ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Wednesday, July 29th, 2020
sindhubroopesh

ಮಂಗಳೂರು :  ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡಿದರೆ  ಕಾನೂನು ಕ್ರಮ ಕೈಗೊಳ್ಳುವುದಾಗಿ  ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ […]

ಕೊರೋನ ಸೋಂಕು ಜುಲೈ 20 : ದಕ್ಷಿಣ ಕನ್ನಡ 89, ಉಡುಪಿ ಜಿಲ್ಲೆ 99, ಕಾಸರಗೋಡು 28

Tuesday, July 21st, 2020
CORONA

ಮಂಗಳೂರು :  ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಸೋಮವಾರ  89 ಮಂದಿಯಲ್ಲಿ ಕೊರೋನ ಸೋಂಕು ಕಾಣಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,685ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಮಂದಿ, ಶೀತ-45, ತೀವ್ರ ಉಸಿರಾಟ ತೊಂದರೆ-16, ವಿದೇಶದಿಂದ ಆಗಮಿಸಿದ ಇಬ್ಬರು, ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್‌ನ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ […]

ದುಬಾೖಯಿಂದ ಕನ್ನಡಿಗರನ್ನು ಹೊತ್ತ ಇನ್ನೊಂದು ವಿಮಾನ ಮೇ 18ರಂದು ಬರಲಿದೆ

Sunday, May 17th, 2020
airIndia

ಮಂಗಳೂರು: ದುಬಾೖಯಿಂದ ಕನ್ನಡಿಗರನ್ನು ಹೊತ್ತ ಇನ್ನೊಂದು ವಿಮಾನ ಮೇ 18ರಂದು ಸಂಜೆ 6.30ಕ್ಕೆ ಮಂಗಳೂರಿಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿರುತ್ತಾರೆ ಎಂಬ ನಿಖರ ಮಾಹಿತಿ ದೊರಕಿಲ್ಲ. ಪ್ರಯಾಣಿಕರಿಗೆ ಮಂಗಳೂರಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಪ್ರಯಾಣಿಕರು ಕೂಡ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕೋರಿದರು. ಮೇ 20 ಮಸ್ಕತ್‌ನಿಂದ ಹಾಗೂ 22ರಂದು ದೋಹಾದಿಂದ ಬೆಂಗಳೂರಿನ ಮೂಲಕ ಮಂಗಳೂರಿಗೆ ವಿಮಾನ ಬರುವ ಮಾಹಿತಿಯಿತ್ತು. ಆದರೆ […]

ಶನಿವಾರ ಮಧ್ಯಾಹ್ನ 3 ರಿಂದ 6 ರ ವರೆಗೆ ಕರ್ಫ್ಯೂ ಸಡಿಲಿಕೆ

Saturday, December 21st, 2019
Mangaluru curfew

ಮಂಗಳೂರು : ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ ರವಿವಾರ ಮಧ್ಯರಾತ್ರಿಯ ವರೆಗೆ ಕರ್ಫ್ಯೂ ಮುಂದುವರಿಸಲಾಗಿದ್ದು, ಹೆಚ್ಚುವರಿಯಾಗಿ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ. ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಶನಿವಾರವೂ ರಜೆಯನ್ನು ವಿಸ್ತರಿಸಲಾಗಿದೆ. ಮದ್ಯ ಮಾರಾಟವನ್ನೂ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶ ಹೊರಡಿಸಿದ್ದಾರೆ. ಶನಿವಾರ ಮಧ್ಯಾಹ್ನ 3 ರಿಂದ 6 ರ ವರೆಗೆ ಕರ್ಫ್ಯೂ ಸಡಿಲಿಸಲಾಗಿದೆ. ವಾಹನ ಸಂಚಾರಕ್ಕೆ ಅವಕಾಶವಿದೆ, ಸಂಜೆ ಆರರಿಂದ ಮತ್ತೆ  ಕರ್ಫ್ಯೂ ಮುಂದುವರಿಯಲಿದೆ. ನಗರದ ಅಲ್ಲಲ್ಲಿ ಬ್ಯಾರಿಕೇಡ್‌ ಅಳವಡಿಸಿ ತಪಾಸಣೆ ನಡೆಸಲಾಗುತ್ತಿದ್ದು, ಸಂಚಾರಕ್ಕೆ ನಿರ್ಬಂಧ ವಿಧಿಸಲಾಗುತ್ತಿದೆ. […]

ನ.12ರಂದು ಮನಪಾ ಚುನಾವಣೆ : ನ.14ರಂದು ಮತ ಎಣಿಕೆ

Thursday, October 24th, 2019
MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಗುರುವಾರದಿಂದ ಆರಂಭಗೊಂಡಿದೆ. ಅ.31ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು, ನ. 12ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನದ ನಡೆಯಲಿದೆ. ನಾಮಪತ್ರ ಪರಿಶೀಲನೆಗೆ ನ.2 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ನ.4 ಕೊನೆಯ ದಿನ. ನ.14ರಂದು ಮತಗಳ ಎಣಿಕೆ ನಡೆಯಲಿದೆ ಎಂದು ಹೇಳಿದರು. ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯು […]

ಅಂಚೆಚೀಟಿ, ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು : ಸಿಂಧೂ ಬಿ. ರೂಪೇಶ್‌

Tuesday, October 15th, 2019
anche-cheeti

ಮಂಗಳೂರು : ಅಂಚೆ ಚೀಟಿ ಮತ್ತು ನಾಣ್ಯಗಳಿಗೆ ತಮ್ಮದೇ ಆದ ಇತಿಹಾಸವಿದ್ದು, ಅವು ಸಂಶೋಧನೆಯ ಆಕರಗಳಾಗಿವೆ. ಆದ್ದರಿಂದ ಬಾಲ್ಯದಿಂದಲೇ ಇವುಗಳನ್ನು ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಹೇಳಿದರು. ಕರ್ನಾಟಕ ಅಂಚೆ ವೃತ್ತದ ವತಿಯಿಂದ ನಗರದಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ “ಕರ್ನಾಪೆಕ್ಸ್‌- 2019’ನಲ್ಲಿ ರವಿವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಅಂಚೆಚೀಟಿ ಮತ್ತು ನಾಣ್ಯಗಳ ಅಧ್ಯಯನ ಕುತೂಹಲ ಕೆರಳಿಸುತ್ತದೆ. ಆದ್ದರಿಂದ ಮಕ್ಕಳನ್ನು ಇಂತಹ ಪ್ರದರ್ಶನಗಳಿಗೆ ಕರೆದೊಯ್ಯಬೇಕು […]

ಮಂಗಳೂರು : ಮತದಾರರ ಪಟ್ಟಿ ಪರಿಶೀಲನೆ; ಡಿಸಿ ಸಿಂಧೂ ಬಿ. ರೂಪೇಶ್‌

Wednesday, September 18th, 2019
sindhu

ಮಂಗಳೂರು : ಮತದಾರರ ಪಟ್ಟಿಯ ದೋಷಗಳನ್ನು ಸರಿಪಡಿಸಲು ಮತದಾರರ ಪಟ್ಟಿ ಪರಿಶೀಲನೆಯನ್ನು ಸೆ.1ರಿಂದ ಅ.15ರ ವರೆಗೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚುನಾವಣ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಶೀಲನೆ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಮನೆಗಳಿಗೆ ಬಿಎಲ್‌ಒಗಳು ಸೆ.1ರಿಂದ 30ರ ವರೆಗೆ ಭೇಟಿ ನೀಡಲಿದ್ದಾರೆ. ನಾಗರಿಕರು ಅಗತ್ಯ ಯಾವುದಾದರೂ ಒಂದು ದಾಖಲೆ ನೀಡಿ ತಿದ್ದುಪಡಿ ಇದ್ದಲ್ಲಿ ಪರಿಶೀಲಿಸಬಹುದು. ಬಿಎಲ್‌ಒಗಳು ಆ್ಯಪ್‌ ಮೂಲಕ […]

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ನೇಮಕ

Saturday, September 7th, 2019
sindhu-B

ಮಂಗಳೂರು : ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಈ ಹಿಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅವರನ್ನು ನೇಮಕ ಮಾಡಲಾಗಿದೆ. ಸಿಂಧೂ ರೂಪೇಶ್ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತಕ್ಷಣದಿಂದಲೇ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ಪದೊನ್ನತ್ತಿಗೊಳಿಸಿ ಸರಕಾರ ಆದೇಶ ನೀಡಿದೆ.