ರಸ್ತೆ ಅಭಿವೃದ್ಧಿಯ ಕೆಲಸದ ಹೆಸರಿನಲ್ಲಿ ನೆಲಕ್ಕುರುಳಿದ ಸಾರ್ವಜನಿಕ ರಂಗಮಂದಿರ

Friday, May 7th, 2021
Rangamandhira

ಬಂಟ್ವಾಳ: ಸುಮಾರು 38 ವರ್ಷಗಳ ಕಾಲ ಬಿ.ಸಿ.ರೋಡಿನ ಸಾಂಸ್ಕೃತಿಕ ಚಟುವಟಿಕೆಯಷ್ಟೇ ಅಲ್ಲ, ರಾಜಕೀಯ, ವೈಚಾರಿಕ, ರಂಗಭೂಮಿ ಚಟುವಟಿಕೆಗಳಿಗೆ ಇದ್ದ ಏಕೈಕ ವೇದಿಕೆ ಸಾರ್ವಜನಿಕ ರಂಗಮಂದಿರ ನೆಲಕ್ಕುರುಳಿದೆ. 2017ರಲ್ಲಿ ನಿರ್ಮಾಣಗೊಂಡ ಬಿ.ಸಿ. ರೋಡಿನ ಮಿನಿ ವಿಧಾನಸೌಧದ ಎದುರು ಇರುವ ಈ ಕಟ್ಟಡದಲ್ಲಿ ಅಂದಿನಿಂದ ಚಟುವಟಿಕೆಗಳು ನಿಂತಿದ್ದವು. ಅದನ್ನು ತೆರವುಗೊಳಿಸುವ ಕುರಿತು ಆಗಾಗ್ಗೆ ಮಾತುಗಳು ಕೇಳಿಬರುತ್ತಿದ್ದವು. ಇದೀಗ 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಶಿಥಿಲವಾಗಿರುವ ಈ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಗುರುವಾರ ಆರಂಭಗೊಂಡಿದೆ. ‘ […]

ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

Monday, March 15th, 2021
Beary Invitation

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮೇಲ್ತೆನೆ (ಬ್ಯಾರಿ ಎಲ್ತ್‌ಕಾರ್ ಪಿನ್ನೆ ಕಲಾವಿದಮ್ಮಾರೊ ಕೂಟ, ದೇರಳಕಟ್ಟೆ)ಯ ಸಹಕಾರದಲ್ಲಿ ಮಾ.27ರಂದು ಉಳ್ಳಾಲ ಅಳೇಕಲದ ಮದನಿ ಪಿಯು ಕಾಲೇಜಿನಲ್ಲಿ ನಡೆಯಲಿರುವ ಉಳ್ಳಾಲ ತಾಲೂಕು ಪ್ರಥಮ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಆಮಂತ್ರಣ ಪತ್ರವನ್ನು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಡಾ.ಕೆ.ಎಂ.ಮುನೀರ್ ಬಾವಾ ಸೋಮವಾರ ಅಕಾಡಮಿಯ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಉಳ್ಳಾಲ ತಾಲೂಕು ಘೋಷಣೆಯಾದ ಬಳಿಕ ನಡೆಯುವ ಪ್ರಪ್ರಥಮ ಬ್ಯಾರಿ ಸಾಹಿತ್ಯ ಸಮ್ಮೇಳನ ಇದಾಗಿದೆ. […]

ಕನ್ನಡದ ಶಕ್ತಿಯ ಪ್ರತೀಕ ಪಾಟೀಲ ಪುಟ್ಟಪ್ಪ : ಕಲ್ಕೂರ

Wednesday, March 18th, 2020
puttapppa

ಮಂಗಳೂರು : ಕನ್ನಡ ಸಾರಸ್ವತ ಲೋಕದ ಹಿರಿಯ ಸಾಹಿತಿ, ಹುಟ್ಟು ಹೋರಾಟಗಾರ, ಶತಾಯುಷಿ ಪಾಟೀಲ ಪುಟ್ಟಪ್ಪನವರು ಕನ್ನಡದ ಶಕ್ತಿಯ ಪ್ರತೀಕಎಂದು ದ.ಕ.ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯ ಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಕೊಂಡಾಡಿದ್ದಾರೆ. ಇತ್ತೀಚೆಗೆ ನಿಧನರಾದ ಪಾಪು ಅವರು ಕಳೆದ ಅನೇಕ ದಶಕಗಳಿಂದ ಕನ್ನಡಪರ ಹೋರಾಟಗಾರನಾಗಿ ಮುಂಚೂಣಿಯಲ್ಲಿದ್ದರು. ಮಾತ್ರವಲ್ಲ, ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಭೂಮಿಕೆಗೆ ಮಾರ್ಗದರ್ಶಕರಾಗಿದ್ದರು .ದಕ್ಷಿಣಕನ್ನಡದ ಜೊತೆಗಿನ ಗಾಢವಾದ ಅವರ ನಂಟನ್ನು ಸ್ಮರಿಸಿರುವ ಕಲ್ಕೂರ ಅನೇಕ ಬಾರಿ ಮಂಗಳೂರಿಗೆ ಬಂದಾಗಲೆಲ್ಲಾ ತಮ್ಮಲ್ಲಿ ಊಟೋಪಚಾರ, ಅತಿಥ್ಯ […]

ಕ್ರೀಡಾಕೂಟಕ್ಕೆ ಸಾಂಸ್ಕೃತಿಕ ಮೆರಗು ವಿಜಯ ವೇದಿಕೆಯಲ್ಲಿ ಫತೇ ಬ್ಯಾಂಡ್ ವಿಶೇಷ

Saturday, January 4th, 2020
alvas

ಮೂಡುಬಿದಿರೆ: 80ನೇ ಅಖಿಲಭಾರತ ವಿಶ್ವವಿದ್ಯಾಲಯದ ಕ್ರೀಡಾಕೂಟದ ಎರಡನೇ ದಿನವಾದ ಶುಕ್ರವಾರ ಮೊದಲನೇ ದಿನ ಹಾಗೂ ಎರಡನೇ ದಿನದಂದು ವಿಜೇತರಾದ ಕ್ರೀಡಾರ್ಥಿಗಳಿಗೆ ವಿಜಯ ವೇದಿಕೆಯಲ್ಲಿ ಪದಕ ಪ್ರದಾನಿಸಿ ಗೌರವಿಸಲಾಯಿತು. ವಿಜೇತ ಕ್ರೀಡಾಪಟುಗಳಿಗೆ ಮಾಜಿ ಸಚಿವ ಅಭಯಚಂದ್ರ ಜೈನ್, ಮೂಡುಬಿದಿರೆ ಪಂಡಿತ್ ರೆಸಾರ್ಟ್ ಮಾಲೀಕ ಲಾಲ್ ಗೋಯಲ್ ಹಾಗೂ ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್‌ನ ಸಂಘಟನಾ ಕಾರ್ಯದರ್ಶಿ ಬಾಬುಶೆಟ್ಟಿ ಸೇರಿದಂತೆ ಗಣ್ಯರು ಪದಕ ವಿತರಿಸಿದರು. ವಿಜೇತರಿಗೆ ಹಾಗೂ ನೂತನ ಕೂಟ ದಾಖಲೆ ಮಾಡಿದ ವಿದ್ಯಾರ್ಥಿಗಳಿಗೆ ನಗದು ನೀಡಿ ಪುರಸ್ಕರಿಸಲಾಯಿತು. ವಿಜಯವೇದಿಕೆಯಲ್ಲಿ ಗಮನ […]

ಶ್ರೀಕೃಷ್ಣ ವಿಠ್ಹಲ ಪ್ರತಿಷ್ಠಾನ ಮುಂಬಯಿ ಇದರ 22 ನೇ ವರ್ಷದ ಧಾರ್ಮಿಕ, ಸಾಂಸ್ಕೃತಿಕ ಉತ್ಸವ

Monday, December 23rd, 2019
Mumbai

ಮುಂಬಯಿ : ಆರಂಭದಲ್ಲಿ ಪ್ರತಿಷ್ಠಾನ ಸ್ಥಾಪನೆಯಾದಾಗ ಜನರಿಗೆ ಪ್ರಯೋಜನಕಾರಿಯಾಗಲು ನಾಲ್ಕು ವಿವಿಧ ಯೋಜನೆಗಳನ್ನು ನಾವು ಹಮ್ಮಿಕೊಂಡಿದ್ದೆವು. ಶಾಲಾ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಧಾರ್ಮಿಕ ಪ್ರಜ್ನೆ ಮೂಡಿಸಲು ಹರಿಕಥಾ ಸಪ್ತಾಹ, ಧರ್ಮ ಜಾಗೃತಿಗೊಳಿಸಲು ಯಾಗ ಮುಂತಾದವುಗಳು ಕಳೆದ 22 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿದೆ. ಇದು ನಮ್ಮ ಸಂಸ್ಥೆಯ ಪದಾ ಧಿಕಾರಿಗಳ ಪರಿಶ್ರಮ ಹಾಗೂ ದಾನಿಗಳ ಸಹಕಾರದಿಂದ ಸಾಧ್ಯ ಎಂದು ಶ್ರೀಕೃಷ್ಣ ವಿಠ್ಹಲ ಪ್ರತಿಷ್ಠಾನ ಮುಂಬಯಿ ಇದರ ಸಂಸ್ಥಾಪಕ ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಇವರು ತಿಳಿಸಿದರು. ಶ್ರೀಕೃಷ್ಣ […]

ಮಂಗಳೂರು : ಪ್ರತಿ ಗ್ರಾಮದ ವಿಶೇಷತೆಯ ಮಾಹಿತಿ ಕ್ರೋಢೀಕರಣಕ್ಕೆ ಕ್ರಮ; ಸಚಿವ ಸಿ.ಟಿ.ರವಿ

Monday, September 30th, 2019
CT Ravi

ಮಂಗಳೂರು : ರಾಜ್ಯದ ಪ್ರತಿ ಗ್ರಾಮದ ಇತಿಹಾಸ, ಭೌಗೋಳಿಕ, ಸಾಂಸ್ಕೃತಿಕ, ಜಾನಪದ ಹೀಗೆ ವಿವಿಧ ಅಂಶಗಳನ್ನೊಳಗೊಂಡಂತೆ ಗ್ರಾಮದ ವಿಶೇಷತೆಯ ಮಾಹಿತಿಯನ್ನು ಕ್ರೋಢೀಕರಿಸಿ ಅವುಗಳನ್ನು ವಿಕಿಪೀಡಿಯಾ ಮಾದರಿಯಲ್ಲಿ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, 2020ರ ಡಿಸೆಂಬರ್ ನೊಳಗೆ ಸರ್ಕಾರ ಈ ಪರಿಕಲ್ಪನೆಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದ್ದು, ಇದ್ಕಕಾಗಿ ಪ್ರತಿ ಗ್ರಾಮದ ಮಾಹಿತಿಯನ್ನು […]