ಮಂಗಳೂರು ವಿವಿ ಸಮಸ್ಯೆ ಬಗೆಹರಿಸಲು ಎಬಿವಿಪಿ ಪ್ರತಿಭಟನೆ

Sunday, February 12th, 2017
abvp protest

ಮಂಗಳೂರು: ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಮಂಗಳೂರು ನೇತೃತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಮಸ್ಯೆ ಬಗೆಹರಿಸಲು ಮತ್ತು ಸಮಸ್ಯೆಗೆ ಸಂಬಂಧಪಟ್ಟವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ನಗರದ ಪಿವಿಎಸ್‌ ವೃತ್ತದ ಬಳಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಕಾರರನ್ನು ಉದ್ದೇಶಿಸಿ ಶೀತಲ್‌ ಕುಮಾರ್‌ ಮಾತನಾಡಿ, ವಿವಿಯ ಪ್ರಾಥಮಿಕ ಕಾರ್ಯಗಳಾದ ಶಿಕ್ಷಣ, ಪರೀಕ್ಷೆ ಮತ್ತು ಫಲಿತಾಂಶ, ಅಂಕಪಟ್ಟಿ ನೀಡುವುದು ಪ್ರಮುಖವಾಗಿದೆ. ಆದರೆ ವಿಶ್ವವಿದ್ಯಾಲಯ ಪ್ರಮುಖವಾದ ಕೆಲಸಗಳನ್ನೇ ಮರೆತು ಅವ್ಯವಹಾರದ ಹಾದಿಗೆ ಸಾಗಿದೆ ಎಂದು ಆರೋಪಿಸಿದರು. ಕಾರ್ಯಕರ್ತರಾದ ಕೀರ್ತನ ಮಾತನಾಡಿ, ವಿಶ್ವವಿದ್ಯಾಲಯವು ಸಮಾಜದಲ್ಲಿ ಸಮಸ್ಯೆಗಳು […]

ಪ್ರಾಮಾಣಿಕ ಅಧಿಕಾರಿ ಡಿ.ಕೆ.ರವಿವರ ಸಾವಿನ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸಿ

Tuesday, March 17th, 2015
ABvp protest

ಮಂಗಳೂರು : ರಾಜ್ಯದ ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರ ಸಾವಿನ ಕುರಿತಂತೆ ಉನ್ನತ ತನಿಖೆಯನ್ನು ನಡೆಸಬೇಕು ಮತ್ತು ರಾಜ್ಯದ ಪ್ರಾಮಾನಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕೆಂದು ಎಬಿವಿಪಿ ಆಗ್ರಹಿಸಿ ಮಂಗಳವಾರ ಎಬಿವಿಪಿ ನಗರದಲ್ಲಿ ಪ್ರತಿಭಟನೆಯನ್ನು ನಡೆಸಿತು. ಶಾರದ ಕಾಲೇಜಿನಿಂದ ಹೊರಟ ನೂರಾರು ಎಬಿವಿಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯ ಮೂಲಕ ಬಂದು ಬೆಸೆಂಟ್ ಕಾಲೇಜು ವೃತ್ತದ ಬಳಿ ಸೇರಿದರು. ಅಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಬಿವಿಪಿ ನಗರ ಕಾರ್ಯದರ್ಶಿ ಜಯೇಶ್ ಮಾತನಾಡಿ, ಐಎಎಸ್ ಅಧಿಕಾರಿ ಡಿ. ಕೆ. ರವಿಯವರು ರಾಜ್ಯದ […]

ಪಿ.ಯು. ವಿದ್ಯಾರ್ಥಿಗಳಿಗೆ ತಕ್ಷಣವೇ ಪಠ್ಯ-ಪುಸ್ತಕ ವಿತರಿಸಲು ಎಬಿವಿಪಿ ಆಗ್ರಹ.

Tuesday, June 24th, 2014
ABVP

ಮಂಗಳೂರು : ಶೈಕ್ಷಣಿಕ ವರ್ಷ ಈಗಾಗಲೇ ಪ್ರಥಮ ಹಾಗೂ ದ್ವೀತಿಯ ವರ್ಷದ ತರಗತಿಗಳು ಆರಂಭವಾಗಿದೆ. ಆದರೂ ಇದುವರೆಗೂ ಪಠ್ಯ ಪುಸ್ತಕಗಳು ದೊರಕದೆ ವಿದ್ಯಾರ್ಥಿಗಳು, ಅಧ್ಯಾಪಕರು ಗೊಂದಲಿದಾರೆ ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಪಠ್ಯಪುಸ್ತಕ ವಿತರಿಸುವಲ್ಲಿ ಗಮನ ಹರಿಸಿ, ಸಮಸ್ಯೆಯನ್ನು ಬಗೆಹರಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರವನ್ನು ಆಗ್ರಹಿಸಿ ಮಂಗಳವಾರ ಜೂನ್ 24 ರಂದು ಪಿವಿಎಸ್ ವೃತ್ತದ ಬಳಿ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯದಲ್ಲಿ 9 ಲಕ್ಷಕ್ಕೂ ಹೆಚ್ಚು ಪದವಿ ಪೂರ್ವದಲ್ಲಿ ವ್ಯಾಸಾಂಗ […]

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೂಡಲೇ ಉಪನ್ಯಾಸಕರ ನೇಮಕಾತಿ ಮಾಡುವಂತೆ ಆಗ್ರಹಿಸಿ ಎಬಿವಿಪಿಯಿಂದ ನಗರ ಜ್ಯೋತಿವೃತ್ತದಲ್ಲಿ ಮಾನವ ಸರಪಳಿ

Tuesday, June 25th, 2013
abvp protest

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಶಾಖೆಯ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳಿಗೆ ಉಪನ್ಯಾಸಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ನಗರದ ಜ್ಯೋತಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಪ್ರತಿಭಟಿಸಲಾಯಿತು. ನಂತರ ಜ್ಯೋತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಲ್ಮಠ ಸರ್ಕಾರಿ ಕಾಲೇಜಿನ ಅಧ್ಯಕ್ಷೆ ಕು. ರಕ್ಷಿತಾ, ಕು. ದಿವ್ಯಾ, ಕು. ವಿನುತಾ ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯವು ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ […]

ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾ, ಶೀಘ್ರ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Monday, February 4th, 2013
Drugs mafia DK

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಿದ್ದು,  ಇಡೀ ರಾಜ್ಯದಲ್ಲಿಯೇ ಜಿಲ್ಲೆ  ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ದೆ. ಇಲ್ಲಿ  ಹೊರದೇಶ ಹಾಗೂ ಹೊರರಾಜ್ಯಗಳಿಂದ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಆಗಮಿಸುತ್ತಿದ್ದು ಇವರನ್ನು ಕೇಂದ್ರವಾಗಿರಿಸಿಕೊಂಡು ಡ್ರಗ್ ಮಾಫಿಯಾಗಳು ಕಾರ್ಯಾಚರಿಸುತ್ತಿದ್ದು ಅಮಾಯಕ ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿದ್ದಾರೆ. ಶೀಘ್ರವೇ ಡ್ರಗ್ಸ್ ಮಾಫಿಯಾವನ್ನು ನಮ್ಮ ಜಿಲ್ಲಾಡಳಿತ ಹಾಗೂ ಸರಕಾರಗಳು ನಿಯಂತ್ರಿಸದೇ ಹೋದಲ್ಲಿ ಯುವಜನತೆ ಅಡ್ಡದಾರಿ ಹಿಡಿಯುವ ಸಾಧ್ಯತೆ ಇದೆ ಎಂದು  ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ್ ಕೆ. ಹೇಳಿದರು. ಡ್ರಗ್ಸ್ […]

ಅತ್ಯಾಚಾರಿಗಳ ವಿರುದ್ದ ಪ್ರಬಲ ಕಾನೂನು ರೂಪಿಸುವಂತೆ ಎಬಿವಿಪಿ ಮನವಿ

Saturday, January 5th, 2013
ABVP Protest

ಮಂಗಳೂರು : ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಧಪಟ್ಟಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೀಡಿದ ದೇಶವ್ಯಾಪಿ ಪ್ರತಿಭಟನೆಗೆ ಎಲ್ಲೆಡೆಯಂತೆ ಮಂಗಳೂರಿನಲ್ಲು ಉತ್ತಮ ಬೆಂಬಲ ವ್ಯಕ್ತವಾಗಿದೆ. ದಿಲ್ಲಿ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದ್ದು ಅತ್ಯಾಚಾರಕೊಳಪಟ್ಟ ವಿದ್ಯಾರ್ಥಿಯ ಸಾವು ದುರದೃಷ್ಟಕರ ಸಂಗತಿ. ಸಮಾಜದಲ್ಲಿ ಇಂತಹ ಪ್ರಕರಣಗಳು ಮತ್ತೆ ಮತ್ತೆ ನಡೆಯುತ್ತಿದ್ದು ದೇಶದ ಜನತೆ ತಲೆತಗ್ಗಿಸುವಂತಾಗಿದೆ ಆದರಿಂದ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವುದಲ್ಲದೆ ಯುವಶಕ್ತಿ ಇದರ ವಿರುದ್ಧ ಹೋರಾಡಬೇಕು ಪ್ರತಿಭಟನೆಯ ಸಂಘಟನಾ ಕಾರ್ಯದರ್ಶಿ ವಿನಯ್ ಹೊರಟ್ಟಿ ಹೇಳಿದರು. ಅತ್ಯಾಚಾರಿಗಳ […]

ಕಸಬ್ ಗೆ ಗಲ್ಲು ಎಬಿವಿಪಿ ವತಿಯಿಂದ ವಿಜಯೋತ್ಸವ

Wednesday, November 21st, 2012
ABVP celebrated Vijayotsav

ಮಂಗಳೂರು : ಮುಂಬೈ ದಾಳಿಯಲ್ಲಿ ಬಂಧನಕ್ಕೊಳಗಾದ, ಲಷ್ಕರ್‌-ಇ-ತೊಯ್ಬಾ ಸಂಘಟನೆಯವನಾದ ಅಜ್ಮಲ್‌ ಕಸಬ್‌ ನನ್ನು ಇಂದು ಮುಂಜಾನೆ 7.30ಕ್ಕೆ ಪುಣೆಯಲ್ಲಿರುವ ಯರವಾಡ ಜೈಲಿನಲ್ಲಿ ಗಲ್ಲಿಗೇರಿಸಿರುವುದಕ್ಕಾಗಿ ಇಂದು ಕೆಪಿಟಿ ಬಳಿಯ ಬಸವೇಶ್ವರ ವೃತ್ತದಲ್ಲಿ ಎಬಿವಿಪಿ ವತಿಯಿಂದ ವಿಜಯೋತ್ಸವವನ್ನು ಆಚರಿಸಲಾಯಿತು. ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ್.ಕೆ ಮಾತನಾಡಿ ಕಸಬ್ ನನ್ನು ಗಲ್ಲಿಗೇರಿಸಿರುವುದು ಅಭಿನಂದನಾರ್ಹ ವಿಷಯವಾಗಿದ್ದು , ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಕೇಂದ್ರ ಸರಕಾರವನ್ನು ಅಭಿನಂದಿಸುತ್ತೇನೆ ಎಂದರು. ಕಸಬ್ ನನ್ನು ಗಲ್ಲಿಗೇರಿಸಿರುವುದು ಉಗ್ರಗಾಮಿಗಳ ವಿರುದ್ಧ ಸಿಕ್ಕ ಜಯ ಹಾಗೂ ದೇಶದ್ರೋಹಿಗಳಿಗೆ ಬೆಂಬಲ […]