ರೈತರ ಮತ್ತು ನೇಕಾರ ಸಾಲಮನ್ನಾ ವಿಚಾರದಲ್ಲಿ ಸಿ.ಎಂ ಬಳಿ ಚರ್ಚಿಸಲಾಗುವುದು : ಸಚಿವ ಬಿ.ಶ್ರೀರಾಮುಲು

Wednesday, October 16th, 2019
sri-ramulu

ಬಳ್ಳಾರಿ : ನೆರೆ ಹಾವಳಿಯಿಂದಾಗಿ ರೈತರು ಮತ್ತು ನೇಕಾರರಿಂದ ಸಾಲಮನ್ನಾ ಮಾಡುವಂತೆ ಒತ್ತಾಯ ಬರುತ್ತಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಬಳಿ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲಮನ್ನಾ ವಿಚಾರದಲ್ಲಿ ಗೊಂದಲ ಇದೆ. ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೂ ಸ್ಪಷ್ಟತೆ ಇರಲಿಲ್ಲ. ಹಾಗಾಗಿ ಈ ಬಗ್ಗೆ ನಾಳೆ ನಾಡಿದ್ದು ಸಿಎಂ ಬಳಿ ಕೂಲಂಕುಷವಾಗಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಐತಿಹಾಸಿಕ […]

ಬಜೆಟ್​ನಲ್ಲಿ ಸಾಲಮನ್ನಾ ಘೋಷಣೆ ಮಾಡಲೇಬೇಕು..ಇಲ್ಲವಾದಲ್ಲಿ ಉಗ್ರ ಹೋರಾಟ: ಕೆ.ಎಸ್ ಈಶ್ವರಪ್ಪ

Wednesday, July 4th, 2018
eshwarappa

ಬೆಂಗಳೂರು: ಬಜೆಟ್ನಲ್ಲಿ ಸಾಲಮನ್ನಾ ಘೋಷಣೆ ಮಾಡಲೇಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮುಂದುವರೆಯುತ್ತದೆ. ಬಳಿಕ ಸಿಎಂ ಏನು ಉತ್ತರ ನೀಡಲಿದ್ದಾರೆ ಎಂದು ನೋಡುತ್ತೇವೆ. ಬಜೆಟ್ನಲ್ಲಿ ಸಾಲಮನ್ನಾ ಘೋಷಣೆ ಮಾಡಲೇಬೇಕು, ಇಲ್ಲವಾದಲ್ಲಿ ಬಿಜೆಪಿ ರಾಜ್ಯ ವ್ಯಾಪಿ ಉಗ್ರ ಹೋರಾಟ ಮಾಡಲಿದೆ. ಶಾಸಕರ ನಿಧಿ ವಾಪಸ್ಗೆ ಬೆಂಬಲವಿದೆ. ಖರ್ಚಾಗದೇ ಉಳಿದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳೋದಾದರೆ ಅದು […]

ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಲ್ಲಿ ರಾಜ್ಯ ವಿಳಂಬ ನೀತಿ ಅನುಸರಿಸುತ್ತಿದೆ: ರಾಜ್ಯ ರೈತ ಸಂಘ

Monday, June 18th, 2018
formers-m1

ಮಂಗಳೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಲ್ಲಿ ರಾಜ್ಯ ವಿಳಂಬ ನೀತಿ ಅನುಸರಿಸುತ್ತಿದೆ. ಶೀಘ್ರವೇ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿತು. ಧರಣಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ, ಜಿಲ್ಲಾ ಕಾರ್ಯದರ್ಶಿ ರೋನಿ ಮೆಂಡೋನ್ಸಾ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ್, ರೈತ ಸಂಘದ ಪದಾಧಿಕಾರಿಗಳಾದ ತಾರಾನಾಥ […]

ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ಸಾಲ ಮನ್ನಾ : ಸಿಎಂ ಘೋಷಣೆ

Wednesday, June 21st, 2017
CM siddu

ಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜೂನ್ 20 ರ ವರೆಗಿನ ಪ್ರತಿ ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಲಮನ್ನಾದಿಂದ 22,227,506 ರಾಜ್ಯದ ರೈತರಿಗೆ ಅನುಕೂಲವಾಗಲಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 8,165 ಕೋಟಿ ರು ಹೊರೆಯಾಗಲಿದೆ. ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ಹಲವು ದಿನಗಳಿಂದ ಪಟ್ಟು ಹಿಡಿದಿತ್ತು. ಸಾಲ ಮನ್ನಾ ಮಾಡದಿದ್ದರೇ ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ […]