ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ

Saturday, September 11th, 2021
R ashoka

ಬೆಂಗಳೂರು  : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು […]

10 ಸಾವಿರ ರೂಪಾಯಿಗೆ ಕೊರೋನಾ ನಕಲಿ ಇಂಜೆಕ್ಷನ್

Friday, April 16th, 2021
corona Injection

ಬೀದರ್ : ಮಾರುಕಟ್ಟೆಯಲ್ಲಿ ಕೊರೋನಾ ನಕಲಿ ಇಂಜೆಕ್ಷನ್ ಬಂದಿದ್ದು, 10 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ ಎಂಬುದಾಗಿಯೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣ ಕ್ರಮ ಕುರಿತಂತೆ ಚರ್ಚಿಸಲು ಸಿಎಂ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಅಲ್ಲಿ ಏನ್ ಚರ್ಚೆ ಮಾಡ್ತಾರೋ ನೋಡೋಣ. ತಮ್ಮ ತಪ್ಪು ಮರೆ ಮಾಚಲು ಅಷ್ಟೇ ಸರ್ವ ಪಕ್ಷಗಳ ಸಭೆ ಎಂದರು. ರಾಜ್ಯದಲ್ಲಿ ಜನರು ಕೊರೋನಾ ಸೋಂಕಿನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಔಷಧಿ […]

ಸಿಎಂ ಸ್ಥಾನಕ್ಕೆ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ

Wednesday, July 24th, 2019
hdk

ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ಬೆನ್ನಲ್ಲೇ ಕುಮಾರಸ್ವಾಮಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಿಂದ ನೆರವಾಗಿ ರಾಜಭವನಕ್ಕೆ ತೆರಳಿದ ಸಿಎಂ ಕುಮಾರಸ್ವಾಮಿ ರಾಜ್ಯಪಲಾರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ. ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್, ಹೆಚ್ ಡಿ ರೇವಣ್ಣ ರಾಜಭವನಕ್ಕೆ ತೆರಳಿದ್ದರು. ರಾಜೀನಾಮೆಗೂ ಮುನ್ನ, ಸರ್ಕಾರ ಪತನಗೊಂಡ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಹೆಚ್ ಡಿ ಕುಮಾರಸ್ವಾಮಿ ನನ್ನ ನೇತೃತ್ವದ 14 ತಿಂಗಳ ಮೈತ್ರಿ ಸರ್ಕಾರಕ್ಕೆ […]

ಐದು ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿ: ಜಮೀರ್ ಅಹಮದ್

Thursday, December 13th, 2018
jameer-ahmed

ಬೆಳಗಾವಿ: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮೇಲೆ ಕಾಂಗ್ರೆಸ್ ಯಾವುದೇ ಒತ್ತಡ ಹೇರುತ್ತಿಲ್ಲ. ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ಜಮೀರ್ ಅಹಮದ್ ಸ್ಪಷ್ಟಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಹೆಬ್ಬೆಟ್ಟು ಮುಖ್ಯಮಂತ್ರಿ ಎಂದು ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ‌ ಅದು ಅವರ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿಯವರಿಗೆ ಎಲ್ಲ ಸ್ವಾತಂತ್ರ್ಯ ಕೊಡಲಾಗಿದೆ. ನಾವು ಯಾವುದೇ ರೀತಿಯ ಒತ್ತಡ ಹಾಕಿಲ್ಲ. ಕುಮಾರಸ್ವಾಮಿ ಅವರೇ ಐದು […]

ಧರ್ಮಸ್ಥಳದ ನಿತ್ಯಾನಂದ ನಗರದಲ್ಲಿ ಸೆ. 3 ರಂದು ನಡೆಯುವ ಧರ್ಮ ಸಂಸದ್​ಗೆ ಪೂರ್ವ ತಯಾರಿ..!

Thursday, July 12th, 2018
kanyad-shree

ಮಂಗಳೂರು: ಧರ್ಮಸ್ಥಳದ ನಿತ್ಯಾನಂದ ನಗರದಲ್ಲಿ ಸೆ. 3 ರಂದು ನಡೆಯುವ ಧರ್ಮ ಸಂಸದ್ಗೆ ಪೂರ್ವ ತಯಾರಿ ಭರದಿಂದ ಸಾಗುತ್ತಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಉತ್ತರ ಭಾರತ ಮತ್ತು ದಕ್ಷಿಣ ಭಾರತ ಪ್ರವಾಸವನ್ನು ಕೈಗೊಳ್ಳಲಾಗಿದ್ದು, 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ. ಸೆ . 2 ರಂದು ಹಿಮಾಲಯ ಹಾಗೂ ಭಾರತದ ವಿವಿಧ ಭಾಗಗಳಿಂದ ಸಾಧು-ಸಂತರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸೆ. 3 […]

ಕಾಂಗ್ರೆಸ್ ಶಾಸಕರು ಕೊಟ್ಟ ಸಹಕಾರದಿಂದ ಸಿಎಂ ಆಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ

Monday, July 9th, 2018
kumarswmy

ಬೆಂಗಳೂರು: ತಾವು ಮತ್ತು ಮಹಾಭಾರತದ ಕರ್ಣ ಇಬ್ಬರೂ ಸಾಂದರ್ಭಿಕ ಶಿಶುಗಳು, ಎಂಬ ಮಾತನ್ನು ಸದನದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳುವ ಮೂಲಕ ಕರ್ಣನಿಗೆ ತಮ್ಮನ್ನು ತಾವು ಹೋಲಿಸಿಕೊಂಡರು. ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ವೇಳೆ ಮಾತನಾಡಿದ ಸಿಎಂ, ಕರ್ಣ ಕೂಡ ಸಾಂದರ್ಭಿಕ ಶಿಶುವೇ ಎಂದಿದ್ದಾರೆ. ಪ್ರತಿಪಕ್ಷದ ನಾಯಕರು ಈ ಸರ್ಕಾರಕ್ಕೆ ಮತ್ತು ಸಿಎಂ ಆದ ತಮಗೆ ಅಪ್ಪ – ಅಮ್ಮ ಇಲ್ಲವೆಂದು ಹೀಗಳೆಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರೇ […]

ಒಂದು ವರ್ಷ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

Friday, June 15th, 2018
kumarswamy-2

ಬೆಂಗಳೂರು: ಒಂದು ವರ್ಷದವರೆಗೆ ನನ್ನನ್ನೂ ಯಾರೂ ಟಚ್ ಮಾಡಲು ಸಾಧ್ಯವಿಲ್ಲ. ಲೋಕಸಭೆ ಚುನಾವಣೆವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ. ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ 15 ನೇ ರಾಜ್ಯಮಟ್ಟದ ಲೆಕ್ಕಪರಿಶೋಧಕರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿಯು ನನ್ನ ಪರವಾಗಿದೆ. ರಾಜ್ಯದಲ್ಲಿ ಒಳ್ಳೆ ಮಳೆಯಾಗುತ್ತಿದೆ. ನಾನು ಕೆಲಸ ಮಾಡಬೇಕಾದರೆ ಬಹಳಷ್ಟು ಜನ ಕಾಲೆಳೆಯಲು ಇರುತ್ತಾರೆ ಎಂದು ಪರೋಕ್ಷವಾಗಿ ಪ್ರತಿಪಕ್ಷದ ನಾಯಕರಿಗೆ ತಿರುಗೇಟು ನೀಡಿದರು. […]

ಉನ್ನತ ಶಿಕ್ಷಣ ಖಾತೆ ತಾವೇ ನಿಭಾಯಿಸಲು ಸಿಎಂ ನಿರ್ಧಾರ?

Thursday, June 14th, 2018
kumarswamy

ಬೆಂಗಳೂರು: ಉನ್ನತ ಶಿಕ್ಷಣ ಖಾತೆ ಪಡೆಯಲು ಸಚಿವ ಜಿ.ಟಿ.ದೇವೇಗೌಡರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಆ ಖಾತೆಯನ್ನು ತಾವೇ ನಿಭಾಯಿಸಲು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಎಂ ಕುಮಾರಸ್ವಾಮಿ ಅವರು ನಿನ್ನೆ ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ್ದರು. ಆದರೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಸಭೆಗೆ ಗೈರಾಗಿದ್ದರು. ಆರಂಭದಿಂದಲೂ ಉನ್ನತ ಶಿಕ್ಷಣ ಖಾತೆಯನ್ನು ಒಪ್ಪಲು ಹಿಂದೇಟು ಹಾಕುತ್ತಿರುವ ಸಚಿವ ಜಿ.ಟಿ.ದೇವೇಗೌಡ ಸಭೆಗೆ ಗೈರು ಹಾಜರಾಗಿದ್ದರು. ಉನ್ನತ ಶಿಕ್ಷಣ […]

ಹೆಲಿಕಾಪ್ಟರ್ ಬಾಡಿಗೆ ಹಣ ವಿಚಾರ: ಬಿಎಸ್‌ವೈಗೆ ಹೆಚ್‌ಡಿಕೆ ತಿರುಗೇಟು

Thursday, June 7th, 2018
yedyurappa

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ಪ್ರತಿಪಕ್ಷ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಂದ ಹೆಲಿಕಾಪ್ಟರ್ ಬಾಡಿಗೆ ಹಣ ಕಟ್ಟಿಸಿಕೊಳ್ಳುವಷ್ಟು ದರಿದ್ರ ರಾಜ್ಯ ಸರ್ಕಾರಕ್ಕೆ ಬಂದಿಲ್ಲವೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಂದ ನಮಗೆ ಯಾವುದೇ ಪತ್ರ ಬಂದಿಲ್ಲ. ಸರ್ಕಾರದ ಹಣ ದುಂದು ವೆಚ್ಚ ಆಗಬಾರದು ಎಂದು ಹೆಲಿಕಾಪ್ಟರ್ ಪ್ರಯಾಣದ ವೆಚ್ಚವನ್ನು ಉಲ್ಲೇಖಿಸಲಾಗಿತ್ತು. ತಾವು ದೆಹಲಿಗೆ ವಿಶೇಷ ವಿಮಾನದಲ್ಲಿ ಹೋಗಿ ಬಂದಿದ್ದರೆ 40 ಲಕ್ಷ ರೂ. ಖರ್ಚಾಗುತ್ತಿತ್ತು. ಆದರೆ, ಸಾಮಾನ್ಯ […]

ಸಿನಿಮಾಗಿಂತ ನೀರು ಮುಖ್ಯ, ನಾನು ಜನರ ಪ್ರತಿನಿಧಿಯಾಗಿ ಬಂದಿದ್ದೇನೆ: ಕಮಲ್ ಹಾಸನ್

Monday, June 4th, 2018
kamal-kumaar

ಬೆಂಗಳೂರು: ಖ್ಯಾತ ನಟ, ರಾಜಕಾರಣಿ ಕಮಲ್ ಹಾಸನ್ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ ಕಮಲ್ ಹಾಸನ್ ಹಾಗೂ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ ಬಳಿಕ ಜಂಟಿಯಾಗಿ ಇಬ್ಬರೂ ಮಾತನಾಡಿದರು. ಸಿನಿಮಾಗಿಂತ ನೀರು ಮುಖ್ಯ: ಕಮಲ್ ಹಾಸನ್ ಮಾತನಾಡಿ, ನಾವು ಎರಡೂ ರಾಜ್ಯಗಳು ಸಹೋದರತ್ವದಿಂದ ಬಾಳಬೇಕಾಗಿದೆ. ನಾನು ಸರ್ಕಾರದ ಪ್ರತಿನಿಧಿಯಾಗಿ ಕರ್ನಾಟಕಕ್ಕೆ ಬಂದಿಲ್ಲ, ಜನರ ಪ್ರತಿನಿಧಿಯಾಗಿ ಬಂದಿದ್ದೇನೆ. ಅಷ್ಟೇ ಅಲ್ಲ ಕುರುವೈ ಬೆಳೆಗೆ ನೀರು […]