ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿ ಮಾಡುತ್ತಿರುವುದು ದೇಶಕ್ಕೆ ಅವಮಾನ : ಡಿ ಕೆ ಶಿವಕುಮಾರ್

Monday, February 7th, 2022
DK Shivakumar

ಮಂಗಳೂರು : ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿ ಮಾಡುತ್ತಿರುವುದು ದೇಶಕ್ಕೆ ಅವಮಾನ, ವಿಶ್ವದ ಭೂಪಟದಲ್ಲಿ ಭಾರತವನ್ನು ಗುರುತಿಸುವ ಮೊದಲು ಜನ ಕರ್ನಾಟಕದತ್ತ ನೋಡುತ್ತಿದ್ದರೂ. ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ  ಅದರಲ್ಲೂ ಕರಾವಳಿ ಶಿಕ್ಷಣ, ವೈದ್ಯಕೀಯ ಕ್ಷೇತ್ರದ ಮೂಲಕದ ಮಹತ್ವದ ಕೊಡುಗೆ ನೀಡಿದ ಪ್ರದೇಶ. ಇಲ್ಲಿ ಎಲ್ಲಾ ಧರ್ಮದ ಜನರು ಪರಸ್ಪರ ಗೌರವದೊಂದಿಗೆ ಅವರವರ ಧಾರ್ಮಿಕ ಆಚಾರ ವಿಚಾರಗಳೊಂದಿಗೆ ಸೌಹಾರ್ದತೆಯೊಂದಿಗೆ ಬದುಕಬೇಕೆನ್ನುವುದು ಕಾಂಗ್ರೆಸ್ ಆಶಯ. ನ್ಯಾಯಾಲಯ ಮೇಲೆ ನಮಗೆ […]

ಎ.ಐ.ಸಿ.ಸಿ.ಕಾರ್ಯದರ್ಶಿಯಾಗಿ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜ ನೇಮಕ

Saturday, December 19th, 2020
IvanDSouza

ಮಂಗಳೂರು  : ಎ.ಐ.ಸಿ.ಸಿ.ಕಾರ್ಯದರ್ಶಿಯಾಗಿ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರು ನೇಮಕ-ಕೇರಳ ರಾಜ್ಯದ ಹೊಣೆಗಾರಿಕೆ; ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ಇವರು ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ, ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರನ್ನು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಕೂಡಲೇ ಜಾರಿಗೆ ತರುವಂತೆ ನೇಮಕ ಮಾಡಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಶ್ರೀ ಕೆ.ಸಿ.ವೇಣುಗೋಪಾಲ್ ಇವರು ಆದೇಶವನ್ನು ಹೊರಡಿಸಿದ್ದಾರೆ. […]

ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ನಿಧನ

Wednesday, November 25th, 2020
Ahmed Pateel

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ (71 ವರ್ಷ) ಅವರು ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ. ಸೋನಿಯಾ ಗಾಂಧಿ ಆಪ್ತ ಎಂದೇ ಬಿಂಬಿತವಾಗಿದ್ದ ಕಾಂಗ್ರೆಸ್‌ನ ನಿಷ್ಠಾವಂತ ನಾಯಕ  ಅಹ್ಮದ್ ಪಟೇಲ್ ಕಳೆದ ತಿಂಗಳು ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಹ್ಮದ್‌ ಪಟೇಲ್ ಅವರು ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇದೀಗ ಅವರ ನಿಧನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು […]

ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಸೋನಿಯಾ ಗಾಂಧಿ

Wednesday, October 23rd, 2019
sonia-gandhi

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಬುಧವಾರ ಬೆಳಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಅಂಬಿಕಾ ಸೋನಿ ಭೇಟಿಯಾಗಿ ಕುಶಲೋಪರಿ ನಡೆಸಿದರು. ತಿಹಾರ್ ಜೈಲಿಗೆ ಭೇಟಿ ನೀಡಿದ ವೇಳೆ ಸಂಸದ, ಡಿಕೆ ಸಹೋದರ ಡಿಕೆ ಸುರೇಶ್ ಕೂಡಾ ಜತೆಗಿದ್ದರು ಎಂದು ವರದಿ ತಿಳಿಸಿದೆ. ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತ […]

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಶಿಮ್ಲಾದಿಂದ ದೆಹಲಿಗೆ ವಾಪಸ್‌

Friday, March 23rd, 2018
sonia-gandhi

ನವದೆಹಲಿ: ಯುಪಿಎ ಮುಖ್ಯಸ್ಥೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೀಗಾಗಿ ಹಿಮಾಚಲ ಪ್ರದೇಶದ ಶಿಮ್ಲಾ ಪ್ರವಾಸದಲ್ಲಿದ್ದ ಸೋನಿಯಾ ಅವರನ್ನು ದೆಹಲಿಗೆ ರವಾನಿಸಲಾಗಿದೆ. ಸೋನಿಯಾ ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯೊಂದಿಗೆ ಎರಡು ದಿನಗಳ ಕಾಲ ಶಿಮ್ಲಾ ಪ್ರವಾಸದಲ್ಲಿದ್ದರು. ಆದರೆ, ಕಳೆದ ರಾತ್ರಿ ಶಿಮ್ಲಾದ ಹೋಟೆಲ್‌ನಲ್ಲಿ ತಂಗಿದ್ದಾಗ ಸೋನಿಯಾ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗಿದೆ. ಆಗ ತಕ್ಷಣವೇ ಚಿಕಿತ್ಸೆಗೆಂದು ಅವರನ್ನು ಶಿಮ್ಲಾದಿಂದ ಚಂಡೀಗಢ್‌ನ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ರವಾನಿಸಲಾಗಿದೆ. ಸೋನಿಯಾರನ್ನು ತಪಾಸಣೆ ನಡೆಸಿದ ಅಲ್ಲಿನ […]

ಭಾರತವನ್ನು ಮುನ್ನಡೆಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ರಾಹುಲ್ ಗಾಂಧಿ

Saturday, March 17th, 2018
rahul-gandhi

ನವದೆಹಲಿ : ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತವನ್ನು ಮುನ್ನಡೆಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು. 84ನೇ ಕಾಂಗ್ರೆಸ್ ಸಮಗ್ರ ಅಧಿವೇಶನದ 2ನೇ ದಿನ ಮಾತನಾಡಿದ ಅವರು, ಭಾರತವನ್ನು ಒಗ್ಗೂಡಿಸಲು, ಮುನ್ನಡೆಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ದೇಶದ ಜನತೆ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯವರು ಕೋಪವನ್ನು ಬಳಸುತ್ತಾರೆ, ನಾವು ಪ್ರೀತಿಯನ್ನು ಬಳಸೋಣ. ಇದೇ ನಮ್ಮ ಮತ್ತು […]

ನೈತಿಕತೆಯಿದ್ದರೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ: ಜನಾರ್ದನ ಪೂಜಾರಿ

Saturday, November 12th, 2016
Janardana poojary

  ಮಂಗಳೂರು: ಸಿಎಂ ಅವರೇ, ನಿಮಗೆ ನೈತಿಕತೆಯಿದ್ದರೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಜೆಯೊಳಗೆ ಸಚಿವ ಸಂಪುಟದಿಂದ ವಜಾ ಮಾಡಿ ಎಂದು ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಸಿಎಂ ಅವರೇ ತನ್ವೀರ್ ಸೇಠ್‌ ರಾಜೀನಾಮೆ ತೆಗೆದುಕೊಳ್ಳಲು ಆಗದಿದ್ದರೆ. ಅದನ್ನು ಜನತೆಯ ಮುಂದೆ ನೀವು ದುರ್ಬಲಾಗಿದ್ದೀರಿ ಎಂಬುದನ್ನು ಒಪ್ಪಿಕೊಳ್ಳಿ. ಈಗ ನೀವು ನಿದ್ದೆ ಮಾಡಿದರೆ ಚುನಾವಣೆ ಸಂದರ್ಭದಲ್ಲಿ ಜನರೇ […]

ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ :ಸಿ.ಟಿ.ರವಿ

Wednesday, October 24th, 2012
C T Ravi

ಮಂಗಳೂರು: ಮಂಗಳವಾರ ಮಂಗಳೂರಿಗೆ ಭೇಟಿ ಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಸರ್ಕ್ಯೂಟ್ ಹೌಸ್ ನಲ್ಲಿ  ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ಬಿಟ್ಟು ಹೊಸ ಪಕ್ಷವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿಲ್ಲ, ಒಂದು ವೇಳೆ ಯಡ್ಡಿಯೂರಪ್ಪನವರು ಬಿಜೆಪಿಯಿಂದ ಹೊರನಡೆದರೆ ಅದರಿಂದ ಅವರಿಗೆ ನಷ್ಟವೇ ಹೊರತು ಪಕ್ಷಕ್ಕೆ ಯಾವ ನಷ್ಟವೂ ಇಲ್ಲ, ಅವರ ಹೊರತಾಗಿಯೂ ಪಕ್ಷ ಇನ್ನಷ್ಟು ಬಲಿಷ್ಟವಾಗಿ ಬದುಕಲಿದೆ ಎಂದರು. ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ […]

ಬಾಪೂಜಿಯವರ 142ನೇ ಜನ್ಮದಿನ

Sunday, October 2nd, 2011
Mahatma Gandhi

ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 142ನೇ ಜನ್ಮದಿನವನ್ನು ದೇಶದೆಲ್ಲೆಡೆ ಸಂಭ್ರಮ ಸಡಗರದಿಂದ ಅಕ್ಟೋಬರ್ 2 ರಂದು ಆಚರಿಸಲಾಗುತ್ತಿದೆ. ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನವದಹಲಿಯಲ್ಲಿರುವ ಗಾಂಧಿ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೋನಿಯಾ ಗಾಂಧಿ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಬಿಜೆಪಿ ಹಿರಿಯ ನಾಯಕ ಎಲ್. ಕೆ. ಆಡ್ವಾಣಿ, ದಹೆಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಹಿತ ಹಲವು ಗಣ್ಯರು ಸಹ ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಪುಷ್ಪಾರ್ಪಣೆ ಸಲ್ಲಿಸಿ ನಮನ ಸಲ್ಲಿಸಿದರು. […]