ಆರ್ಯಭಟ ಪ್ರಶಸ್ತಿ ವಿಜೇತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

Thursday, January 27th, 2022
Sheela Diwakar

ಮಂಗಳೂರು :  ಆರ್ಯಭಟ ಪ್ರಶಸ್ತಿ ಪುರಸ್ಕೃತೆ, 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಶೀಲಾ ದಿವಾಕರ್ (53) ಬುಧವಾರ ನಿಧನರಾಗಿದ್ದಾರೆ. ‘ಕರಾವಳಿ ಕೋಗಿಲೆ’ ಖ್ಯಾತಿಯ ಸಂಗೀತ ಗುರುಗಳಾದ ವಿದುಷಿ ಶ್ರೀಮತಿ ಶೀಲಾ ದಿವಾಕರ್ ಅನಾರೋಗ್ಯದ ಹಿನ್ನೆಲೆ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ  ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವಿದ್ವತ್ ಸನ್ಮಾನ ಸ್ವೀಕರಿಸಿದ ಕರಾವಳಿ ಕೋಗಿಲೆ, 3000ಕ್ಕೂ ಅಧಿಕ ಪ್ರತಿಷ್ಠಿತ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮ ನೀಡಿದ ಖ್ಯಾತ ಗಾಯಕಿಯಾಗಿದ್ದರು. ಶೀಲಾರವರು ಮಂಗಳೂರು, […]

ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ

Sunday, December 26th, 2021
chutuku Sahitya

ಮಂಗಳೂರು : ಜನವರಿ 30ರಂದು ಮಂಗಳೂರಿನ ತುಳು ಭವನದ ಸಿರಿ ಚಾವಡಿಯಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಂಯುಕ್ತವಾಗಿ ಆಯೋಜಿಸುತ್ತಿರುವ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ ಸಮಾರಂಭ ಕೆನರಾ ಕಾಲೇಜಿನ ಸಭಾಂಗಣದಲ್ಲಿ  ಶನಿವಾರ ನಡೆಯಿತು. ಸಾಹಿತ್ಯ ಪೋಷಕ, ಸಂಘಟಕ ಗುರುಪ್ರಸಾದ್ ಕಡಂಬಾರ್ ಅವರು ಲಾಂಛನವನ್ನು […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸಾಹಿತ್ಯ ಸಮ್ಮೇಳನದ 89 ನೆ ಅಧಿವೇಶನ

Friday, December 3rd, 2021
Dharmasthala-Deepothsava

ಉಜಿರೆ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಕೇವಲ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 89ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ದೇವರಿಗೆ ದೀಪ ಹಚ್ಚುವುದು ಭಾರತೀಯ ಸಂಸ್ಕೃತಿಯ ಲಕ್ಷಣವಾಗಿದೆ. ಲಕ್ಷದೀಪೋತ್ಸವ ಸಂಸ್ಕೃತಿ ಉಳಿಸುವ, ಅಜ್ಞಾನದ […]

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 88 ನೆ ಅಧೀವೇಶನ

Tuesday, December 15th, 2020
dharmasthala

ಉಜಿರೆ: ಸಾಹಿತ್ಯ ಸಮಾಜದ ಕನ್ನಡಿಯಂತಿದ್ದು ಸಮಾಜದ ರಕ್ಷಣೆ ಮತ್ತು ಪೋಷಣೆಗೆ ಸಾಹಿತ್ಯ ಅಗತ್ಯ  ಎಂದು ಬೆಂಗಳೂರಿನ ಹಿರಿಯ ವಿದ್ವಾಂಸ ಡಾ. ಎಸ್. ರಂಗನಾಥ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 88ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯಕ್ಕೆ ಔಷಧೀಯ ಗುಣವೂ ಇದ್ದು ಜೀವನ ಮೌಲ್ಯಗಳ ಆಕರವಾಗಿದೆ. ಸಾಹಿತ್ಯ, ಸಂಗೀತ ಮತ್ತು ಕಲೆಯ ಸ್ಪರ್ಶ ಇಲ್ಲದ ಮನುಷ್ಯ ಕೋಡು, ಬಾಲವಿಲ್ಲದ ಪ್ರಾಣಿಯಂತೆ ಆಗುತ್ತಾನೆ. ಸಾಹಿತ್ಯದಿಂದ ಸಮಾಜ ಸುಧಾರಣೆಯೊಂದಿಗೆ ಮಾನವೀಯ ಮೌಲ್ಯಗಳ ಉದ್ದೀಪನ ಹಾಗೂ […]

ಸಾಹಿತ್ಯ ಸಮ್ಮೇಳನ : ಬಹುತ್ವದ ಸಂಸ್ಕೃತಿಯ ಅನಾವರಣ; ಕಲ್ಕೂರ

Saturday, January 11th, 2020
kalkura

ಮಂಗಳೂರು : ತುಳುನಾಡಿನ ಬಹುತ್ವದ ಸಂಸ್ಕೃತಿಯು ಸಾಹಿತ್ಯ ಸಮ್ಮೇಳನದ ಮೂಲಕ ಅನಾವರಣಗೊಳ್ಳಲಿ ಎಂದು ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಹೇಳಿದರು. ಜನವರಿ 29ರಂದು ಸಂತ ಆಗ್ನೇಸ್‌ ಕಾಲೇಜಿನಲ್ಲಿ ಜರಗಲಿರುವ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮುಖ್ಯವಾಗಿ ವಿದ್ಯಾರ್ಥಿಗಳು ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ಹೆಚ್ಚು ಒಲವನ್ನು ತೋರಿಸಬೇಕು. ಈ ನೆಲೆಯಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನವು ಪರಿಣಾಮಕಾರಿಯಾಗಿ ಯಶಸ್ಸನ್ನು ಕಾಣುವಂತಾಗಲೆಂದರು. ಈ ಸಂದರ್ಭ […]

ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ :ತುಳು ಸಾಹಿತ್ಯ ಅಕಾಡೆಮಿ

Saturday, October 7th, 2017
AC bandari

ಮಂಗಳೂರು :  ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನವನ್ನು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಬಂಟ್ವಾಳದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಾಗಿದೆ. ಅಕಾಡೆಮಿ ಅಧ್ಯಕ್ಷರಾದ ಎ. ಸಿ. ಭಂಡಾರಿಯವರ ಅಧ್ಯಕ್ಷತೆಯಲ್ಲಿ ಅಕಾಡೆಮಿ ವತಿಯಿಂದ ರಚಿಸಲಾದ ಉಪಸಮಿತಿಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು. ಸಮ್ಮೇಳನದ ಸ್ವರೂಪ ಮತ್ತು ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲು ನಿರ್ದರಿಸಲಾಗಿದೆ. ತಾಲೂಕಿನಲ್ಲಿರುವ ತುಳುಪರ ಸಂಘಟನೆಗಳು, ತುಳು […]

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 84ನೇ ಅಧಿವೇಶನ

Tuesday, November 29th, 2016
lakshadeepotsava-1

ಬೆಳ್ತಂಗಡಿ : ಜಾನಪದ ಕಲೆಗಳು ಮತ್ತು ಸಂಸ್ಕೃತಿ ಇಂದು ವಿನಾಶದಂಚಿನಲ್ಲಿದ್ದು ಅವುಗಳ ಸಂರಕ್ಷಣೆಯಾಗಬೇಕು. ಮುಂದಿನ ಪೀಳಿಗೆಗೆ ಈ ಬಗ್ಗೆ ಅರಿವು ಜಾಗೃತಿ ಮೂಡಿಸಬೇಕು. ಈ ದಿಸೆಯಲ್ಲಿ ಸರ್ಕಾರ, ಅಕಾಡೆಮಿಗಳು ಮತ್ತು ಮಠ-ಮಂದಿರಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಹೇಳಿದರು. ಅವರು ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ಆಯೋಜಿಸಲಾದ ಸಾಹಿತ್ಯ ಸಮ್ಮೇಳನದ 84ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿಗೂ ಸಾಮಾಜಿಕ ಹೊಣೆಗಾರಿಕೆ ಇರಬೇಕು. ಸಮಾಜ ಸುಧಾರಣೆಯ ಜವಾಬ್ದಾರಿ ಆತನಿಗೆ ಇದೆ. […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ:

Thursday, December 10th, 2015
Darmasthala Deepotsava

ಧರ್ಮಸ್ಥಳ : ಲಕ್ಷದೀಪೋತ್ಸವ ಸಂದರ್ಭದಲ್ಲಿ ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ ಎಂಬತ್ತಮೂರನೆ ಅಧಿವೇಶನವನ್ನು ಖ್ಯಾತ ಸಂಶೋಧಕ ಡಾ. ಷ. ಶೆಟ್ಟರ್ ಉದ್ಘಾಟಿಸಿ ಮಾತನಾಡಿದರು. ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ. ಮುಕ್ತ ಮನಸ್ಸಿನಿಂದ ಇಂದು ಸಂಶೋಧನೆ ಮಾಡುವುದೇ ಅಪರಾಧವಾಗಿದೆ ಎಂದು […]

ಮುಖ್ಯಮಂತ್ರಿಗಳಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Thursday, October 27th, 2011
DVS Release Logo

ಮಂಗಳೂರು: ನವೆಂಬರ್ . 18 ಮತ್ತು 19ರಂದು ಅಳಿಕೆಯ ಸತ್ಯಸಾಯಿ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿರುವ 17ನೇ ದ. ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ನಗರದಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು. ಯಕ್ಷಗಾನ ಹಾಗೂ ಕಥಕ್ಕಳಿಯ ವೇಷ, ತೆಂಗು, ಕಂಗು, ಬಾಳೆಯ ಹಿನ್ನಲೆಯನ್ನಾಗಿರಿಸಿ, ಕನ್ನಡದ ‘ಕ’ ಅಕ್ಷರದ ಮುಗುಳಿಯ ನಡುವೆ ಕನ್ನಡ ಭುವನೇಶ್ವರಿ ಹಾಗೂ ತುಳು ಜಾನಪದ ಭೂತಾರಾಧನೆಯನ್ನು ಪ್ರತಿನಿಧಿಸುವ ದೈವಗಳ ಅಣಿಯ ಆವರಣದ ನಡುವೆ ಕನ್ನಡ ಅಂಕೆಯಲ್ಲಿ 17ನೇ ಜಿಲ್ಲಾ ಸಾಹಿತ್ಯ […]