ಗಂಟೆಗೆ 90-100 ಕಿ.ಮೀ.ವೇಗದಲ್ಲಿ ಉತ್ತರ ದಿಕ್ಕಿನತ್ತ ಸಂಚರಿಸಲಿರುವ ‘ತೌಕ್ತೇ’ ಚಂಡಮಾರುತ

Saturday, May 15th, 2021
tauktae

ಮಂಗಳೂರು : ‘ತೌಕ್ತೇ’ ಚಂಡಮಾರುತದ ಪರಿಣಾಮವು ಪಶ್ಚಿಮ ಕರಾವಳಿ ತೀರದ ಮೇಲೆ ಉಂಟಾಗಿದ್ದು ಶನಿವಾರದ ಪೂರ್ಣ ಪ್ರಮಾಣದಲ್ಲಿ ತನ್ನ ಆರ್ಭಟ, ಶಕ್ತಿ ತೋರಿಸಿ ಚಲನೆ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕಾಣಿಸಿಕೊಂಢಿರುವ ಚಂಡಮಾರುತವು ಲಕ್ಷ ದ್ವೀಪವನ್ನು ಕೇಂದ್ರೀಕರಿಸಿದೆ. ಮಧ್ಯಾಹ್ನ ವೇಳೆಗೆ ಕೇರಳದ ಕಣ್ಣೂರಿನಿಂದ 360 ಕಿ.ಮೀ. ಪಶ್ಚಿಮ ಮತ್ತು ನೈರುತ್ಯ ಭಾಗದಲ್ಲಿ ಚಂಡಮಾರುತ ತನ್ನ ಚಲನೆ ಮುಂದುವರಿಸಿದೆ. ಗಂಟೆಗೆ 90-100 ಕಿ.ಮೀ.ವೇಗದಲ್ಲಿ ಉತ್ತರ ದಿಕ್ಕಿನತ್ತ ಸಂಚರಿಸಲಿರುವ ಈ ಚಂಡಮಾರುತ ಮೇ […]

ಕರಾವಳಿಯಲ್ಲಿ ಕ್ಯಾರ್ ಚಂಡಮಾರುತ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Saturday, October 26th, 2019
chandamaarutha

ಮಂಗಳೂರು : ಕ್ಯಾರ್ ಚಂಡಮಾರುತ ಪರಿಣಾಮ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡು ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಇನ್ನೊಂದೆಡೆ ಶುಕ್ರವಾರ ದಿನವಿಡೀ ಸುರಿದ ಭಾರಿ ಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಶುಕ್ರವಾರ ಮುಂಜಾನೆ 5.30ರ ವೇಳೆಗೆ ಚಂಡಮಾರುತವಾಗಿ ಪರಿತರ್ವನೆಗೊಂಡು ಉತ್ತರಕ್ಕೆ ಸಂಚರಿಸಿದೆ. ಮಧ್ಯಾಹ್ನ 2.30ರ ವೇಳೆಗೆ 16.2ಡಿಗ್ರಿ ಉತ್ತರ ಅಕ್ಷಾಂಶ ಮತ್ತು 71.7ಡಿಗ್ರಿ ಪೂರ್ವ ರೇಖಾಂಶದಲ್ಲಿ ಪೂರ್ವ ಮಧ್ಯ ಸಮುದ್ರಲ್ಲಿ ಕೇಂದೀಕೃತವಾಗಿತ್ತು. ಪ್ರಸ್ತತ ಒಮಾನ್ ತೀರದಿಂದ 1880 ಕಿ.ಮೀ.ದೂರದಲ್ಲಿದ್ದು, ಪ್ರತಿ […]

ಹವಾಮಾನ ಇಲಾಖೆ : ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

Saturday, October 26th, 2019
meenugarike

ಮಂಗಳೂರು : ಅರಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಸಿದೆ. ಹವಾಮಾನ ವೈಪರೀತ್ಯದಿಂದಾಗಿ ಮೀನುಗಾರಿಕಾ ಕ್ಷೇತ್ರ ತತ್ತರಿಸಿದೆ. ಮೀನುಗಾರಿಕೆಯ ರಜೆಯ ಅವಧಿ ಮುಗಿದು ಋತು ಆರಂಭವಾದಗಿನಿಂದಲೂ ಚಂಡಮಾರುತ, ಮೀನಿನ ಅಲಭ್ಯತೆ ಯಿಂದಾಗಿ ಕರಾವಳಿಯ ಮೀನುಗಾರಿಕೆಗೆ ತೊಂದರೆಯಾಗುತ್ತಿದ್ದು, ಪರ್ಸಿನ್‌, ಯಾಂತ್ರೀಕೃತ ಬೋಟುಗಳು ನಷ್ಟವನ್ನು ಅನುಭವಿಸುತ್ತಿದೆ. ಇದೀಗ ಚಂಡಮಾರುತದಿ ಂದಾಗಿ ರೆಡ್‌ ಅಲರ್ಟ್‌ ಘೋಷಿಸಿರುವುದು ಮೀನುಗಾರಿಕೆಗೆ ಮತ್ತಷ್ಟು ಹೊಡೆತ ನೀಡಿದೆ. ಇದೀಗ ಮತ್ತೆ ಚಂಡಮಾರುತ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ […]

ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Tuesday, October 22nd, 2019
Red-Alert

ಮಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 4 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯಲಿದೆ. ಅ.23ರಂದು ಬೆಳಗ್ಗೆ 8:30ರಿಂದ ಆರಂಭಗೊಳ್ಳುವ ರೆಡ್ ಅಲರ್ಟ್ ಅ.26ರಂದು ಬೆಳಗ್ಗೆ 8:30ರವೆಗೂ ಮುಂದುವರಿಯಲಿದೆ. ಈ ಸಂದರ್ಭ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ […]

ರಾಜ್ಯಾದ್ಯಂತ ಐದು ದಿನ ಭಾರಿ ಮಳೆ ಹವಾಮಾನ ಇಲಾಖೆ ಮೂನ್ಸೂಚನೆ

Monday, October 14th, 2019
male

ಬೆಂಗಳೂರು : ರಾಜ್ಯಾದ್ಯಂತ ಅ.18ರವರೆಗೆ ಮಿಂಚು-ಗುಡುಗು ಸಹಿತ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದ್ದು, ಒಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸುತ್ತಿರುವ ಮಳೆಯ ತೀವ್ರತೆ ಅ.16ರಿಂದ 18ರ ವರೆಗೆ ಹೆಚ್ಚಾಗಲಿದೆ ಎಂದು ತಿಳಿಸಿದೆ. ಶನಿವಾರ ರಾತ್ರಿ ಸುರಿದ ಮಳೆಗೆ ಶಿವಮೊಗ್ಗದ ಸೊರಬ ತಾಲೂಕಿನಲ್ಲಿ ಹಲವು ಮನೆಗಳ ಗೋಡೆ ಕುಸಿದಿವೆ. ಅಡಕೆ ಮರಗಳು ಮುರಿದು ಬಿದ್ದಿವೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಬೆಳಗೋಡು ಕಾಲನಿಯ ಮನೆಗೆ ಸಿಡಿಲು ಬಡಿದು […]

ಮುಂದಿನ ಮೂರು ದಿನಗಳ ಕಾಲ ಬೆಂಗಳೂರಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Wednesday, October 9th, 2019
rain

ಬೆಂಗಳೂರು : ಮುಂದಿನ ಮೂರು ದಿನಗಳ ಕಾಲ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಸಂಜೆ ವೇಳೆ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದೊಂದು ವಾರದಿಂದ ಆಗಾಗ ಪ್ರತ್ಯಕ್ಷನಾಗಿ ಆರ್ಭಟಿಸುವ ಮಳೆರಾಯ ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ವರ್ಷಧಾರೆ ಸುರಿಸಲಿದ್ದಾನೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಅಕ್ಟೋಬರ್ 12ರವರೆಗೂ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ನಗರದಲ್ಲಿ ಮಂಗಳವಾರವೂ ಮಳೆಯ ಆರ್ಭಟ ಮುಂದುವರೆದ […]

ದ.ಕದಲ್ಲಿ ಭಾರಿ ಮಳೆ ಸಾಧ್ಯತೆ ಇದೆ : ಹವಾಮಾನ ಇಲಾಖೆ

Tuesday, September 3rd, 2019
havy-rain

ಮಂಗಳೂರು : ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಮೂರು ಕಾಲ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಜಿಲ್ಲೆಯಲ್ಲಿ, 115ರಿಂದ 200 ಮಿ.ಮೀ ವರೆಗೂ ಮಳೆ ಸುರಿಯುವುದಾಗಿ ನಿರೀಕ್ಷಿಸಲಾಗಿದೆ. ದ. ಕನ್ನಡ ಜಿಲ್ಲೆಯ ಬೆಳ್ಳಾರೆ, ಕಡಬ ಭಾಗದಲ್ಲಿ ಗುಡುಗು ಸಹಿತ ಮಳೆಯಾದರೆ ಸುಬ್ರಹ್ಮಣ್ಯದಲ್ಲೂ ಉತ್ತಮ ಮಳೆಯಾಗಿದೆ. ಸುಳ್ಯದಲ್ಲಿ ಎರಡು ದಿನಗಳಿಂದ ಮಳೆ ಚುರುಕಾಗಿದ್ದು, ಇನ್ನೂ ಮುಂದುವರಿದಿದೆ. ಮೂಡುಬಿದಿರೆ, […]

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ; ಮುಂಜಾಗ್ರತೆ ವಹಿಸುವಂತೆ ಎಚ್ಚರಿಕೆ

Thursday, August 22nd, 2019
bhari-male

ಮಂಗಳೂರು : ಕರ್ನಾಟಕದ ಕರಾವಳಿಗರಿಗೆ ಮತ್ತೆ ಮಳೆ ಕಂಟಕವಾಗುತ್ತಾ ಎನ್ನುವ ಅನುಮಾನ ಕಾಡತೊಡಗಿದೆ. ಈಗಾಗಲೇ ಪ್ರವಾಹ, ಭೂಕುಸಿತದಿಂದ ಕರ್ನಾಟಕದ ಕರಾವಳಿ ಭಾಗದ ಜನ ಕಂಗೆಟ್ಟಿದ್ದು, ಇದೀಗ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜು.24ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಮತ್ತೆ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯಲ್ಲಿ ಕನಿಷ್ಠ 204.5 ಮಿ.ಮೀ. ಮಳೆ ಬೀಳುವ ಸಾಧ್ಯತೆ ಇದೆ ಎಂದು […]

ನಗರದಲ್ಲಿ ಮತ್ತೆ ವರುಣನ ಅಬ್ಬರ..ಹವಾಮಾನ ಇಲಾಖೆಯಿಂದ ಮುನ್ಸೂಚನೆ..!

Tuesday, June 19th, 2018
rain-manlore

ಮಂಗಳೂರು: ನಗರದಲ್ಲಿ ಮತ್ತೆ ವರುಣನ ಅಬ್ಬರ ಆರಂಭವಾಗಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಇಂದು ಮಂಗಳೂರಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಹೆಚ್ಚು ಮಳೆಯಾಗಿದ್ದು, ವಾಹನ ಸವಾರರು, ಜನರು ಓಡಾಟಕ್ಕೆ ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲ‌ ಅಧಿಕ ಮಳೆಯಾಗುವ ಎಚ್ಚರಿಕೆಯ ಮುನ್ಸೂಚನೆಯನ್ನೂ ನೀಡಿದೆ.

ಇತ್ತೀಚೆಗೆ ಸುರಿದ ಮಹಾಮಳೆಯ ನಂತರ ನಿಂತು ಹೋಗಿದ್ದ ಮಳೆ ಮತ್ತೆ ಶುರು..!

Thursday, June 7th, 2018
heavy-rain

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಯ ನಂತರ ನಿಂತು ಹೋಗಿದ್ದ ಮಳೆ ಮತ್ತೆ ಶುರುವಾಗಿದೆ. ಇತ್ತೀಚೆಗೆ ಸುರಿದ ಮಹಾಮಳೆಗೆ‌ ಮಂಗಳೂರು ನಗರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ ಅಪಾರ ಆಸ್ತಿ ಪಾಸ್ತಿ ನಷ್ಟವಾಗಿತ್ತು. ಒಂದೇ ದಿನ ಸುರಿದ ಮಹಾಮಳೆಗೆ‌ ಮಂಗಳೂರು ನಗರವೇ ತತ್ತರಿಸಿ ಹೋಗಿತ್ತು. ಜೂನ್ 7 ರಿಂದ ಮಂಗಳೂರಿನಲ್ಲಿ ‌ಮತ್ತೆ ಮಳೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ನಿನ್ನೆ ರಾತ್ರಿಯಿಂದ ಮಂಗಳೂರಿನಲ್ಲಿ ಮಳೆಯಾಗುತ್ತಿದೆ.