ಯುವತಿಯ ಫೇಸ್ ಬುಕ್ ನಕಲಿ ಖಾತೆ, ಕಡಬದ ಯುವಕನ ಬಂಧನ

Saturday, September 4th, 2021
cyber Crime

ಕಡಬ : ಯುವತಿ ಯೊಬ್ಬಳ ಫೇಸ್ ಬುಕ್ ಖಾತೆ ನಕಲಿ ಮಾಡಿದ್ದಕ್ಕೆ ಸೈಬರ್‌ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಕಡಬದ ಯುವಕನೋರ್ವನನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ, ಮಂಗಳೂರಿನಲ್ಲಿ ಟ್ರೇಡಿಂಗ್‌ ವ್ಯವಹಾರ ನಡೆಸುತ್ತಿರುವ ಸಂಜಯ್‌ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯೋರ್ವಳ ಹೆಸರಿನ ನಕಲಿ ಸಾಮಾಜಿಕ ಜಾಲತಾಣ ಖಾತೆ ತೆರೆದ ಆರೋಪದ ಮೇರೆಗೆ ಸಂಜಯ್‌ ಕೃಷ್ಣನನ್ನು ಬಂಧಿಸಲಾಗಿದೆ. ತನ್ನ ಹೆಸರಿನ ನಕಲಿ ಸಾಮಾಜಿಕ […]

ಬಿ.ಸಿ.ರೋಡು ಯುವಕನ ಕೊಲೆಯತ್ನ ಪ್ರಕರಣ, ನೈಜ ಆರೋಪಿಗಳ ಪತ್ತೆಗೆ ಪೋಷಕರ ಆಗ್ರಹ

Wednesday, April 7th, 2021
Ajjibettu

ಬಂಟ್ವಾಳ:  ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಬಳಿ ಇದೇ 4ರಂದು ರಾತ್ರಿ ಸುಮಾರು 7.30 ಗಂಟೆಗೆ ಅಪರಿಚಿತ ದುಷ್ಕರ್ಮಿಗಳಿಂದ ತಲೆಗೆ ಸೇರಿದಂತೆ ಕೆನ್ನೆ ಮತ್ತು ಕೈಗಳಿಗೆ ಹರಿತವಾದ ಕತ್ತಿಯಿಂದ ಹಲ್ಲೆಗೀಡಾದ ಮನೋಜ್ ಗಾಣಿಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು, ಈ ಕೃತ್ಯದ ಹಿಂದಿರುವ ನೈಜ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು ಗಾಯಾಳುವಿನ ತಂದೆ ಭೋಜ ಸಪಲ್ಯ ಬ್ರಹ್ಮರಕೂಟ್ಲು ಇವರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ ಕಳೆದ 10 ವರ್ಷಗಳಿಂದ ವಿದೇಶದಲ್ಲಿ ಎಂಜಿನಿಯರ್ […]

ಬ್ಯಾಂಕ್‌ ಎಟಿಎಂಗಳಲ್ಲಿ ಹಣ ವಂಚಿಸುವ ಬೃಹತ್ ಜಾಲದ ನಾಲ್ವರ ಬಂಧನ

Thursday, February 25th, 2021
scimming

ಮಂಗಳೂರು : ಸ್ಕಿಮ್ಮಿಂಗ್ ಯಂತ್ರದ ಉಪಕರಣ ಅಳವಡಿಸಿ ಬ್ಯಾಂಕ್‌ ಗಳ ಎಟಿಎಂಗಳಲ್ಲಿ ಹಣ ವಂಚಿಸುವ ಬೃಹತ್ ಜಾಲವನ್ನು ಭೇದಿಸಿದ ಮಂಗಳೂರು ಸೈಬರ್ ಕ್ರೈಂ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಈ ಮಧ್ಯೆ ಕೃತ್ಯ ಎಸಗಿ ಪರಾರಿಯಾಗುವ ಯತ್ನದಲ್ಲಿ ಬಿದ್ದು ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತರಿಂದ ಕಾರು, ನಕಲಿ ಎಟಿಎಂ ಕಾರ್ಡ್‌ಗಳು, ಮೊಬೈಲ್ ವಶಪಡಿಸಲಾಗಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಕಳೆದ ವರ್ಷದ ನವೆಂಬರ್‌ನಿಂದ ಈವರೆಗೆ […]

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ವಜ್ರದ ಆಸೆಗೆ 1.35 ಲಕ್ಷ ರೂ. ಕಳಕೊಂಡ ಮಂಗಳೂರಿನ ವ್ಯಕ್ತಿ

Wednesday, January 27th, 2021
daimond

ಮಂಗಳೂರು : ವ್ಯಕ್ತಿ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು 1.35 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆ ಕರೆ ಮಾಡಿ, ದಿಲ್ಲಿ ಕಸ್ಟಮ್ಸ್ ಆಫೀಸರ್ ಎಂದು ಹೇಳಿ ಏರ್‌ಪೋರ್ಟ್‌ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ ಅವರು ಕಳುಹಿಸಿದ […]

ಮಂಗಳೂರು : ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪ; ಯುವಕ ಬಂಧನ

Tuesday, December 31st, 2019
Moidin

ಮಂಗಳೂರು : ಗಲಭೆ ನಡೆಯಬೇಕೆಂಬ ದುರುದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆಯ ಸಂದೇಶ ರವಾನಿಸಿದ ಆರೋಪದ ಮೇಲೆ ನಗರದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರ ನಿವಾಸಿ ಮೊಯ್ದಿನ್ ಹಫೀಜ್(25) ಬಂಧಿತ ಆರೋಪಿ. ಈತ ಗಲಭೆ ನಡೆಯಬೇಕೆಂಬ ದುರುದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ರವಾನಿಸಿದ್ದ ಎನ್ನಲಾಗ್ತಿದೆ. ಡಿ.19ರಂದು ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧ ಎಂದು ಪೊಲೀಸರು ತಿಳಿಸಿದ್ದರು. ಈ ಹಿಂದೆಯೇ ಪ್ರಚೋದಕ ರೀತಿಯಲ್ಲಿ ಸಂದೇಶ ರವಾನಿಸಿದ್ದ […]

ಮಹಿಳೆಯರು, ವಿದ್ಯಾರ್ಥಿನಿಯರ ದೂರಿನ ತ್ವರಿತ ಪರಿಶೀಲನೆಗೆ ಪಿಂಕ್​ಗ್ರೂಪ್​ ರಚನೆ : ಡಾ.ಪಿ.ಎಸ್.ಹರ್ಷ

Friday, October 11th, 2019
harsha

ಮಂಗಳೂರು : ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ.ಎಸ್. ಹರ್ಷ ಉದ್ಘಾಟಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗದೊಂದಿಗೆ ಈ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕಮೀಷನರ್ ಡಾ.ಪಿ.ಎಸ್ .ಹರ್ಷ, […]

ನಾಪತ್ತೆಯಾಗಿದ್ದ ಬಾಲಕ ಜಾಲತಾಣ ಫೇಸ್‌ಬುಕ್ ಮೂಲಕ ಮುಂಬೈಯಲ್ಲಿ ಪತ್ತೆ

Saturday, October 14th, 2017
Manipala

ಉಡುಪಿ:  ಸಾಮಾಜಿಕ ಜಾಲತಾಣ ಫೇಸ್‌ಬುಕ್ ಮೂಲಕ ಮಣಿಪಾಲದಿಂದ ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನನ್ನ್ನುಮುಂಬೈಯಲ್ಲಿ ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಇದೀಗ ಯಶಸ್ವಿಯಾಗಿದ್ದಾರೆ. ಪತ್ತೆಯಾದ ಬಾಲಕನನ್ನು ಮಣಿಪಾಲ ಅನಂತನಗರದ ಹುಡ್ಕೋ ಕಾಲನಿಯ ಶ್ರೀಧರ್ ಕೆ.ಅಮೀನ್ ಎಂಬವರ ದತ್ತು ಪುತ್ರ ಪ್ರೇಮ್ ಕಿರಣ್(13) ಎಂದು ಗುರುತಿಸಲಾಗಿದೆ. ಈತ 2015ರ ಜ.20ರಂದು ಸಂಜೆ 4 ಗಂಟೆ ಸುಮಾರಿಗೆ ಮನೆಯಿಂದ ಮಣಿಪಾಲ ಎಂಐಟಿ ಮೈದಾನಕ್ಕೆ ಆಡಿ ಬರುವುದಾಗಿ ಹೇಳಿ ಹೋದವನು ವಾಪಸ್ ಬಾರದೆ ನಾಪತ್ತೆಯಾಗಿದ್ದನು. ಪ್ರೇಮ್ ಕಿರಣ್‌ಗಾಗಿ ಹುಡುಕಾಡಿದ ಶ್ರೀಧರ್ ಅಮೀನ್ […]