ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ, ಉಳಿದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಯಥಾಸ್ಥಿತಿ

Thursday, June 10th, 2021
CM Yedyurappa

ಬೆಂಗಳೂರು : ರಾಜ್ಯದ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾದ ಪ್ರದೇಶದಲ್ಲಿ ಜೂನ್ 14 ರಿಂದ  ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೂ.10 ರಂದು ಸಿಎಂ ಯಡಿಯೂರಪ್ಪ ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ. ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ […]

ನವೆಂಬರ್ 5 ರಂದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿ

Tuesday, November 3rd, 2020
Karyakarini

ಮಂಗಳೂರು : ನವೆಂಬರ್ 5 ರಂದು ಮಂಗಳೂರಿನಲ್ಲಿ ನಡೆಯಲಿರುವ  ಬಿಜೆಪಿಯ ವಿಶೇಷ ಕಾರ್ಯಕಾರಿ ಸಭೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸರುವರು ಎಂದು,  ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಮಂಗಳೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು,  ಟಿ ವಿ ರಮಣ್ ಪೈ ಹಾಲ್‌ನಲ್ಲಿ ನಡೆಯಲಿರುವ ಬಿಜೆಪಿಯ ವಿಶೇಷ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನವೆಂಬರ್ 4 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ” ಎಂದು  ಅವರು ಮಾಹಿತಿ ನೀಡಿದರು. ಸಿಎಂ ಯಡಿಯೂರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು […]

ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದ್ದು ಆಘಾತಕಾರಿ : ಸಿಎಂ ಯಡಿಯೂರಪ್ಪ ವಿಷಾದ

Friday, March 13th, 2020
bsy

ಬೆಂಗಳೂರು : ಕೊರೋನಾ ಸೋಂಕಿನಿಂದ ಗುರುವಾರ ಕಲಬುರ್ಗಿಯಲ್ಲಿ 76 ವರ್ಷದ ವೃದ್ಧ ಮೃತಪಟ್ಟಿರುವುದು ದುರಾದೃಷ್ಟಕರ ಬೆಳವಣಿಗೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಷಾಧ ವ್ಯಕ್ತಪಡಿಸಿದ್ದಾರೆ. ಇಡೀ ವಿಶ್ವಕ್ಕೆ ಇಂದು ಬೆದರಿಕೆ ಒಡ್ಡಿರುವ ಕೊರೋನಾ ಭಾರತದಕ್ಕೂ ತನ್ನ ಕಬಂದಬಾಹುವನ್ನು ವಿಸ್ತರಿಸಿದೆ. ದೇಶದಲ್ಲಿ ಈವರೆಗೆ 75 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲೂ 6 ಜನರಿಗೆ ಈ ಸೋಂಕು ತಗುಲಿದೆ. ಈ ಪೈಕಿ ಗುರುವಾರ ಕಲಬುರ್ಗಿಯ ವ್ಯಕ್ತಿ ನಿನ್ನೆ ಮೃತರಾಗಿದ್ದರು. ಈ ಕುರಿತು ಇಂದು ವಿಧಾನಮಂಡಲ ಕಲಾಪದಲ್ಲಿ ಚರ್ಚೆಯ ಸಂದರ್ಭದಲ್ಲಿ ಮಾತನಾಡಿರುವ […]

ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಸಿಎಂ ಯಡಿಯೂರಪ್ಪ

Saturday, March 7th, 2020
rajnath-singh

ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮಗನ ಮದುವೆಗಾಗಿ ದೆಹಲಿಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ತೆರಳಿದ ಸಿಎಂ ಬಿಎಸ್ವೈ, 2021ರ ಏರೋ‌ ಇಂಡಿಯಾ ಶೋಅನ್ನು ಬೆಂಗಳೂರಿನಲ್ಲೇ ನಡೆಸುವಂತೆ ರಕ್ಷಣಾ ಸಚಿವರಲ್ಲಿ ಮನವಿ ಮಾಡಿದರು. ಹಾಗೆಯೇ, ವೆಲ್ಲಾರ ಜಂಕ್ಷನ್ನಲ್ಲಿ ಅವಶ್ಯಕತೆ ಇರುವ ರಕ್ಷಣಾ ಇಲಾಖೆಯ ಭೂಮಿಯನ್ನು ನಮ್ಮ ಮೆಟ್ರೋಗೆ ಹಸ್ತಾಂತರ ಮಾಡಬೇಕು ಅಂತ‌ ಮನವಿ ಮಾಡಿದರು. ಸಿಎಂ ಮನವಿಗೆ […]

ಕಾಡು ಸಿದ್ದೇಶ್ವರ ಮಠದ ಸರ್ವತೋಮುಖ ಅಭಿವೃದ್ಧಿಗೆ ನಿರ್ವಹಿಸುತ್ತೇನೆ : ಸಿಎಂ ಯಡಿಯೂರಪ್ಪ

Wednesday, February 19th, 2020
siddheshwara

ತಿಪಟೂರು : ಕಾಡು ಸಿದ್ದೇಶ್ವರ ಮಠ ಅತ್ಯಂತ ಶಕ್ತಿಶಾಲಿ ಮಠವಾಗಿದೆ.ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಿರ್ವಹಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿ ಲಿಂಗೈಕ್ಯ ಶಿವಕುಮಾರ ಶ್ರೀಗಳನ್ನು ಸ್ಮರಿಸಿದರು. ವಸತಿ ಸಚಿವ ವಿ ಸೋಮಣ್ಣ ಮಾತಾನಾಡಿ, ನಾನು ಸೇರಿದಂತೆ ಮುಖ್ಯಮಂತ್ರಿಯಾದಿಯಾಗಿ ಯಡಿಯೂರಪ್ಪ ಅವರು ಸೇರಿದಂತೆ ಚೆಲುವರಾಯಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲರೂ ಒಂದೇ ಮನೋಭಾವದಿಂದ ಮಠಕ್ಕೆ ಭಕ್ತರಾಗಿ ನಿರಂತರವಾಗಿ ನಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದೇವೆ. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ ಎಲ್ಲ ಸಮಸ್ಯೆಗಳನ್ನು ನಿರ್ವಿಘ್ನವಾಗಿ ಬಗೆಹರಿಸುವಂತೆ ಪ್ರಾರ್ಥಿಸಿದ್ದೇವೆ ಎಂದರು. ಶ್ರೀ […]

ಕೇರಳದಲ್ಲಿ ಸಿಎಂ ಯಡಿಯೂರಪ್ಪಗೆ ಕಪ್ಪು ಬಾವುಟ ಪ್ರದರ್ಶನ : ಎಸ್​​​ಎಫ್​​ಐ ಮತ್ತು ಕಾಂಗ್ರೆಸ್​​ನ ಐವರು ಬಂಧನ​​

Thursday, December 26th, 2019
BSY

ತಿರುವನಂತಪುರಂ : ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಆರೋಪದ ಮೇಲೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಾಂಗ್ರೆಸ್ನ ಐವರು ಕಾರ್ಯಕರ್ತರ ಬಂಧನವಾಗಿದೆ. ಸಿಪಿಐನ ಭಾರತೀಯ ವಿದ್ಯಾರ್ಥಿ ಫೆಡರೇಶನ್‌(ಎಸ್‌ಎಫ್‌ಐ)ನ ಮೂವರು ಮತ್ತು ಯುವ ಕಾಂಗ್ರೆಸ್ನ ಇಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ಧಾರೆ. ಕಳೆದ ಎರಡು ದಿನಗಳ ಹಿಂದೆ ಸೋಮವಾರ(ಡಿ.23) ರಾತ್ರಿ ಕೇರಳದ ತಿರುವನಂತಪುರಂ ಪ್ರವೇಶಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪನವರ ಕಾರಿಗೆ ಅಡ್ಡ […]

ನಾಳೆ ಸಿಎಂ ಯಡಿಯೂರಪ್ಪ ಆಡಿಯೋ ಸಾಕ್ಷ್ಯವನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

Monday, November 4th, 2019
Supreem-Court

ನವದೆಹಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷ್ಯವನ್ನು ಸುಪ್ರೀಂಕೋರ್ಟ್ ಪರಿಗಣಿಸಿದೆ. ಈ ಕುರಿತು ನಾಳೆ(ಮಂಗಳವಾರ) ಆಡಿಯೋ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ ಇಂದು ನ್ಯಾಯಾಧೀಶ ಎನ್.ವಿ.ರಮಣ ಅವರ ಮುಂದೆ ಆಡಿಯೋ ಬಗ್ಗೆ ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಪ್ರಸ್ತಾಪ ಮಾಡಿದರು. ಈಗಾಗಲೇ ವಿಚಾರಣೆ ಮುಗಿದಿದ್ದು, ಈಗ ಏನು ಹೇಳಬೇಕು ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು. ವಿಚಾರಣೆ ಮುಗಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಆಡಿಯೋ ಕ್ಲಿಪ್ ಲೀಕ್ ಆಗಿದೆ. ಹಾಗಾಗಿ ನ್ಯಾಯಾಲಯದ ಗಮನಕ್ಕೆ ತರಬೇಕಿದೆ. […]

ಬೆಳಗಾವಿ : ರೈತರು ಸಿಎಂ ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಲು ಯತ್ನ

Friday, October 4th, 2019
BSY1

ಬೆಳಗಾವಿ : ನೆರೆ ಸಂತ್ರಸ್ತರ ನೋವು ಆಲಿಸಲು ಜಿಲ್ಲೆಗೆ ಬಂದಿರುವ ಮುಖ್ಯಮಂತ್ರಿಗಳಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಯಡಿಯೂರಪ್ಪ ಅವರ ಬೆಂಗಾವಲು ವಾಹನಕ್ಕೆ ಅಡ್ಡ ಮಲಗಲು ಮುಂದಾದ ರೈತರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಮುಖ್ಯಮಂತ್ರಿಗೆ ಘೇರಾವ್ ಹಾಕಲು ಬಂದ ರೈತರನ್ನು ತಡೆದ ಪೊಲೀಸರು, ಅತಿಥಿ ಗೃಹದ ಗೇಟ್ ಬಳಿ ಎಲ್ಲ ರೈತರನ್ನು ವಶಕ್ಕೆ ಪಡೆದು ಕೊಳ್ಳಲಾಯಿತು. ರಸ್ತೆ ಮಧ್ಯದಲ್ಲಿ ಮಲಗಿ ಪ್ರತಿಭಟನೆ ಮಾಡುತ್ತಿದ್ದ ರೈತರು ಸಿಎಂ ಕಾರು‌ ಹೋಗುತ್ತಿದ್ದಂತೆ ಸಿಎಂ ಗೆ ಧಿಕ್ಕಾರ ಕೂಗಿದ ರೈತರು, ಬೆಳೆ ಪರಿಹಾರಕ್ಕಾಗಿ […]

ಬೆಂಗಳೂರು ನಗರ ಸ್ವಚ್ಛವಾಗಿಡುವುದು ಸರ್ಕಾರದ ಆದ್ಯತೆ : ಸಿಎಂ ಯಡಿಯೂರಪ್ಪ

Saturday, September 7th, 2019
BS-yadiyurappa

ಬೆಂಗಳೂರು : ನಗರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಕುರಿತಂತೆ ನಗರದ ಬಿಜೆಪಿ ಸಂಸದರು ಹಾಗೂ ಶಾಸಕರ ಜತೆ ಸಭೆ ನಡೆಸಿದ ಅವರು, ಬೆಂಗಳೂರು ನಗರವನ್ನು ಸ್ವಚ್ಛವಾಗಿಡುವುದು ಸರ್ಕಾರದ ಆದ್ಯತೆಯಾಗಿದ್ದು, ಕಸ ವಿಲೇವಾರಿಗೆ ಅಗತ್ಯವಿರುವ ಪೌರಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಬೆಂಗಳೂರಿನ ರಸ್ತೆ, ಉದ್ಯಾನವನಗಳು ಸ್ವಚ್ಛವಾಗಿಡಲು 24 ಗಂಟೆಗಳ ಕಾಲ ಕೆಲಸ ಮಾಡಲು ಪೌರಕಾರ್ಮಿಕರನ್ನು ನೇಮಿಸುವ ಅಗತ್ಯವಿದೆ. ರಸ್ತೆಗಳಲ್ಲಿರುವ ಗುಂಡಿಗಳನ್ನು ಕೂಡಲೇ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜನರ ಸಮಸ್ಯೆಗಳಿಗೆ ತಕ್ಷಣ […]