ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ನಿಧನ

Wednesday, February 7th, 2024
Padmanabha naringana

ಮಂಗಳೂರು : ಪದ್ಮನಾಭ ನರಿಂಗಾನ (77)ಅವರು ಹೃದಯಾಘಾತದಿಂದ ನಗರದ ಖಾಸಗಿ‌ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ, ದಲಿತ ನಾಯಕ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಕಳೆದ‌‌ ಬಾರಿ‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರುಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ನಿಧನಕ್ಕೆ […]

7 ಮಕ್ಕಳಿದ್ದರೂ, ಅನಾಥಾಶ್ರಮ ದಲ್ಲೇ ಪ್ರಾಣಕಳ್ಕೊಂಡ ವೃದ್ದೆ

Monday, January 8th, 2024
lakshmi-hegde

ಉಪ್ಪಿನಂಗಡಿ : ತನ್ನ ಇಳಿವಯಸ್ಸಿನಲ್ಲಿ ಮಕ್ಕಳಿಗೆ ಬೇಡವಾಗಿ ಅನಾಥಾಶ್ರಮ ಸೇರಿದ್ದ ವೃದ್ಧೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ. ಉಪ್ಪಿನಂಗಡಿ ಬಳಿಯ ಇಳಂತಿಲದ ಲಕ್ಷ್ಮೀ ಹೆಗ್ಡೆ (90) ನಿಧನ ಹೊಂದಿದ ವೃದ್ಧೆ. ಲಕ್ಷ್ಮೀ ಅವರಿಗೆ 7 ಮಕ್ಕಳಿದ್ದು, ಅವರ್‍ಯಾರೂ ಪಾರ್ಥಿವ ಶರೀರದ ಅಂತಿಮ ಕಾರ್ಯಕ್ಕೆ, ಅಂತಿಮ ದರ್ಶನಕ್ಕೆ ಆಗಮಿಸಿಲ್ಲ. ಆದ್ದರಿಂದ ಅನಾಥಾಶ್ರಮದವರೇ ಲಕ್ಷ್ಮೀ ಅವರ ಅಂತ್ಯಸಂಸ್ಕಾರ ಮಾಡಿರುವುದಾಗಿ ತಿಳಿದುಬಂದಿದೆ. ಲಕ್ಷ್ಮೀ ಅವರು ಉಪ್ಪಿನಂಗಡಿ ಬಳಿಯ ಇಳಂತಿಲದಲ್ಲಿ ಸ್ವಂತ ಮನೆ ಹೊಂದಿದ್ದರು. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ, ನ್ಯಾಯ ದೊರಕಿಸಿ […]

ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ನಿಧನ

Thursday, November 2nd, 2023
shekar-Ajekar

ಕಾರ್ಕಳ : ಅಜೆಕಾರು ಗ್ರಾಮದ ನಿವಾಸಿ ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ಬುಧವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೇಖರ್ ಅಜೆಕಾರ್ ಇವರು, ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು . ಬೆಳದಿಂಗಳ ಸಾಹಿತ್ಯ ಕೂಟ ಸಹಿತ ಹಲವು ಸಾಹಿತ್ಯಕೂಟಗಳನ್ನು ಸಂಘಟಿಸುವುದರ ಮೂಲಕ ಕರಾವಳಿ ಪರಿಸರದಲ್ಲಿ ಜನಪ್ರಿಯರಾಗಿದ್ದ ರಲ್ಲದೆ ಮುಂಬೈ ಸಹಿತ ಹಲವೆಡೆ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಬೆಂಗಳೂರು […]

ಕಾಸರಗೋಡಿನ ಕನ್ನಡ ಹೋರಾಟಗಾರ ಎಸ್. ವಿ ಭಟ್ ನಿಧನ

Sunday, September 10th, 2023
SV-Bhat

ಕಾಸರಗೋಡು : ಕಾಸರಗೋಡಿನಲ್ಲಿ ಕನ್ನಡಕ್ಕೆ ಶಕ್ತಿ ಮೀರಿ ದುಡಿಯುತ್ತಿದ್ದವರು. ಕನ್ನಡ ಶಾಲೆಗಳ ಉಳಿವಿಗೆ ಬಹಳ ಹೋರಾಟ ಮಾಡಿ ಕನ್ನಡದ ಅಸ್ಮಿತೆಗೆ ಶಕ್ತಿ ತುಂಬಿದ ವ್ಯಕ್ತಿ . ಎಸ್. ವಿ ಭಟ್ (72) ಅವರು ಹೃದಯಾಘಾತದಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಬೀರಂತಬೈಲ್ ನಿವಾಸಿಯಾಗಿದ್ದ ಭಟ್ ರವರು ಕುಂಬಳೆ, ಅಡೂರು, ಕಾಸರಗೋಡು ಸೇರಿದಂತೆ ಜಿಲ್ಲೆಯ ಹಲವೆಡೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ರಾಗಿ ಕನ್ನಡ ಹೋರಾಟಗಾರಾಗಿ, ಜಿಲ್ಲಾ […]

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

Monday, March 28th, 2022
Anushree

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇಂಟರ್ನ್ ವಿದ್ಯಾರ್ಥಿ ಸಾವು

Monday, February 14th, 2022
Nagesh

ಮಂಗಳೂರು : ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ನ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ.

ಮೂಡುಬಿದಿರಿ ಪೊಲೀಸ್ ಠಾಣೆ ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

Wednesday, January 5th, 2022
santhosh-PC

ಮಂಗಳೂರು: ಮೂಡುಬಿದಿರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸಂತೋಷ್ 36 ಮೃತರು. ಅಪರಾಧ ಪ್ರಕರಣವೊಂದರ ತನಿಖೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹೋಗಿದ್ದರು. ಡ್ಯೂಟಿಯಲ್ಲಿದ್ದ ಸಂತೋಷ್ಗೆ ಮಂಗಳವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸಂತೋಷ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕಲಿಲ್ಲ. ಸೊರಬ ಮೂಲದ ಸಂತೋಷ್, ಮಂಗಳೂರಿ‌ನಲ್ಲಿ 12 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ, ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ

Friday, October 29th, 2021
Puneeth Rajkumar

ಬೆಂಗಳೂರು: ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ […]

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ತೀವ್ರ ಎದೆ ನೋವು, ಆಸ್ಪತ್ರೆಗೆ ದಾಖಲು

Friday, October 29th, 2021
Punneth-Rajkuamr

ಬೆಂಗಳೂರು: ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ. ಅವರನ್ನು ವಿಕ್ರಂ ಆಸ್ಪತ್ರೆಯ  ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅವರಿಗೆ ಹೃದಯಾಘಾತ ಆಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು […]

ಕರ್ತವ್ಯದಲ್ಲಿದ್ದ ಉರ್ವ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಗೆ ಹೃದಯಾಘಾತ

Saturday, October 2nd, 2021
Sidharth

ಮಂಗಳೂರು : ರಾತ್ರಿ  ಕರ್ತವ್ಯದಲ್ಲಿದ್ದ ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಸಿದ್ಧಾರ್ಥ್ ಜೆ. (41) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾರ್ಟ್ರಸ್‌ನಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರಲ್ಲಿ ಅನಾರೋಗ್ಯ ಕಂಡುಬಂದಿತ್ತು. ಸಹೋದ್ಯೋಗಿಗಳು ಮನೆಗೆ ಹೋಗಲು ಹೇಳಿದ್ದರು. ನಂತರ ಮನೆಗೆ ತೆರಳಿದ್ದ ಸಿದ್ಧಾರ್ಥ್ ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಗರದ ಫಾದರ್ ಮುಲ್ಲರ್ […]