ಚಿಕ್ಕಮಗಳೂರು : ಕುಸಿದು ಬಿದ್ದ ಸೇತುವೆ; ಬೈಕ್ ಸವಾರನಿಗೆ ಗಂಭೀರ ಗಾಯ
Monday, October 14th, 2019ಚಿಕ್ಕಮಗಳೂರು : ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಸೇತುವೆ ಕುಸಿದು ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಮಾಳಿಂಗನಾಡು ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ಸಂಜೆ ಸುರಿದ ಭಾರೀ ಮಳೆಗೆ ಹಿರೇಬೈಲು – ಕೂವೆ ಸಂಪರ್ಕಿಸುವ ಸೇತುವೆ ಮುರಿದು ಬಿದ್ದಿದೆ.