ನನ್ನ ಒಂದು ಹೇಳಿಕೆಯಿಂದ ಖಳನಾಯಕನಾಗಿ ಬಿಟ್ಟೆ : ಸಿ ಪಿ ಯೋಗೇಶ್ವರ್

Tuesday, June 1st, 2021
cp Yogeshwa

ಮೈಸೂರು :  ಎಸ್ಕಾರ್ಟ್ ಇಲ್ಲದೆ‌‌  ಸಚಿವ ಸಿ ಪಿ ಯೋಗೇಶ್ವರ್ ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಸುತ್ತೂರು ಮಠಕ್ಕೆ ದಿಢೀರ್ ಬೇಟಿ ನೀಡಿದ್ದಾರೆ. ಸುತ್ತೂರು ಮಠದ ಶ್ರೀ ಗಳೊಂದಿಗೆ ಕೆಲ ಕಾಲ ಮಾತನಾಡಿ ನಂತರ ಮಾಧ್ಯದಮರಿಗೆ ಪ್ರತಿಕ್ರಿಯಿಸಿದ ಯೋಗೇಶ್ವರ್,  ಸ್ವಾಮೀಜಿಗಳ ಮುಂದೆ ನನ್ನ  ನೋವಾನ್ನು ಹೇಳಿಕೊಂಡರೆ‌‌ ಹಗುರವಾಗುತ್ತದೆ ಎಂದು ಇಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ. ಕಳೆದ‌ ಮೂರು ದಿನಗಳಿಂದ ಮಾಧ್ಯಮಗಳು ಹಾಗೂ ಪಕ್ಷದ ನನ್ನ ಸ್ನೇಹಿತರು ನನ್ನನ್ನು ಖಳನಾಯಕನ್ನಾಗಿ ಬಿಂಬಿಸುತ್ತಿದ್ದಾರೆ. ಇದು ಮನಸ್ಸಿಗೆ ಬಹಳ ನೋವಾಗಿದೆ ಎಂದಿದ್ದಾರೆ. ನನ್ನನ್ನು ಖಳನಾಯನನ್ನಾಗಿ ಮಾಡಲು ಯತ್ನ […]

ಬಿಜೆಪಿ ಮೂರು ಪಕ್ಷದ ಸರ್ಕಾರ ಎಂದು ಯೋಗೇಶ್ವರ್ ಹೇಳಿಕೆ ನೀಡುವುದು ಸರಿಯಲ್ಲ: ಕೆ.ಎಸ್.ಈಶ್ವರಪ್ಪ

Friday, May 28th, 2021
eshwarappa

ಶಿವಮೊಗ್ಗ: ಬಿಜೆಪಿ ಮೂರು ಪಕ್ಷದ ಸರ್ಕಾರ ಎಂದು ಸಿ.ಪಿ.ಯೋಗೇಶ್ವರ್  ಹೇಳಿಕೆ ನೀಡುವುದು ಸರಿಯಲ್ಲ. ಹೋದ ಕಡೆಯಲ್ಲೆಲ್ಲಾ ಮಾಧ್ಯಮವರು ಕೇಳುತ್ತಾರೆ. ಸರ್ಕಾರದಲ್ಲಿ ಇರಲು ಮನಸ್ಸಿಲ್ಲದಿದ್ದರೆ ಸಂಪುಟದಿಂದ ಹೊರ ಹೋಗಬಹುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದರು. ಯಾವುದೇ ಸಮಸ್ಯೆಗಳಿದ್ದರೆ ನಾಲ್ಕು ಗೋಡೆಯ ಮಧ್ಯೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲಿ. ಅದು ಬಿಟ್ಟು ದೆಹಲಿಗೆ ಹೋಗುವುದು, ಸಿಎಂ ವಿರುದ್ಧ ದೂರು ಹೇಳುವುದು ಸರಿಯಲ್ಲ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಅವರಿಗೆ ಅಗತ್ಯ ಸ್ಥಾನಮಾನ ನೀಡಿದೆ. ಯೋಗೀಶ್ವರ್ ನನ್ನ ಒಳ್ಳೆಯ ಸ್ನೇಹಿತ. ಆದರೂ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ […]

ದಿಲ್ಲಿಗೆ ಹೋಗಿ ಏನ್ ಮಾಡ್ತಿಯಾ?: ಯೋಗೇಶ್ವರ್ ಮೇಲೆ ರೇಣುಕಾಚಾರ್ಯ ಗರಂ

Friday, May 14th, 2021
Renukacharya

ದಾವಣಗೆರೆ: ಸಚಿವ ಸಿ. ಪಿ. ಯೋಗೇಶ್ವರ್ ವಿರುದ್ಧ ವಾಗ್ದಾಳಿ ಮತ್ತೆ ಮುಂದುವರೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸೋತರೂ ಮಂತ್ರಿ ಮಾಡಿದ್ದಕ್ಕೆ ದೆಹಲಿಯಲ್ಲಿ ಲಾಬಿ ಮಾಡ್ತೀಯಾ‌. ಯಾರೋ ಒಬ್ಬರು ಲಾಬಿ ಮಾಡಿದಾಕ್ಷಣ ಸಿಎಂ ಬದಲಾವಣೆ ಮಾಡ್ತಾರಾ. ಕೊರೊನಾ ಸಂಕಷ್ಟ ಇರುವ ಕಾರಣಕ್ಕೆ ರಾಜಕಾರಣ ಬೇಡ ಅಂತಾ ಸುಮ್ಮನಿದ್ದೇನೆ. ಇದೆಲ್ಲಾ ಮುಗಿದ ಮೇಲೆ ಮಾತನಾಡ್ತೇನೆ ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದ ಜನರು ಕುಡಿಯಲು ನೀರಿಲ್ಲ, ವೆಂಟಿಲೇಟರ್, ಆಕ್ಸಿಜನ್ […]

ಪತ್ರಕರ್ತರ ಕ್ಷೇಮಾಭಿವೃದ್ಧಿನಿಧಿಗೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಚಾಲನೆ

Saturday, March 20th, 2021
Journalist welfare

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ ಆರಂಭಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೀಶ್ವರ್ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಜಿಲ್ಲಾಧಿಕಾರಿ ಡಾ. […]

ಉಪಚುನಾವಣೆ ಹಿನ್ನೆಲೆಯಲ್ಲಿ ಹುಣಸೂರಿನಲ್ಲಿ ಹಂಚಲು ತಂದಿದ್ದ 30 ಸಾವಿರ ಸೀರೆ ವಶ

Saturday, November 16th, 2019
ಉಪಚುನಾವಣೆ ಹಿನ್ನೆಲೆಯಲ್ಲಿ ಹುಣಸೂರಿನಲ್ಲಿ ಹಂಚಲು ತಂದಿದ್ದ 30 ಸಾವಿರ ಸೀರೆ ವಶ

ಮೈಸೂರು : ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್ ಗೆ  ಮತ ನೀಡಿ ಎನ್ನುವ ಕರಪತ್ರಗಳಿವೆ. ಈ ಕುರಿತು ಸಿ.ಪಿ.ಯೋಗೇಶ್ವರ್ ಚುನಾವಣೆ ಮೊದಲೇ ಸಭೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ […]

ರಾಮನಗರ ಉಪ ಚುನಾವಣೆ, ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್..!

Saturday, May 26th, 2018
yogishwar

ರಾಮನಗರ: ರಾಮನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರ ಎದುರು ಸೋತಿದ್ದ ಸಿಪಿ ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರ ಪ್ರಾಬಲ್ಯ ಹೆಚ್ಚಿದ್ದು ಸಿಪಿ ಯೋಗೀಶ್ವರನ್ನು ಕಳೆದುಕೊಳ್ಳುವುದು ಬೇಡ ಎಂಬ ಉದ್ದೇಶದಿಂದ ಯೋಗೇಶ್ವರ್‌ಗೆ ಮತ್ತೊಂದು ಅವಕಾಶವನ್ನು ಬಿಜೆಪಿ ನೀಡಿದೆ. ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಎದುರು ಸೋಲನ್ನನುಭವಿಸಿದ್ದರು. ರಾಮನಗರದಲ್ಲೂ ಚುನಾವಣೆಗೆ ಸ್ಪರ್ಧಿಸಿದ್ದ ಕುಮಾರಸ್ವಾಮಿ ಅವರು ಅಲ್ಲಿ ಗೆದ್ದ ನಂತರ ಚನ್ನಪಟ್ಟಣದ ಸ್ಥಾನ ಉಳಿಸಿಕೊಂಡು ರಾಮನಗರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು […]

ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆ

Wednesday, March 12th, 2014
CP-Yogeshwar

ನವದೆಹಲಿ: ಚನ್ನಪಟ್ಟಣ ಕ್ಷೇತ್ರದ ಸಮಾಜವಾದಿ ಪಕ್ಷದ ಏಕೈಕ ಶಾಸಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಂಗಳವಾರ ಎಐಸಿಸಿ ಯೋಗೇಶ್ವರ್ಗೆ ಹಸಿರು ನಿಶಾನೆ ನೀಡಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಲೋಕಸಭಾ ಉಪ ಚುನಾವಣೆ ವೇಳೆ ಪರೋಕ್ಷವಾಗಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಲೆಕ್ಕಾಚಾರಗಳು ಬದಲಾಗಿವೆ. ಜೆಡಿಎಸ್ ವಶದಲ್ಲಿದ್ದ ಆ ಕ್ಷೇತ್ರವನ್ನು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಶಪಡಿಸಿಕೊಂಡಿತ್ತು. ಡಿ.ಕೆ.ಶಿವಕುಮಾರ್ ಅವರ ಸಹೋದರ […]