ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ಪತ್ರಕರ್ತ ಬಿ.ಎನ್. ಅಶೋಕ್ ಶೆಟ್ಟಿಗೆ ರಾಜ್ಯ ಪ್ರಶಸ್ತಿ

Thursday, February 11th, 2021
Ashok Shetty

ಮಂಗಳೂರು:   ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ “ವಿಶ್ವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ದಿನಾಚರಣೆ” ಸಮಾರಂಭದಲ್ಲಿ ಪತ್ರಕರ್ತ ಡಾ| ಅಶೋಕ್ ಶೆಟ್ಟಿ ಬಿ.ಎನ್. ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಫೆಬ್ರವರಿ 11 , ಗುರುವಾರ ರಾಜ್ಯ ಪ್ರಶಸ್ತಿ (ವೈಯಕ್ತಿಕ ಪ್ರಶಸ್ತಿ)  ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಹಿಳೆಯರು, ಮಕ್ಕಳು ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ 2021-22ನೇ ಸಾಲಿನ ಆಯವ್ಯಯದಲ್ಲಿ ಸುಮಾರು 500 ಕೋಟಿ ರೂ.ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದಿದ್ದಾರೆ. […]

ಮಲೈಕಾ ದಿಂದ ಗ್ರಾಹಕರಿಂದ ಕೋಟ್ಯಂತರ ರೂ. ವಂಚನೆ

Thursday, November 19th, 2020
Malaika

ಮಂಗಳೂರು : ಮಲೈಕಾ ಸೊಸೈಟಿ ಹೆಸರಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿ ಅವಧಿ ಪೂರ್ಣಗೊಂಡಾಗ ಅದನ್ನು ಹಿಂತಿರುಗಿಸದೆ ವಂಚನೆ ಮಾಡಿದ ಬಗ್ಗೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಮಂಗಳೂರು, ತೊಕ್ಕೊಟ್ಟು, ಬಂಟ್ವಾಳ, ಪುತ್ತೂರು, ಸುಳ್ಯ, ವಿಟ್ಲ, ಮೂಡುಬಿದಿರೆ ಮೊದಲಾದ ಕಡೆ ಮಲೈಕಾ ಎಲೆಕ್ಟ್ರಾನಿಕ್ಸ್ ಮಳಿಗೆಗಳಿವೆ. ಇದರ ಜೊತೆ ಮುಂಬೈ, ಮಂಗಳೂರು, ಉಡುಪಿ ಮತ್ತಿತರ ಕಡೆ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಶಾಖೆಗಳನ್ನು ಸ್ಥಾಪಿಸಿ ಅದರಲ್ಲಿ ಸಂಗ್ರಹವಾದ ಠೇವಣಿ ಹಣವನ್ನು ಮಾಲಕರು ತಮ್ಮ ಖಾತೆಗೆ ಜಮೆ ಮಾಡಿರುವುದು ಬೆಳಕಿಗೆ […]

ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು : ಐವನ್

Monday, October 1st, 2018
Senior citizen

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮಂಗಳೂರಿನ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಆಚರಿಸಲಾಯಿತು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು. ಪ್ರತಿ ತಾಲೂಕಿನಲ್ಲೂ ರಿಕ್ರೇಷನ್ ಕ್ಲಬ್ ಸ್ಥಾಪನೆ ಮಾಡಬೇಕು. ಈ ಮೂಲಕ ಹಿರಿಯ ನಾಗರಿಕರಿಗೆ […]