ಮಡೆ ಸ್ನಾನವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ : ಶಿವರಾಮು
Thursday, December 5th, 2013ಮಂಗಳೂರು : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನವನ್ನು ವಿರೋಧಿಸಿ ಮತ್ತು ಈ ಕೂಡಲೇ ರಾಜ್ಯ ಸರ್ಕಾರ ಈ ಸಂಪ್ರದಾಯಕ್ಕೆ ತಡೆ ನೀಡ ಬೇಕೆಂದು ಒತ್ತಾಯಿಸಿ ಬರುವ ಡಿಸೆಂಬರ್ 7ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬುಧವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದ್ದಾರೆ. ಶಿವರಾಮು ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಸಂಪ್ರದಾಯ, ನಂಬಿಕೆಯ ಹೆಸರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಇತರೆ ದೇವಸ್ಥಾನಗಳಲ್ಲಿ ನಡೆಯುತ್ತಿರುವ ಮಡೆ ಸ್ನಾನ ಅಮಾನವೀಯವಾಗಿದೆ. […]