ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

Friday, March 15th, 2024
eswarappa

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಇಂದು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ […]

ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ, ವ್ಯಕ್ತಿಯ ಬಂಧನ

Saturday, March 19th, 2022
Wajid

ಮಂಗಳೂರು : ಸುಳ್ಯದಿಂದ ಸರಕಾರಿ ಬಸ್ ನಲ್ಲಿ  ಪ್ರಯಾಣಿಸುತ್ತಿದ್ದ  ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ವಾಜಿದ್ ಎ. ಜಮಖಾನಿ ಬಂಧಿತ ಆರೋಪಿ. ಮಹಿಳೆ ಸುಳ್ಯದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿನ ಪಕ್ಕದಲ್ಲಿ ಕುಳಿತ ವಾಜಿದ್ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಮಾನಹಾನಿ ಮಾಡಿ ಕಿರುಕುಳ ನೀಡಿದ್ದಾನೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದಳು. ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕರ್ನಾಟಕದ ವಿದ್ಯಾರ್ಥಿ ರಷ್ಯಾದ ಪಡೆಗಳ ದಾಳಿಗೆ ಉಕ್ರೇನ್ ನಲ್ಲಿ ಬಲಿ

Tuesday, March 1st, 2022
Naveen-Shekarappa

ಹಾವೇರಿ: ಉಕ್ರೇನ್‌ನಲ್ಲಿ  ಮಂಗಳವಾರ ಬೆಳಗ್ಗೆ ರಷ್ಯಾದ ಪಡೆ ನಡೆಸಿದ ದಾಳಿಯಲ್ಲಿ  ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಆತನ ಜೊತೆಗಿದ್ದ ಸ್ನೇಹಿತರು ಖಚಿತ ಪಡಿಸಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವನ್ನು ಪ್ರವೇಶಿಸಿ, ಉಕ್ರೇನ್ ಸರ್ಕಾರದ ಮೇಲೆ ಒತ್ತಡವನ್ನು ಹೇರಲು ಕಳೆದ ಎರಡು ದಿನಗಳಿಂದ ನಾಗರಿಕರ ಮೇಲೂ ದಾಳಿಯನ್ನು ಪ್ರಾರಂಭಿಸಿದೆ. ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಶೇಖರಪ್ಪ ಜ್ಞಾನಗೌಡರ್ (21) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ ಖಾರ್ಕಿವ್ […]

ಏಲಕ್ಕಿ ನಾಡು ಹಾವೇರಿಯಲ್ಲಿ ಸಾಹಿತ್ಯ ಜಾತ್ರೆ ಫೆ.26, 27 ಮತ್ತು 28, 2021

Wednesday, November 25th, 2020
Haveri

ಹಾವೇರಿ:  ಏಲಕ್ಕಿ ನಾಡು ಹಾವೇರಿಯಲ್ಲಿಎಂಬತ್ತಾರನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2021ರ ಫೆ.26, 27 ಮತ್ತು 28ರಂದು ಮೂರು ದಿನಗಳ ಕಾಲ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀಧಿರ್ಮಾನ ಕೈಗೊಳ್ಳಲಾಗಿದೆ. ಬಳಿಗಾರ್‌ ಆಡಳಿತಾವಧಿಯಲ್ಲಿ ನಡೆಯುತ್ತಿರುವ ಐದನೇ ಸಮ್ಮೇಳನ ಇದು.  ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ […]