ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸರ್ಕಾರ‌ ನನಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ: ಸಾಲುಮರದ ತಿಮ್ಮಕ್ಕ

Tuesday, July 3rd, 2018
salumarada-thimakka

ಮಂಗಳೂರು: ನಾನು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸರ್ಕಾರ‌ ನನಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಸ್ವಂತ ಮನೆ ಬೇಕು ಎನ್ನುವ ತನ್ನ ಕನಸಿಗೆ ಸರ್ಕಾರ‌ ಸ್ಪಂದಿಸಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ತನ್ನ ಕನಸು ಸಾಕಾರಗೊಳಿಸಲಿ ಎಂದು ಸಾಲುಮರದ ತಿಮ್ಮಕ್ಕ ಅಳಲು ತೋಡಿಕೊಂಡಿದ್ದಾರೆ. ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ವೃಕ್ಷಾಂಜಲಿ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಇದೇ ವೇಳೆ‌ ಮಾತನಾಡಿದ ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ಉಮೇಶ್, ಹಿಂದೆ […]

ಸಮಾಜದ ಸಭ್ಯ ನಾಗರಿಕರಾಗಿ ದುಶ್ಚಟ ಮುಕ್ತ ಜೀವನ ನಡೆಸಿದರೆ ಶಾಂತಿ, ನೆಮ್ಮದಿ

Monday, July 2nd, 2018
Drug day

ಉಜಿರೆ : ಸುಸಂಸ್ಕೃತರಾಗಿ, ಸಮಾಜದ ಸಭ್ಯ ನಾಗರಿಕರಾಗಿ ದುಶ್ಚಟ ಮುಕ್ತ ಜೀವನ ನಡೆಸಿದರೆ ಶಾಂತಿ, ನೆಮ್ಮದಿ ಸಿಗುತ್ತದೆ. ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ. ವ್ಯಸನದಿಂದ ವ್ಯಕ್ತಿತ್ವ ನಾಶವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಪ್ರಾಯೋಜಕತ್ವದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ […]

ಮಳೆ ಇದ್ದಾಗ ಮಾತ್ರವೇ ಕಾಡು, ಕಾಡು ಇದ್ದಲ್ಲಿ ಮಾತ್ರವೇ ಮಳೆ : ರಮಾನಾಥ ರೈ

Friday, July 14th, 2017
Forest

ಮಂಗಳೂರು : ಅರಣ್ಯ ಇಲಾಖೆ ವತಿಯಿಂದ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲೂ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಟ್ರೀ ಪಾರ್ಕ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ನಗರದ ಪುರಭವನದಲ್ಲಿ ‘ನೀರಿಗಾಗಿ ಅರಣ್ಯ- 2017’ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ  ಅವರು ಅರಣ್ಯ ಸಂರಕ್ಷಣೆಗಾಗಿ ಗಿಡ ನೆಟ್ಟು, ಗಿಡ ಬೆಳೆಸಿ, ಗಿಡ ಉಳಿಸಿ ಪಾಪದಿಂದ ಮುಕ್ತರಾಗಿ ಎಂಬ ಘೋಷ ವಾಕ್ಯದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿದೆ,  ಸರಕಾರದ ಕಾರ್ಯಕ್ರಮಗಳ ಜತೆ ವನ್ಯಜೀವಿ […]