ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ : ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ

Thursday, February 13th, 2020
ujire

ಉಜಿರೆ : ಭಾರತದ ಆದ್ಯಾತ್ಮಿಕತೆ, ಸಂಸ್ಕೃತಿ-ಸಂಸ್ಕಾರ ಹಾಗೂ ಕುಟುಂಬ ಜೀವನ ಪದ್ಧತಿ ವಿಶ್ವಕ್ಕೆ ಮಾದರಿಯಾಗಿದೆ. ಮನೆಯಲ್ಲಿ ಸ್ವರ್ಗ-ನರಕಎರಡೂಇದೆ. ಗಂಡ-ಹೆಂಡತಿ ಹಾಗೂ ಕುಟುಂಬದ ಸದಸ್ಯರೆಲ್ಲರೂ ಪರಸ್ಪರ ಪ್ರೀತಿ-ವಿಶ್ವಾಸದಿಂದ ಅನ್ಯೋನ್ಯತೆಯಿಂದ ಸೌಹಾರ್ದಯುತ ಜೀವನ ನಡೆಸಿದರೆ ಮನೆಯಲ್ಲೆ ಸ್ವರ್ಗ ಸುಖ ಅನುಭವಿಸಬಹುದು.ಆಗ ಮನೆಯೇ ಮಂತ್ರಾಲಯವಾಗುತ್ತದೆ. ಮನಸೇ ದೇವಾಲಯವಾಗುತ್ತದೆ.ಪರಸ್ಪರ ಅನ್ಯೋನ್ಯತೆ, ಹೊದಾಣಿಕೆ ಹಾಗೂ ಪ್ರೀತಿ-ವಿಶ್ವಾಸಇಲ್ಲವಾದಲ್ಲಿ ಮನೆಯೇ ನರಕ ಸದೃಶವಾಗುತ್ತದೆಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಅನ್ನಾಸಾಹೇಬ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿಸಭಾಭವನದಲ್ಲಿ ಅಖಿಲ ಕರ್ನಾಟಕಜನಜಾಗೃತಿ ವೇದಿಕೆ ಆಶ್ರಯದಲ್ಲಿ […]

ಮೂಡುಬಿದಿರೆಯಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಉದ್ಘಾಟಿಸಿದ ಕೋಟ ಶ್ರೀನಿವಾಸ ಪೂಜಾರಿ

Thursday, October 3rd, 2019
moodbidri

ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ-ಮೂಡುಬಿದಿರೆ ವತಿಯಿಂದ 150ನೇ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂಡುಬಿದಿರೆಯಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶ ಬುಧವಾರ ಜರಗಿತು. ಪದ್ಮಾವತಿ ಕಲಾಮಂದಿರದಲ್ಲಿ ನಡೆದ ಸಮಾವೇಶವನ್ನು ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜವನ್ನು ವ್ಯಸನಮುಕ್ತ, ಪರಿಶ್ರಮಶೀಲ, ಅಭಿವೃದ್ಧಿಯ ಮಾರ್ಗದಲ್ಲಿ ಮುನ್ನಡೆಸುವಲ್ಲಿ ಸರಕಾರಕ್ಕೆ ಮಾರ್ಗದರ್ಶನ ನೀಡುವ ಮಟ್ಟಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಬೆಳೆದು ನಿಂತಿದೆ. ಗಾಂಧೀ […]

ಸೌತ್ ಕೆನರಾ ಬೀಡಿ ವರ್ಕ್ಸ್ ಫೆಡರೇಶನ್‌ನ 5ನೆ ದ.ಕ. ಜಿಲ್ಲಾ ಸಮಾವೇಶ

Tuesday, June 6th, 2017
sk beedies

ಮಂಗಳೂರು : ನಾಶದ ಅಂಚಿನಲ್ಲಿರುವ ಬೀಡಿ ಉದ್ಯಮಕ್ಕೆ ಬದಲಿ ವ್ಯವಸ್ಥೆಗಾಗಿ ಪ್ರಬಲ ಹೋರಾಟವನ್ನು ರೂಪಿಸುವ ಅಗತ್ಯವಿದೆ,  ಕಾರ್ಮಿಕ ಚಳವಳಿಗೆ ಶಕ್ತಿ ತುಂಬಿರುವ ಬೀಡಿ ಹೋರಾಟಗಾರರು ಇದೀಗ  ಕಷ್ಟದಲ್ಲಿದ್ದಾರೆ ಎಂದು ರೈತ ಹಾಗೂ ಕಾರ್ಮಿಕ ಮುಖಂಡ, ಸಿಪಿಎಂ ನೇತಾರ ಕೆ.ಆರ್. ಶ್ರೀಯಾನ್ ಕರೆ ನೀಡಿದ್ದಾರೆ. ನಗರದ ಎನ್‌ಜಿಒ ಸಭಾಂಗಣದ ಪ್ರಸನ್ನ ಕುಮಾರ್ ವೇದಿಕೆಯಲ್ಲಿ ಸಿಐಟಿಯು ವತಿಯಿಂದ ಆಯೋಜಿಸಲಾದ ಸೌತ್ ಕೆನರಾ ಬೀಡಿ ವರ್ಕ್ಸ್ ಫೆಡರೇಶನ್‌ನ 5ನೆ ದ.ಕ. ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೀಡಿ ಉದ್ಯಮವನ್ನೇ ನಿಷೇಧಿಸುವ […]

ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶ

Friday, February 3rd, 2012
Odiyooru Swamiji

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶವನ್ನು ಆರೆಸ್ಸೆಸ್‌ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್‌ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಗುರುವಾರ ಉದ್ಘಾಟಿಸಿದರು. ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯರು ಆಶೀರ್ವಚನ ನೀಡಿದರು. ಸಂಸ್ಕಾರ ಮತ್ತು ಕರ್ಮಬಂಧಗಳಿಲ್ಲದ ಭಾವನೆಗಳು ಕೆಟ್ಟ ದಾರಿಯಲ್ಲಿ ಸಾಗುತ್ತದೆ. ಇವೆರಡನ್ನೂ ಬೆಸೆಯುವ ಮತ್ತು ಸಮಾಜದ ಋಣವನ್ನು ತೀರಿಸುವ ಉದ್ದೇಶದಿಂದ ಶ್ರೀ ಗುರುದೇವ ಬಂಧುಗಳ ಸಮಾವೇಶ ಸಂಘಟಿಸಲಾಗಿದೆ ಎಂದು ಅವರು ಹೇಳಿದರು. ದಾನ ಧರ್ಮ ಸತ್ಕರ್ಮಗಳಿಂದ ಮಾನವ […]