3ಡಿ ತಾರಾಲಯ; ಪ್ರದರ್ಶನವೆಲ್ಲ ಹೌಸ್‌ಫುಲ್‌!

Monday, March 26th, 2018
taralaya

ಪಿಲಿಕುಳ: ಇಲ್ಲಿನ ಡಾ. ಶಿವರಾಮ ಕಾರಂತ ಬಯೋಲಾಜಿಕಲ್‌ ಪಾರ್ಕ್‌ನಲ್ಲಿ ಮಾ. 1ರಿಂದ ಆರಂಭವಾಗಿರುವ ವಿಶ್ವದ 21ನೇ ಅತ್ಯಾಧುನಿಕ ಹೈಬ್ರಿಡ್‌ ತ್ರಿಡಿ ‘ಸ್ವಾಮಿ ವಿವೇಕಾನಂದ ತಾರಾಲಯ’ದ ಪ್ರದರ್ಶನಕ್ಕೆ 25 ದಿನದ ಅಂತರದಲ್ಲಿ ಸುಮಾರು 11,000 ಜನರು ಆಗಮಿಸಿ ನಭೋಮಂಡಲದ ವಿಸ್ಮಯ ವೀಕ್ಷಿಸಿದ್ದಾರೆ. ಶಾಲಾ- ಕಾಲೇಜಿನ ವಿದ್ಯಾರ್ಥಿಗಳು ದೂರದೂರಿನಿಂದ ಪಿಲಿಕುಳಕ್ಕೆ ಆಗಮಿಸಿ ತಾರಾಲಯದಲ್ಲಿ ನಭದ ವಿಸ್ಮಯ ನೋಡಲು ಹಾತೊರೆಯುವ ಹಿನ್ನೆಲೆಯಲ್ಲಿ ಟಿಕೆಟ್‌ ಬೇಗನೆ ಖಾಲಿಯಾಗುತ್ತಿದೆ. ಈಗ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ದೊರೆಯಲಿದೆ. ಆಗ ಭಾರೀ […]

ಭಾರತದ ಮೊದಲ 3ಡಿ ತಾರಾಲಯ ಮಂಗಳೂರಿನಲ್ಲಿ ನಿರ್ಮಾಣ

Saturday, December 23rd, 2017
3d-manglore

ಮಂಗಳೂರು: ದೇಶದ ಮೊದಲ 3ಜಿ ತಾರಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ವಾಮಿ ವಿವೇಕಾನಂದ ತಾರಾಲಯದ ಕಾಮಗಾರಿ ಶೇ.80ರಷ್ಟು ಪೂರ್ಣಗೊಂಡಿದ್ದು, ಜನವರಿ ತಿಂಗಳ ಅಂತ್ಯದೊಳಗೆ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಕೆ ಆಕ್ಟಿವ್ 3ಡಿ 8ಕೆ ಪ್ರೊಜೆಕ್ಷನ್ ಸಿಸ್ಟಮ್’ನೊಂದಿಗೆ ತಾರಾಲಯ ನಿರ್ಮಾಣವಾಗುತ್ತಿದ್ದು, ಈ ತಾರಾಲಯ ಅಂತರಾಷ್ಟ್ರೀಯ ತಾರಾಲಯಗಳ ಪೈಕಿ 21ನೇ ಸ್ಥಾನದಲ್ಲಿದೆ. ತಾರಾಲಯದ ಡೋಮ್’ನೊಳಗೆ ಅತ್ಯಂತ ಪರಿಣಾಮಕಾರಿಯಾದ ನ್ಯಾನೋಸೀಮ್ ಫ್ಯಾಬ್ರಿಕೇಶನ್ ಅಳವಡಿಕೆ ಕಾರ್ಯ ಶೇ.80ರಷ್ಟು ಪೂರ್ಣಗೊಂಡಿದ್ದು, ನ್ಯಾನೋಸೀಮ್ ಫ್ಯಾಬ್ರಿಕೇಶನ್ ಮತ್ತು […]