ಒಂದು ರೂಪಾಯಿಗೆ ಕೆ.ಜಿ. ಅಕ್ಕಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಚಿವ ರೈ ಚಾಲನೆ
Wednesday, July 10th, 2013ಮಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಇಂದು ಬೆಳಗ್ಗೆ ನಗರದ ಪುರಭವನದಲ್ಲಿ ಬಡಕುಟುಂಬವೊಂದಕ್ಕೆ 30 ಕೆ.ಜಿ. ಅಕ್ಕಿಯನ್ನು ನೀಡುವುದರ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಬಿಪಿಎಲ್ ಪಟ್ಟಿಯಲ್ಲಿರುವ ಪ್ರತಿಯೊಂದು ಕುಟುಂಬಕ್ಕೆ ತಿಂಗಳಿಗೆ 30 ಕೆ.ಜಿ. ಅಕ್ಕಿಯನ್ನು ಕೆ.ಜಿ.ಗೆ ಒಂದು ರೂಪಾಯಿಯಂತೆ ನೀಡಲಾಗುವುದು. ಈ ಯೋಜನೆ ಬಡವರಿಗೆ ತಲುಪುವಂತೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ರೈ ಹೇಳಿದರು. ರಾಷ್ಟ್ರದಲ್ಲಿ ಈ […]