, ಕುವೆತೋಟದಲ್ಲಿ ಸುವರ್ಣಕೇದಗೆ ದೇಯಿ ಬೈದೆತಿಗೆ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ತನ್ನ ಹೇಳಿಕೆಯಿಂದ ಬಿಲ್ಲವ ಸಮುದಾಯಕ್ಕೆ ನೋವಾಗಿದೆ. ಈ ಹಿನ್ನೆಲೆಯಲ್ಲಿ ತಾನು ಪಡುಮಲೆಯ ಮೂಲಕ್ಷೇತ್ರಕ್ಕೆ ಬಂದು ಕ್ಷಮೆಯಾಚನೆ […]

ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿ, ಬಂಟ್ವಾಳದ ಅರ್ಚಕ ನಾಪತ್ತೆ

Thursday, August 6th, 2020
Archak

ಬಂಟ್ವಾಳ: ಕೊಡಗು ಜಿಲ್ಲೆಯ ತಲಕಾವೇರಿ ಭಾಗದಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ನಾಲ್ವರಲ್ಲಿ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ ಎಂಬ ಮಾಹಿತಿ ಇದೀಗ ಲಭಿಸಿದೆ. ಬಂಟ್ವಾಳ ಮೂಲದ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರವಿಕಿರಣ್ ಈ ದುರಂತದಲ್ಲಿ ನಾಪತ್ತೆಯಾಗಿರಬಹುದೆಂದು ಇದೀಗ ಶಂಕಿಸಲಾಗುತ್ತಿದೆ. 24 ವರ್ಷದ ರವಿಕಿರಣ್ ಅವರು ರಾಮಕೃಷ್ಣ ಮತ್ತು ರೇಣುಕಾ ಭಟ್ (ಅಪ್ಪು ಭಟ್) ದಂಪತಿಯ ಪುತ್ರನಾಗಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಊರಿನಲ್ಲೇ ಇದ್ದ ರವಿಕಿರಣ್ ಅವರು ಬಳಿಕ […]

ಕೊಲ್ಲೂರಿನಲ್ಲಿ ಬೃಹತ್ ಶಿಲಾಯುಗದ ನಿವೇಶನ ಪತ್ತೆ

Sunday, July 19th, 2020
menhir

ಉಡುಪಿ  : ಭಾರತದ ಪ್ರಖ್ಯಾತ ಶಾಕ್ತ ಆರಾಧನಾ ಕೇಂದ್ರವಾದ ಕೊಲ್ಲೂರಿನ ಮೂಕಾಂಬಿಕೆಯ ದೇವಾಲಯಕ್ಕೆ ಸಮೀಪದಲ್ಲಿರುವ ಮೂಕಾಸುರನ ಬೆಟ್ಟದ ಬುಡದಲ್ಲಿ, ಬೃಹತ್ ಶಿಲಾಯುಗ ಕಾಲದ ನಿಲ್ಸ್‌ಕಲ್ ಸ್ಮಾರಕಶಿಲೆ, ಕಲ್ಗುಳಿ, ಮುರಕಲ್ಲಿನಲ್ಲಿ ಕೊರೆದು ಮಾಡಿರುವ ಬಾವಿ ಮತ್ತು ಮಡಕೆಯ ಅವಶೇಷಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷನೆಯಲ್ಲಿ ಪತ್ತೆಯಾಗಿವೆ, ಎಂದು ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿಯವರು ತಿಳಿಸಿರುತ್ತಾರೆ. ಕೊಲ್ಲೂರಿನ ಬೃಹತ್ ಶಿಲಾಯುಗ ನಿವೇಶನದ ಶೋಧ, ಕೊಲ್ಲೂರು ಮತ್ತು ಕೊಲ್ಲೂರಿನ ಮೂಕಾಂಬಿಕೆಯ ಪ್ರಾಚೀನತೆಯನ್ನು ಸುಮಾರು ಕ್ರಿ.ಪೂ. 1000 […]