ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

Saturday, October 23rd, 2021
Dwarakanath

ಬೆಂಗಳೂರು : ಹಿಂದುಳಿದ ವರ್ಗಗಳ ಪ್ರವರ್ಗ 2(ಎ)ಗೆ ಸೇರಿಸಬೇಕೆಂಬ ಬಲಿಷ್ಠ ವೀರಶೈವ ಪಂಚಮಸಾಲಿ ಸಮುದಾಯದ ಒತ್ತಡಕ್ಕೆ ಸರ್ಕಾರ ಮಣಿಯಬಾರದೆಂದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್ ದ್ವಾರಕನಾಥ್ ಎಚ್ಚರಿಸಿದ್ದಾರೆ. ಇಂದು ಕುಮಾರ ಕೃಪ ಅತಿಥಿ ಗೃಹ ದಲ್ಲಿ ರಾಜ್ಯದ ಅತಿ ಹಿಂದುಳಿದ ಜನಾಂಗದ ಮಠಾಧೀಶರನ್ನ ಒಳಗೊಂಡ ಸಭೆಯಲ್ಲಿ ಮಾತನಾಡಿದರು. ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ’, ಪಂಚಮಸಾಲಿಗಳ ಮೀಸಲು ಹೋರಾಟವನ್ನು ವಿರೋಧಿಸಿ ಅತಿ ಹಿಂದುಳಿದ ವರ್ಗಗಳ ಎಲ್ಲ ಸ್ವಾಮೀಜಿಗಳು ಪ್ರತಿ ಹೋರಾಟಕ್ಕೆ […]

ದ.ಕ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ಪದಗ್ರಹಣ

Monday, August 2nd, 2021
Vishwas Kumara Das

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಗಸ್ಟ್ 1, ರವಿವಾರ ನಡೆಯಿತು. ಕಾಂಗ್ರೆಸ್ ರಾಜ್ಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು ಸಂವಿಧಾನ ಉಳಿಸುವ ಹೋರಾಟ ಗಟ್ಟಿಯಾದಲ್ಲಿ ಮಾತ್ರ ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರೆಲ್ಲಗೂ ದೇಶದಲ್ಲಿ ಅವಕಾಶಗಳು ದೊರೆಯಲು ಸಾಧ್ಯ. ಅಧಿಕಾರ ಬರುತ್ತೆ, […]

ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಸಚಿವ ಎಸ್.ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನೆ

Saturday, February 6th, 2021
SCDCC Bank

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ರಾಜ್ಯ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಮತ್ತು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರಿಗೆ  ಶನಿವಾರ ಅಭಿನಂದನಾ ಕಾರ್ಯಕ್ರಮ ನಡೆಯಿತು. ಎಸ್ ಸಿಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಸಭಾಂಗಣದಲ್ಲಿಂದು ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ […]

ಎರಡನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ 52.64 ಮತದಾನ

Sunday, December 27th, 2020
vote

ಮಂಗಳೂರು : ದ.ಕ. ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಬೆಳ್ತಂಗಡಿ.  53.35 , ಪುತ್ತೂರು. 52.85, ಸುಳ್ಯ.51.37 ,ಕಡಬ  52.07  ಮತದಾನವಾಗಿದ್ದು  ಜಿಲ್ಲೆಯಲ್ಲಿ  ಒಟ್ಟು.52.64 ಮತದಾನವಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಮತಗಟ್ಟೆಗಳಿಗೆ ಮತದಾರರು ಅಧಿಕ ಸಂಖ್ಯೆಯಲ್ಲಿ ಬರಲಾರಂಭಿಸಿದರು ಮತದಾನ ಬಿರುಸಿನಿಂದ ಸಾಗಿದೆ. ಎರಡನೇ ಹಂತದಲ್ಲಿ ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 11,541 ಸ್ಥಾನಗಳಿಗೆ ಚುನಾವಣೆ […]

ಅಲೆಮಾರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಕೆ. ರವೀಂದ್ರಶೆಟ್ಟಿ ನೇಮಕ

Tuesday, December 1st, 2020
K Raveendra Shetty

ಮಂಗಳೂರು :  ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರಶೆಟ್ಟಿ ಉಳಿದೊಟ್ಟು ಅವರನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಅಧ್ಯಕ್ಷರನ್ನಾಗಿ ಸರಕಾರದ ಅಧೀನ ಕಾರ್ಯದರ್ಶಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರು ನೇಮಕ ಮಾಡಿ ಆದೇಶ ಮಾಡಿರುತ್ತಾರೆ. ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರವೀಂದ್ರಶೆಟ್ಟಿ ಪ್ರಸ್ತುತ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರಾಗಿ, ಮಂಡಲ ಪ್ರಮುಖರಾಗಿದ್ದು ಸೇರಿದಂತೆ ಹಲವಾರು ಧಾರ್ಮಿಕ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಲಾಲಾಜಿ ಅವರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ನೇಮಕ ಹಿಂಪಡೆದ ಸರಕಾರ

Monday, July 27th, 2020
lalaji mendon

ಉಡುಪಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅವರನ್ನು ನೇಮಕ ಮಾಡಿದ ಕೆಲವೇ ಗಂಟೆಗಳಲ್ಲಿ ರಾಜ್ಯ ಸರಕಾರ ಆದೇಶವನ್ನು ಹಿಂಪಡೆದುಕೊಂಡಿದೆ. ಮಧ್ಯಾಹ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರ ಅಧ್ಯಕ್ಷ ಸ್ಥಾನವನ್ನು ಸಂಜೆ ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ.  ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ […]

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಥಿಕ ಸಹಾಯ

Wednesday, July 22nd, 2020
savitha samaja

ಬೆಂಗಳೂರು : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ್, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನಗರ ಅರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಗಳಲ್ಲಿ ಸೌಲಭ್ಯ […]

ಮಲ್ಲಿಕಟ್ಟೆ: ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ವಿಭಾಗದ ನೂತನ ಕಚೇರಿ ಉದ್ಘಾಟನೆ

Wednesday, October 18th, 2017
Mallikatte

ಮಂಗಳೂರು: ನಗರದ ಮಲ್ಲಿಕಟ್ಟೆಯ ಇಂದಿರಾ ಜನ್ಮ ಶತಾಬ್ಧಿ ಭವನದಲ್ಲಿರುವ ದ.ಕ.ಜಿಲ್ಲಾ ಕಾಂಗ್ರೆಸ್‌ನ ಇತರ ಹಿಂದುಳಿದ ವರ್ಗಗಳ ವಿಭಾಗದ ನೂತನ ಕಚೇರಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಕೆಪಿಸಿಸಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸದಾಶಿವ ಉಳ್ಳಾಲ್, ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಧರಣೇಂದ್ರ ಕುಮಾರ್, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೋಭಾ ಕೇಶವ, ಬ್ಲಾಕ್ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ಸಾಲ್ಯಾನ್, ಜನಾರ್ದನ್, ಗಣೇಶ ಪೂಜಾರಿ, ಶಂಕರ ಆಚಾರ್ಯ, ಪದ್ಮ […]

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಿಂದ ವಿದ್ಯಾರ್ಥಿ ನಿಲಯದ ಬಾಲಕಿಯ ಕಲ್ಯಾಣ ಹರಣ

Saturday, April 1st, 2017
Kalyana

ಮಂಗಳೂರು : ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಚೇರಿಯಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ನಾಗರಾಜಪ್ಪ ಬಂಧಿತ ಆರೋಪಿ. ವಿಷಯ ತಿಳಿದ ಮಹಿಳಾ ಪೊಲೀಸರು ಬಾಲಕಿಯಿಂದ ಮಾಹಿತಿ ಪಡೆದು, ಅಧಿಕಾರಿಯನ್ನು ಬಂಧಿಸಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ವೈದ್ಯಕೀಯ ಪರೀಕ್ಷೆಯಲ್ಲೂ ಸಾಬೀತಾಗಿದೆ ಎಂದು ತಿಳಿದುಬಂದಿದೆ. ಹಾಸ್ಟೆಲ್ ತಪಾಸಣೆಯ ನೆಪದಲ್ಲಿ ಪದೇಪದೇ ಅಶೋಕನಗರ ಹಾಸ್ಟೆಲ್‌ಗೆ […]

ಎತ್ತಿನಹೊಳೆ ಯೋಜನೆ ಹಗರಣದಲ್ಲಿ ಶಾಮೀಲಾಗಿರುವ ಮೂವರು ಸಚಿವರನ್ನು ಕೈ ಬಿಡಬೇಕು: ಜನಾರ್ದನ ಪೂಜಾರಿ

Wednesday, November 30th, 2016
Janardhana-Poojary

ಮಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಂಡ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಕಪ್ಪುಹಣ ವ್ಯಯ ಮಾಡಲಾಗಿದೆ ಎಂದು ಪೂಜಾರಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಸಮಾವೇಶದಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಲ್ಲ ಎಂಬುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಂದು ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು. ಅಮಿತ್ ಶಾ ರಾಜ್ಯಕ್ಕೆ ಬರುವಾಗ ಕಪ್ಪು ಹಣ ಬಿಳಿಯಾಗಿದೆ. ಯಡಿಯೂರಪ್ಪ ಅವರಂತಹ ನಾಯಕ ರಾಜ್ಯದಲ್ಲಿಲ್ಲ. ಅವರು ಸ್ವಚ್ಛ […]