ಭೂಗತ ಪಾತಕಿ ಛೋಟಾ ರಾಜನ್ ಗೆ ತೀವ್ರ ಹೊಟ್ಟೆನೋವು, ಏಮ್ಸ್​ ಆಸ್ಪತ್ರೆಗೆ ದಾಖಲು

Thursday, July 29th, 2021
chota-rajan

ದೆಹಲಿ : ತಿಹಾರ್ ಜೈಲಿನಲ್ಲಿರುವ  ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್, ಅನಾರೋಗ್ಯ ನಿಮಿತ್ತ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬೆಳಗ್ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಪ್ರಿಲ್ನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಕಾರಣ ಇದೇ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು.

ನಗರದ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವೈದ್ಯರ ಸಾಧನೆ : ಮಹಿಳೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ. ಗುಲ್ಮಕ್ಕೆ ಶಸ್ತ್ರಚಿಕಿತ್ಸೆ

Friday, September 24th, 2010
ಮಹಿಳೆಯ ಹೊಟ್ಟೆಯಲ್ಲಿದ 4 ಕೆ.ಜಿ. ಗುಲ್ಮ

ಬೆಂಗಳೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿ 4 ಕೆ.ಜಿ. ಗಾತ್ರಕ್ಕೆ ಬೆಳೆದಿದ್ದ ಗುಲ್ಮವನ್ನು (ಸ್ಪ್ಲೀನ್) ಅಪರೂಪದ ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕುವಲ್ಲಿ ನಗರದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಸಫಲರಾಗಿದ್ದಾರೆ. 40 ವರ್ಷ ಪ್ರಾಯದ ಈ ಮಹಿಳೆ ತೀವ್ರ ಹೊಟ್ಟೆನೋವು ಮತ್ತು ಹಸಿವೆಯೇ ಇಲ್ಲದಿರುವಿಕೆಯ ಸ್ಥಿತಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಮೊದಲಿಗೆ ವೈದ್ಯರು ಇದು ತೀವ್ರ ಮಲೇರಿಯಾ ಪ್ರಕರಣ ಎಂದು ಭಾವಿಸಿದ್ದರು. ಆದರೆ ಬಳಿಕ ಇದು ಗುಲ್ಮದ ಹಾನಿಕರ ಗೆಡ್ಡೆ ಎಂಬುದು ಗೊತ್ತಾಯಿತು. ಇದೊಂದು ಅಪರೂಪದ ಪ್ರಕರಣವಾಗಿದ್ದು, ನಾನ್-ಹೊಡ್ಜ್ಕಿಮ್ಸ್ ಲಿಂಫೋಮಾ […]