ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಘೋಷಣೆ

Friday, July 2nd, 2021
Arogya Soudha

ಬೆಂಗಳೂರು :  ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿ ವರ್ಷ ಸ್ಮರಿಸಲು ಆರೋಗ್ಯ ಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700 ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು […]

ಮಂಗಳೂರು ಏರ್‌ ಇಂಡಿಯಾ ವಿಮಾನ ದುರಂತಕ್ಕೆ ಹತ್ತು ವರ್ಷ, ನಾಳೆ ತಣ್ಣೀರುಬಾವಿ ಸ್ಮಾರಕದಲ್ಲಿ ಸಂಸ್ಮರಣೆ ಕಾರ್ಯಕ್ರಮ

Thursday, May 21st, 2020
Air-Crash

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಶುಕ್ರವಾರಕ್ಕೆ 10 ವರ್ಷ ಪೂರ್ಣವಾಗುತ್ತದೆ. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದೊಂದು ಮರೆಯಲಾಗದ ದುರಂತ. ದುರಂತದಲ್ಲಿ ಪೈಲಟ್‌, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ಆ ವಿಮಾನದಲ್ಲಿ ಒಟ್ಟು 135 ಮಂದಿ ವಯ ಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು […]

ಶಿವಮೊಗ್ಗ : ಬಾದಾಮಿ ಚಾಲುಕ್ಯರ ಕಾಲದ ಸ್ಮಾರಕ ಶಾಸನ ಪತ್ತೆ

Tuesday, February 11th, 2020
shasana

ಶಿವಮೊಗ್ಗ : ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆ ಹೋಬಳಿ ತಾಳಗುಪ್ಪ ಗ್ರಾಮದಲ್ಲಿ ಬಾದಾಮಿ ಚಾಲುಕ್ಯರ ಕಾಲದ ಸ್ಮಾರಕ ಶಾಸನ ಪತ್ತೆಯಾಗಿದೆ. ಗ್ರಾಮದಲ್ಲಿರುವ ಈಶ್ವರ-ಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಮಾಡುವ ಉದ್ದೇಶದಿಂದ ದೇವಾಲಯದ ಬಾಗಿಲನ್ನು ಬಿಚ್ಚಿದಾಗ ತೋರಣದ ಕಲ್ಲಿನಲ್ಲಿ ಸ್ಮಾರಕ ಶಾಸನ ಪತ್ತೆಯಾಗಿದೆ. 12ನೇ ಶತಮಾನದಲ್ಲಿ ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡುವಾಗ ಈ ಶಾಸನ ನಡುವೆ ಗಂಧ (ರಂಧ್ರ) ಮಾಡಿ ತೋರಣ ಕಲ್ಲಾಗಿ ಬಳಸಲಾಗಿದೆ. ಇದರಲ್ಲಿ ಐದು ಸಾಲಿನ ಪೂರ್ವ ಹಳೆಗನ್ನಡ ಶಾಸನವಿದ್ದು, ನಾಲ್ಕು ಅಕ್ಷರಗಳು ರಂಧ್ರ ಮಾಡಿರುವುದರಿಂದ ಹೋಗಿವೆ. […]