ಲಾಕ್’ಡೌನ್ ಇಲ್ಲ, ಜನರು ವೈರಸ್ ಜೊತೆಗೆ ಬದುಕುವುದನ್ನು ಕಲಿಯಬೇಕು : ಸಿ ಎಂ ಯಡಿಯೂರಪ್ಪ

Tuesday, July 7th, 2020
yedyurappa

ಬೆಂಗಳೂರು:  ಜನರು ವೈರಸ್ ಜೊತೆಗೆ ಬದುಕುವುದನ್ನು ಕಲಿಯಬೇಕು, ಮತ್ತೊಮ್ಮೆ ಲಾಕ್’ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಲಾಕ್’ಡೌನ್ ಭೀತಿಯಿಂದಾಗಿ ವಲಸೆ ಕಾರ್ಮಿಕರು ತವರುಗಳಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನರು ಭೀತಿಗೊಳಗಾಗ ಬಾರದು. ಮುಂಜಾಗ್ರತಾ ಕ್ರಮಗಳೊಂದಿಗೆ ವೈರಸ್ ಜೊತೆಗೆ ಜೀವಿಸುವುದನ್ನು ಕಲಿಯಬೇಕಿದೆ. ವೈರಸ್ ಮಟ್ಟಹಾಕಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ 450 ಹೆಚ್ಚುವರಿ ಆ್ಯಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಸರ್ಕಾರಕ್ಕೆ […]

ರೈತರ ಮತ್ತು ನೇಕಾರ ಸಾಲಮನ್ನಾ ವಿಚಾರದಲ್ಲಿ ಸಿ.ಎಂ ಬಳಿ ಚರ್ಚಿಸಲಾಗುವುದು : ಸಚಿವ ಬಿ.ಶ್ರೀರಾಮುಲು

Wednesday, October 16th, 2019
sri-ramulu

ಬಳ್ಳಾರಿ : ನೆರೆ ಹಾವಳಿಯಿಂದಾಗಿ ರೈತರು ಮತ್ತು ನೇಕಾರರಿಂದ ಸಾಲಮನ್ನಾ ಮಾಡುವಂತೆ ಒತ್ತಾಯ ಬರುತ್ತಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಬಳಿ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲಮನ್ನಾ ವಿಚಾರದಲ್ಲಿ ಗೊಂದಲ ಇದೆ. ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೂ ಸ್ಪಷ್ಟತೆ ಇರಲಿಲ್ಲ. ಹಾಗಾಗಿ ಈ ಬಗ್ಗೆ ನಾಳೆ ನಾಡಿದ್ದು ಸಿಎಂ ಬಳಿ ಕೂಲಂಕುಷವಾಗಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಐತಿಹಾಸಿಕ […]