ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಷ್ಟ್ರಪತಿಗೆ ಮನವಿ ಸಲ್ಲಿಸುವ ನಿರ್ಧರ
Saturday, October 26th, 2013ಮಂಗಳೂರು : ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಸಿಬಿಐ ಅಧಿಕಾರಿಗಳಿಗೆ ವಹಿಸಬೇಕೆಂದು ಆಗ್ರಹಿಸಿ ಬೆಳ್ತಂಗಡಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಮುಂದಾಳತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಷ್ಟ್ರಪತಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ಬೆಳಿಗ್ಗೆಯಿಂದಲೇ ಸಾವಿರಾರು ನಾಗರಿಕರು ಪ್ರತಿಭಟನೆಗೆ ಆಗಮಿ ಸಿದ್ದರು. ತಾಲೂಕಿನ ಎಲ್ಲೆಡೆ ಜನರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸೌಜನ್ಯ ಪ್ರಕರಣದಲ್ಲಿ ಪೊಲೀಸ್ […]