ಪುತ್ತೂರಿನಲ್ಲಿ ಮುಸ್ಲಿಂ ಧರ್ಮಗುರುಗಳ ಫತ್ವಾ

Wednesday, February 5th, 2014
Dance

ಮಂಗಳೂರು: ‘ಹೆಣ್ಣು ಮಕ್ಕಳು ವೇದಿಕೆಯ ಮೇಲೆ ನೃತ್ಯ ಮಾಡುವುದನ್ನು ಕುರಾನ್ ಸಂಪೂರ್ಣವಾಗಿ ವಿರೋಧಿಸುತ್ತದೆ. ಹೆಣ್ಣು ಮಕ್ಕಳು ನೃತ್ಯ ಮಾಡುವುದನ್ನು ಗಂಡು ಮಕ್ಕಳು ನೋಡುವುದು, ಹೆಣ್ಣು ಮಕ್ಕಳು ಗಂಡು ಮಕ್ಕಳನ್ನು  ನೋಡು­ವುದನ್ನು ಹದೀಸ್ ಮತ್ತು ಕುರಾನ್ ವಿರೋಧಿಸುತ್ತದೆ. ಆದ್ದರಿಂದ ಹೆಣ್ಮಕ್ಕಳು ಶಾಲೆಯಲ್ಲಿ ನೃತ್ಯ ಮಾಡ­ಬಾರದು’ ಎಂದು ಪುತ್ತೂರಿನ ಕೊಡಿಪ್ಪಾಡಿ ಮದ್ರಸದ ಧರ್ಮಗುರು ಅಬೂಬಕ್ಕರ್‌ ಮದನಿ ಫತ್ವಾ ಹೊರಡಿಸಿದ್ದಾರೆ. ಇದರಿಂದಾಗಿ ಪುತ್ತೂರಿನ ಕೊಡಿ­ಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವ­ಹಿಸುವ ಅವಕಾಶ ಕಳೆದುಕೊಂಡಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು […]

14 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಸಿದ್ಧ; ಉಳಿದವು ಕಗ್ಗಂಟು

Monday, February 3rd, 2014
ಯಡಿಯೂರಪ್ಪ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಇಂದು ಕೋರ್ ಕಮಿಟಿ ಸಭೆ ನಡೆಸಿದ್ದಾರೆ. 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಸಿದ್ಧವಾಗಿದ್ದರೆ ಉಳಿದವು ತುಸು ಕಗ್ಗಂಟು ಎನಿಸಿದೆ. ಈ ಮಧ್ಯೆ, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಣಕ್ಕಿಳಿಸುವ ಸಂಬಂಧ ಗಹನವಾದ ಚರ್ಚೆಗಳು ನಡೆದವು. ಶಿವಮೊಗ್ಗದಿಂದ ಸ್ಪರ್ಧಿಸುವಂತೆ ಬಿಎಸ್ವೈ ಮೇಲೆ ಪಕ್ಷದ ರಾಜ್ಯ ಮುಖಂಡರೂ ಒತ್ತಡ ಹಾಕಿದ್ದಾರೆ. ಶಿವಮೊಗ್ಗದ ಸ್ಥಳೀಯರು ಮುಖಂಡರು ಹಿಂದಿನಿಂದಲೂ ಯಡಿಯೂರಪ್ಪ ಮೇಲೆ ಒತ್ತಡ ಹಾಕುತ್ತಿದ್ದು, ಚುನಾವಣೆಗೆ […]

ಗುಜರಾತ್ 6 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು

Wednesday, June 5th, 2013
Narendra Modi

ಅಹಮದಾಬಾದ್:  ಗುಜರಾತ್ ವಿಧಾನಸಭೆಯ ನಾಲ್ಕು ಹಾಗೂ ಎರಡು ಲೋಕಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಆರು ಸ್ಥಾನಗಳಲ್ಲೂ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಮತ್ತಷ್ಟು ಬಲ ಬಂದಂತಾಗಿದೆ. ಪೋರಬಂದರ್ ಮತ್ತು ಬನಸ್ಕಾಂತ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಲಿಂಬ್ಡಿ, ಚೆತ್ಪುರ್, ಧೋರ್ಜಿ ಹಾಗೂ ಮಾರ್ವ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಸ್ಥಾನಗಳಲ್ಲೂ ಗೆಲುವು ಸಾಧಿಸಿದೆ. ಈ ಎಲ್ಲ ಕ್ಷೇತ್ರಗಳಿಗೆ ಕಳೆದ ಭಾನುವಾರ ಮತದಾನ ನಡೆದಿತ್ತು. ಗುಜರಾತ್ ಉಪ […]

ಸಚಿವರಿಂದ ಸದನದಲ್ಲಿ ಬ್ಲೂಫಿಲ್ಮ್ ವೀಕ್ಷಣೆ, ಪಾಲೇಮಾರ್ ಕೂಡ ಬಾಗಿ

Wednesday, February 8th, 2012
watching porn Video at Assembly

ಬೆಂಗಳೂರು : ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಕುರಿತು ವಿಪಕ್ಷಗಳ ಸದಸ್ಯರು ಸರ್ಕಾರದ ಗಮನ ಸೆಳೆಯಲು ಗಂಭೀರವಾಗಿ ಮಾತನಾಡುತ್ತಿದ್ದ ವೇಳೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಅಶ್ಲೀಲ ದೃಶ್ಯಗಳನ್ನು ಒಳಗೊಂಡ ಬ್ಲೂಫಿಲ್ಮ್ ತನ್ನ ಮೊಬೈಲ್‌ನಲ್ಲಿ ವೀಕ್ಷಿಸಿ ಸಿಕ್ಕಿಬಿದ್ದ ಆಘಾತಕಾರಿ ಪ್ರಸಂಗ ಬೆಳಕಿಗೆ ಬಂದಿದೆ. ಶಾಸಕಾಂಗದ ಪರಮೋಚ್ಚ ಸ್ಥಳವಾದ ವಿಧಾನಸಭೆಯಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಾದಲ್ಲಿ ತಲೆತಗ್ಗಿಸುವಂಥ ಘಟನೆಯೊಂದು ನಡೆದಿದೆ. ದೇಶದಲ್ಲೇ ಇಂಥದೊಂದು ಹೀನ ಸಂಸ್ಕೃತಿಯ ಬೆಳವಣಿಗೆ ನಡೆದಿರುವುದು ಇದೇ […]