ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆ ಜ.21ರಂದು ಉದ್ಘಾಟನೆಗೊಳ್ಳಲಿದೆ

Wednesday, January 17th, 2018
campo-ltd

ಮಂಗಳೂರು: ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆ ಆವರಣದಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಎಮಿನಿಟಿ ಕಟ್ಟಡ (ಸೌಲಭ್ಯ ಸೌಧ) ಜ.21ರಂದು ಉದ್ಘಾಟನೆಗೊಳ್ಳಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದರು. ಮಂಗಳೂರಿನ ಕ್ಯಾಂಪ್ಕೋ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಬೆಳಗ್ಗೆ 10 ಗಂಟೆಗೆ ನೂತನ ಕಟ್ಟಡವನ್ನು ಉದ್ಘಾಟಿಸುವರು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷ ವಾರಣಾಶಿ ಸುಬ್ರಾಯ ಭಟ್ಟರ ಪ್ರತಿಮೆಯನ್ನು ಕೇಂದ್ರದ ಅಂಕಿ ಅಂಶಗಳು […]

ಉಳಿತಾಯ ಮನೋಭಾವದಿಂದ ಬದುಕು ಸದೃಢವಾಗಲು ಸಾಧ್ಯ: ಡಾ. ಡಿ. ವೀರೇಂದ್ರ ಹೆಗ್ಗಡೆ

Monday, December 18th, 2017
virendra-hegde

ಮಂಗಳೂರು: ಒಬ್ಬ ವ್ಯಕ್ತಿ ತನ್ನ ದುಡಿಮೆಯಲ್ಲಿ ಕಿಂಚಿತ್ತಾದರೂ ಉಳಿತಾಯ ಮಾಡುವುದರಿಂದ ಮುಂದಿನ ಬದುಕು ಸದೃಢವಾಗಲು ಹಾಗೂ ಸಣ್ಣ ಮೊತ್ತದ ಆರೋಗ್ಯ ವಿಮೆ ಮಾಡಿಸುವುದರಿಂದ ಕಾಯಿಲೆ ಬಂದ ಸಂದರ್ಭ ಚಿಕಿತ್ಸೆಗೆ ಸಹಾಯವಾಗುತ್ತದೆ. ಉತ್ತಮ ಆರೋಗ್ಯ ಹಾಗೆಯೇ ಆಯುಷ್ಯ ಗಟ್ಟಿಯಾಗಿರಬೇಕಾದರೆ ಸಣ್ಣ ಉಳಿತಾಯ ಹಾಗೂ ಆರೋಗ್ಯ ವಿಮೆ ಅತ್ಯಗತ್ಯವಾಗಿದ್ದು, ಚಿಕಿತ್ಸೆಯ ಸಂದರ್ಭ ಹಣಕ್ಕಾಗಿ ಕಷ್ಟಪಡುವುದಕ್ಕೆ ಮುಕ್ತಿ ಕೊಡಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘದ […]