ಲೋಕಲ್ ಟ್ರೈನ್‌ನಲ್ಲಿ ಕೇಜ್ರಿವಾಲ್ ಪ್ರಚಾರ

Thursday, March 13th, 2014
Arvind-Kejriwal

ಮುಂಬೈ: ಲೋಕಸಭಾ ಚುನಾವಣೆ ಅಂಗವಾಗಿ ಪ್ರಚಾರಕ್ಕಾಗಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಬುಧವಾರ ಮುಂಬೈಗೆ ಭೇಟಿ ನೀಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ನೇರವಾಗಿ ಆಟೋದಲ್ಲಿ ತೆರಳಿದ ಕೇಜ್ರಿವಾಲ್, ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ. ತದ ನಂತರ  ಚರ್ಚ್‌ಗೇಟ್ ರೈಲ್ವೇ ಸ್ಟೇಷನ್ ಬಳಿ ಲೋಕಲ್ ಟ್ರೈನ್‌ನಲ್ಲಿ ಏರಿದ ಅರವಿಂದ್ ಕೇಜ್ರಿವಾಲ್ ಜನತೆಯೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಎಎಪಿ ಕಾರ್ಯಕರ್ತರು ಹೆಚ್ಚಾಗಿ ನೆರದಿದ್ದು, ನೂಕು ನುಗ್ಗಲಾಗಿದೆ ಈ ಸಂದರ್ಭದಲ್ಲಿ ಮೆಟಲ್ ಡಿಟೆಕ್ಟರ್ ಸೇರಿದಂತೆ ಇತರೆ ಉಪಕರಣಗಳನ್ನು […]

ರಾಹುಲ್, ಕೇಜ್ರಿ ವಿರುದ್ಧ ದೂರು

Monday, March 10th, 2014
Rahul-Gandhi

ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ವಿರುದ್ಧ ಭಾನುವಾರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಿಂದಲೇ ಮಹಾತ್ಮಾ ಗಾಂಧಿ ಹತ್ಯೆಯಾಯಿತು ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪದಿಂದ ಕ್ರುದ್ಧಗೊಂಡಿರುವ ಬಿಜೆಪಿ ಅವರ ವಿರುದ್ಧ ಆಯೋಗಕ್ಕೆ ದೂರು ನೀಡಿದೆ. ಮಾತ್ರವಲ್ಲ ಕಾಂಗ್ರೆಸ್‌ನ ಮಾನ್ಯತೆ ರದ್ದುಮಾಡುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ನಾಯಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ […]

ಕೇಜ್ರಿವಾಲ್ ಜತೆ ಡಿನ್ನರ್ ಗೆ 20 ಸಾವಿರ ರುಪಾಯಿ ಶುಲ್ಕ!

Saturday, March 8th, 2014
Arvind-Kejriwal

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಊಟ ಮಾಡುವ ಭಾಗ್ಯ ಬೆಂಗಳೂರಿಗರಿಗೆ ಸಿಕ್ಕಿದೆ. ಆದರೆ ಅದಕ್ಕಾಗಿ ನೀವು 20 ಸಾವಿರ ರುಪಾಯಿ ಖರ್ಚು ಮಾಡಬೇಕು ಅಷ್ಟೆ. ಅರವಿಂದ್ ಕೇಜ್ರಿವಾಲ್ ಅವರು ಇದೇ ಮಾರ್ಚ್ 15ರಂದು ನಗರಕ್ಕೆ ಆಗಮಿಸುತ್ತಿದ್ದು, ಈ ವೇಳೆ ಆಪ್ ನಾಯಕರು ಪಕ್ಷದ ನಿಧಿ ಸಂಗ್ರಹಣೆಗೆ ಭೋಜನಕೂಟ ಏರ್ಪಡಿಸಿದ್ದಾರೆ. ನೀವು 20 ಸಾವಿರ ರುಪಾಯಿ ಕೊಟ್ಟರೆ, ಕೇಜ್ರಿವಾಲ್ ಜತೆ ಊಟದೊಂದಿಗೆ ಸಂದರ್ಶನ ಮಾಡಬಹುದು. ಇತ್ತಿಚೀಗಷ್ಟೆ ಎಎಪಿ […]

ಗುಜರಾತ್ ಅಭಿವೃದ್ಧಿ ಬಗ್ಗೆ ಮೋದಿ ಹೇಳುತ್ತಿರುವುದೆಲ್ಲ ಸುಳ್ಳು: ಕೇಜ್ರಿವಾಲ್

Friday, March 7th, 2014
Arvind-Kejriwal

ಅಹಮದಾಬಾದ್: ಪದೇಪದೆ ಗುಜರಾತ್ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿಕೊಳ್ಳುತ್ತಿರುವ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಗುಜರಾತ್ ಅಭಿವೃದ್ಧಿಯಾಗಿದೆ ಎಂದು ಮೋದಿ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ವಾಸ್ಥವದಲ್ಲಿ ಗುಜರಾತ್‌ನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಅವರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಹೇಳಿರುವ ಆಮ್ ಆದ್ಮಿ ಪಕ್ಷದ ನಾಯಕ, ಗುಜರಾತ್ ಅಭಿವೃದ್ಧಿಗೆ ಸಂಬಂಧಿಸಿದ 16 ಪ್ರಶ್ನೆಗಳ ಪಟ್ಟಿಯೊಂದಿಗೆ ಗುಜರಾತ್ ಮುಖ್ಯಮಂತ್ರಿಯ ನಿವಾಸಕ್ಕೆ ಭೇಟಿ […]

ಶಾಂತಿ ಕಾಪಾಡಲು ಕೇಜ್ರಿವಾಲ್ ಕರೆ

Thursday, March 6th, 2014
Arvind-kejriwa

ನವದೆಹಲಿ: ಬುಧವಾರ ಬಿಜೆಪಿ ಪ್ರಧಾನ ಕಾರ್ಯಾಲಯದ ಹೊರಗೆ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆಪ್ ನಾಯಕರಾದ ಅಶತೋಷ್, ಶಾಜಿಯಾ ಇಲ್ಮೀ ಅವರ ಬಂಧನಕ್ಕೆ ಆದೇಶಿಸಿದ್ದಾರೆ. ನಿನ್ನೆ ನಡೆದ ಈ ಘಟನೆಯಲ್ಲಿ ಕನಿಷ್ಟ 14 ಆಪ್ ಕಾರ್ಯಕರ್ತರನ್ನು ಈವರೆಗೆ ಬಂಧಿಸಲಾಗಿದೆ. ಆದಾಗ್ಯೂ, ನಿನ್ನೆ ನಡೆದ ಅಹಿತಕರ ಘಟನೆಗೆ ಕ್ಷಮೆಯಾಚಿಸಿದ ಆಪ್ ನೇತಾರ  ಅರವಿಂದ್ ಕೇಜ್ರಿವಾಲ್ ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ನೇತಾರರಾದ ಡಾ.ಹರ್ಷವರ್ಧನ್, […]

ಅರವಿಂದ ಕೇಜ್ರಿವಾಲ್ ಬಂಧನ

Thursday, March 6th, 2014
Arvind-kejriwa

ಹಮದಾಬಾದ್: ಬುಧವಾರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಉತ್ತರ ಗುಜರಾತ್‌ನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಆಪ್ ನಾಯಕ ಅರವಿಂದ ಕೇಜ್ರಿವಾಲ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ಘಟನೆ ದೆಹಲಿ ಹಾಗೂ ಲಖನೌನಲ್ಲಿ ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಕೇಜ್ರಿ ವಶಕ್ಕೆ ತೆಗೆದುಕೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ಆಪ್ ಕಾರ್ಯಕರ್ತರು ನವದೆಹಲಿಯಲ್ಲಿನ ಬಿಜೆಪಿ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಆಪ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಇದಲ್ಲದೇ ಗುಜರಾತ್‌ನ ಹಲವೆಡೆಯೂ ಬಿಜೆಪಿ-ಆಪ್ […]

ಗುಜರಾತ್‌ನಲ್ಲಿನ ರಾಮರಾಜ್ಯವನ್ನು ನೋಡಲು ಬಂದಿದ್ದೇನೆ: ಕೇಜ್ರಿವಾಲ್

Wednesday, March 5th, 2014
Arvind-Kejriwal

ಅಹ್ಮದಾಬಾದ್: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಸುದ್ದಿ ಕೇಳಿಬರುತ್ತಿದ್ದಂತೆ, ಕೇಜ್ರಿವಾಲ್ ಇಂದಿನಿಂದ ಗುಜರಾತ್‌ನಲ್ಲಿ 4 ದಿನಗಳ ಪ್ರವಾಸ ಆರಂಭಿಸಿದ್ದಾರೆ. ಪ್ರಧಾನಿ ಅಭ್ಯರ್ಥಿಯಾಗಿರುವ ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಏನೆಲ್ಲಾ ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುವುದಕ್ಕಾಗಿಯೇ ತಾನು ಗುಜರಾತ್ ಪ್ರವಾಸ ಕೈಗೊಡಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತ್ ಸರ್ಕಾರ ಮತ್ತು ಮಾಧ್ಯಮಗಳು ಗುಜರಾತ್‌ನಲ್ಲಿ ರಾಮರಾಜ್ಯ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ. ಅವರು ಹೇಳುವಂತೆ ಇಲ್ಲಿ ವಿದ್ಯಾಭ್ಯಾಸದಲ್ಲಿ ಪ್ರಗತಿಯಾಗಿದೆ, ಆರೋಗ್ಯ ಸಮಸ್ಯೆಗಳು ನಿರ್ಮೂಲನೆಯಾಗಿವೆ, ಭ್ರಷ್ಟಾಚಾರ ಇಲ್ಲಿಲ್ಲ…ಆದ್ದರಿಂದ […]

ದೆಹಲಿಗೆ ಇನ್ನು ಜಂಗ್ ರಾಜ್ಯಭಾರ

Tuesday, February 18th, 2014
Najib--Jung

ನವದೆಹಲಿ: ದೆಹಲಿಯಲ್ಲಿ ಸೋಮವಾರ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಸಿಎಂ ಅರವಿಂದ ಕೇಜ್ರಿವಾಲ್ ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ. ಕೇಜ್ರಿವಾಲ್ ರಾಜಿನಾಮೆ ಅಂಗೀಕಾರ ಅಮಾನತಿನಲ್ಲಿ ವಿಧಾನಸಭೆ ದೆಹಲಿ ವಿಧಾನಸಭೆಯನ್ನು ಅಮಾನತಿನಲ್ಲಿಡಲಾಗಿದೆ ಎಂದು ಸಂಸತ್‌ನ ಎರಡೂ ಸದನಗಳಲ್ಲಿ ಕೇಂದ್ರ ಗೃಹ ಸಚಿವ ಸುಶೀಲ್‌ಕುಮಾರ್ ಶಿಂದೆ ಸ್ವಯಂಪ್ರೇರಿತ ಹೇಳಿಕೆ ನೀಡಿದ್ದಾರೆ.  ರಾಷ್ಟ್ರಪತಿ ಪ್ರಣಬ್ ಅವರು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮೂಲಕ ದೆಹಲಿಯಲ್ಲಿ ಆಡಳಿತ ನಡೆಸಲಿದ್ದಾರೆ ಎಂದು ಲೆ.ಗವರ್ನರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಕೇಜ್ರಿವಾಲ್ ಸರ್ಕಾರ ರಾಜಿನಾಮೆ ನೀಡಿದ ಬೆನ್ನಲ್ಲೇ […]