11 ಮರಳು ಸಾಗಣೆ ಲಾರಿ ವಶ

Thursday, April 7th, 2011
ಮರಳು ಸಾಗಣೆ ಲಾರಿ ವಶ

ಮಂಗಳೂರು : ಮಂಗಳೂರು ತಾಲೂಕು ವ್ಯಾಪ್ತಿಯ ಅಡ್ಯಾರ್, ಉಳಾಯಿಬೆಟ್ಟು ಮತ್ತು ಬಂಟ್ವಾಳ ತಾಲೂಕಿನ ಪೊಳಲಿ, ಬರಿಮಾರ್ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ 11 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 5 ಮರಳು ತುಂಬಿದ ಲಾರಿಗಳು ಮತ್ತು 6 ಖಾಲಿ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಕಂದಾಯ ಇಲಾಖೆ ಈ ದಾಳಿಯ ನೇತೃತ್ವ ವಹಿಸಿತ್ತು. ಗಣಿ ಇಲಾಖೆ ಅಧಿಕಾರಿಗಳು ಬಳಿಕ ಘಟನಾ ಸ್ಥಳಕ್ಕೆ ತಲುಪಿ ಕಾನೂನು ಕ್ರಮಕೈಗೊಂಡಿದ್ದಾರೆ. 420, 379 ನಿಯಮಗಳಡಿ ಎಫ್ ಐ ಆರ್ ದಾಖಲಿಸಿದ್ದು, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. […]

ಪುನರ್ವಸತಿ ಯೋಜನೆ ಅನುಷ್ಠಾನ: ಸ್ಥಳೀಯರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

Friday, March 4th, 2011
ಪುನರ್ವಸತಿ ಯೋಜನೆ ಅನುಷ್ಠಾನ

ಮಂಗಳೂರು : ಕುದುರೆಮುಖ ರಾಷ್ಟ್ರೀಯ ಪುನರ್ವಸತಿ ಯೋಜನೆಯನ್ವಯ ಅರಣ್ಯದೊಳಗಿಂದ ಹೊರಬಂದು ವಾಸಿಸಲು ಒಪ್ಪುವ ಕುಟುಂಬಗಳಿಗೆ ಪರಿಹಾರ  ಹಾಗೂ ಪೂರಕ ವ್ಯವಸ್ಥೆಗಳನ್ನು ನೀಡಲು ಪ್ರತೀ ಬುಧವಾರ ಸಂಬಂಧಪಟ್ಟ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವಾರಕ್ಕೊಂದರಂತೆ ಒಂದು ಪ್ರಕರಣವನ್ನು ಇತ್ಯರ್ಥ ಪಡಿಸುವಂತೆ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಳ್ತಂಗಡಿಯ ನಾರಾವಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಬಳಿಕ ಕುತ್ಲೂರಿನ ಅಳಂಬ, ನೆಲ್ಲಿಪಡ್ಕದ ಮನೆಗಳಿಗೆ ಭೇಟಿ ನೀಡಿ ಅವರ ಅಭಿಪ್ರಾಯಗಳನ್ನು […]

ದ.ಕ.ಜಿಲ್ಲೆಯಲ್ಲಿ 1.96ಲಕ್ಷ ಎಕರೆ ಸರಕಾರಿ ಭೂಮಿ ಒತ್ತುವರಿ-ಸುಬೋಧ್ ಯಾದವ್

Wednesday, February 9th, 2011
ಸುಬೋಧ್ ಯಾದವ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ 5,63,000 ಎಕರೆ ಸರಕಾರಿ ಭೂಮಿ ಇದ್ದು,ಇದರಲ್ಲಿ 1,96,000 ಎಕರೆಗೆ ಭೂಮಿಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಚೇರಿಯಲ್ಲಿ ನಡೆದ ಸರಕಾರಿ ಭೂಮಿ ಒತ್ತುವರಿ ತೆರವುಗೊಳಿಸುವ ಕುರಿತಾದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೆಳ್ತಂಗಡಿ ತಾಲೂಕಿನಲ್ಲಿ 2 ಲಕ್ಷ ಎಕರೆ ಸರಕಾರಿ ಜಮೀನು ಇದ್ದು,ಇದರಲ್ಲಿ 50,000 ಎಕರೆ ಜಮೀನು ಒತ್ತುವರಿಯಾಗಿದೆ. ಇದೇ ರೀತಿ ಸುಳ್ಯ ತಾಲ್ಲೂಕಿನಲ್ಲಿರುವ 1.20 ಲಕ್ಷ […]

ಮಂಗಳೂರು ನಾಗರೀಕರ ಸುಖಕರ ಪ್ರಯಾಣಕ್ಕೆ ಕೆಎಸ್ಅರ್ ಟಿಸಿ ಬಸ್ಸುಗಳು

Thursday, January 6th, 2011
ಸುಬೋಧ್ ಯಾದವ್

ಮಂಗಳೂರು ಜ 6 : ಖಾಸಗಿ ಬಸ್ಸುಗಳ ಮೇಲಾಟದಿಂದ ಮಂಗಳೂರು ನಾಗರೀಕರಿಗೆ ಪ್ರಯಾಣ ಪ್ರಯಾಸವಾಗಿದ್ದು,ಇದರಿಂದ ಮುಕ್ತಿ ಹೊಂದಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಗರ ಸಾರಿಗೆ ಬಸ್ಗಳನ್ನು ಓಡಿಸಲು ಪರವಾನಗಿ ನೀಡುವಂತೆ  ಕೆಎಸ್ಆರ್ಟಿಸಿ ಕಾನೂನು ಅಧಿಕಾರಿ ರಾಜೇಶ್ ಶೆಟ್ಟಿ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀ ಸುಬೋಧ್ ಯಾದವ್ ಅವರನ್ನು ಕೋರಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ವಿಷಯವನ್ನು ಪ್ರಾಧಿಕಾರದ […]

ಕರ್ತವ್ಯಲೋಪ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

Monday, December 27th, 2010
ಸುಬೋಧ್ ಯಾದವ್

ಮಂಗಳೂರು : ಲೋಕಾಯುಕ್ತರು ಜಿಲ್ಲಾಧಿಕಾರಿಗಳಿಗೆ ಬರೆದಿರುವ ಪತ್ರಗಳನ್ನು ಜಿಲ್ಲಾಧಿಕಾರಿಗಳ  ಗಮನಕ್ಕೆ ತರದೆ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ವಿಳಂಬ ಮಾಡಿ ಕರ್ತವ್ಯ ಲೋಪವೆಸಗಿರುವ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರು ತೀವ್ರ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ತಾಲೂಕಿನ ಕದ್ರಿ ಗ್ರಾಮದ ಸರ್ವೇ ನಂಬರ್ 266/3ಎಪಿ1 ರಲ್ಲಿ 0.10 ಎಕ್ರೆ ಜಮೀನನ್ನು ಶ್ರೀಮತಿ ದುಲ್ಸಿನ್ ಡಿಸೋಜ ಅವರಿಗೆ ಪೆಟ್ರೋಲ್ ಬಂಕ್ ಗೆ ಲೀಸ್ ಗೆ ನೀಡಲಾಗಿತ್ತು. ಅವರು ಲೀಸ್ ಗೆ ನೀಡಲಾದ ಜಮೀನನ್ನು ಹೊರತುಪಡಿಸಿ ಸರಕಾರಿ ಜಮೀನನ್ನು […]

ನಿಗದಿತ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕು: ಜಿಲ್ಲಾಧಿಕಾರಿ ಸೂಚನೆ

Wednesday, December 15th, 2010
ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್

ಮಂಗಳೂರು : ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 8ರಿಂದ 12ಗಂಟೆಯವರೆಗೆ, ಸಂಜೆ 4ರಿಂದ 8 ಗಂಟೆಯವರೆಗೆ ತೆರೆದಿರಬೇಕು. ಅಂಗಡಿಗಳಲ್ಲಿರುವ ಪದಾರ್ಥಗಳು ಮತ್ತು ಬೆಲೆ ಬಗ್ಗೆ ಸವಿವರ ಬೋರ್ಡ್ ಹಾಕಿರಬೇಕು; ತೂಕದಲ್ಲಿ ವ್ಯತ್ಯಾಸವಿದೆ ಎಂಬ ಆರೋಪಗಳು ಬರಬಾರದು ಎಂದು ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಮನ್ವಯ ಸಮಿತಿ ಪ್ರಗತಿ ಪರಿಶೀಲನೆ ಸಭೆಯನ್ನು ದ್ದೇಶಿಸಿ ಮಾತನಾಡುತ್ತಿದ್ದರು. ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರಬಾರದು ಎಂದು ಹೇಳಿದ ಅವರು, ಎರಡು ತಿಂಗಳಿಗೊಮ್ಮೆ […]

ಜಿಲ್ಲೆಯ ಎಲ್ಲ ಕಲ್ಲುಕೋರೆಯ ಕಾರ್ಮಿಕರ ಬಗ್ಗೆ ವರದಿ ನೀಡಲು ಏಳು ದಿನಗಳ ಕಾಲಮಿತಿ

Sunday, December 5th, 2010
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು :  ಕಾರ್ಮಿಕ ಇಲಾಖೆ ಕಂದಾಯ ಮತ್ತು ಗಣಿವಿಜ್ಞಾನ ಇಲಾಖೆಯ ಸಹಕಾರದಿಂದ ಜಿಲ್ಲೆಯ ಎಲ್ಲ ಕಲ್ಲುಕೋರೆಯಲ್ಲಿರುವ ಕಾರ್ಮಿಕ ವ್ಯವಸ್ಥೆಯ ಬಗ್ಗೆ ಏಳುದಿನಗಳೊಳಗೆ ಸಮಗ್ರ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀ ಅಪ್ಪಯ್ಯ ಶಿಂಧಿಹಟ್ಟಿ ಅವರಿಗೆ ಸೂಚನೆ ನೀಡಿದರು. ಅಧಿಕಾರಿಗಳು ಮಾನವಹಕ್ಕು ಆಯೋಗದ ನಿರ್ದೇಶನದಂತೆ ಜೀತಪದ್ಧತಿ ಹಾಗೂ ಬಾಲಕಾರ್ಮಿಕ ವ್ಯವಸ್ಥೆಯ ನಿರ್ಮೂಲನಕ್ಕೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕಾನೂನನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದರೆ ವಿಟ್ಲದಲ್ಲಿ ವರದಿಯಾದ ಜೀತಪದ್ಧತಿಗೆ […]