ಮಂಗಳೂರಿನ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Saturday, April 21st, 2018
bjp candidates

ಮಂಗಳೂರು:  ಮಂಗಳೂರಿನ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದ್ದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ.ವೇದವ್ಯಾಸ್ ಕಾಮತ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಂಗಳೂರು ಉತ್ತರ ಬಿಜೆಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ, ದಂತವೈದ್ಯ ಡಾ. ವೈ ಭರತ್ ಶೆಟ್ಟಿಯವರಿಗೆ ಟಿಕೆಟ್ ಲಭಿಸಿದೆ. ಮಂಗಳೂರು ಕ್ಷೇತ್ರದಿಂದ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಪು […]

ಸುಳ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಗೆ ಭಾರೀ ಬೆಂಬಲ, ಯಾತ್ರೆಗೆ ಜನಸಾಗರ

Friday, November 10th, 2017
parivarthana yathre

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಯಾತ್ರೆ ಸಂಚಾರ ನಡೆಸುತ್ತಿದೆ, ಒಂದು ದಿನದ ವಿಶ್ರಾಂತಿ ಬಳಿಕ ಬಿಜೆಪಿ ನಾಯಕರು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಬಿಜೆಪಿಯ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರ ಬೆಳಗ್ಗೆ ಕರ್ನಾಟಕ ಬಿಜೆಪಿಯ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಬಸ್ಸಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ 7ನೇ ದಿನದ ಯಾತ್ರೆ ಆರಂಭವಾಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ಚುನಾವಣೆ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಯಾತ್ರೆ ಆರಂಭವಾಯಿತು. […]

ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಬ್ಲಾಕ್ ಕಾಂಗ್ರೆಸ್ ದೂರು ಸಲ್ಲಿಕೆ

Friday, October 27th, 2017
congress

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ಅತ್ಯಂತ ಅವಹೇಳಕಾರಿಯಾದ ಮಾತನಾಡಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಬ್ಲಾಕ್ ಕಾಂಗ್ರೆಸ್ ವತಿಯಿಂದ ನೀಡಿರುವ ದೂರಿನಲ್ಲಿ ರಮಾನಾಥ ರೈ ಅವರ ಘನತೆ, ಗೌರವ, ವ್ಯಕ್ತಿತ್ವವನ್ನು ಲೆಕ್ಕಿಸದೆ ಅವರ ಬಗ್ಗೆ ಕೀಳಭಿರುಚಿಯ ಶಬ್ದ ಬಳಕೆ ಮಾಡಿದ್ದಾರೆ ಎಂದಿದ್ದಾರೆ. ಸಂಜೀವ ಮಠಂದೂರು ಅವರು ಉದ್ದೇಶಪೂರ್ವಕವಾಗಿಯೇ ಸಚಿವರ ಬಗ್ಗೆ ಮಾನಹಾನಿಕರ ಮಾತುಗಳನ್ನು ಸಾರ್ವಜನಿಕವಾಗಿ ಆಡಿದ್ದಾರೆ. ಅಲ್ಲಾದೆ […]

ಬಿಜೆಪಿಯ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮೇಲೆ ವಿಟ್ಲ ಠಾಣೆಯಲ್ಲಿ ದೂರು ದಾಖಲು

Thursday, October 19th, 2017
sanjeeva matandur

ಮಂಗಳೂರು: ರಾಜಕೀಯ ಮೇಲಾಟದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ, ಪ್ರತ್ಯಾರೋಪ, ಜಿಲ್ಲೆಯಲ್ಲಿ ದೂರು, ಪ್ರತಿದೂರುಗಳ ಹಾವಳಿ ಜಾಸ್ತಿಯಾಗಿದೆ.  ಅವಹೇಳನಕಾರಿಯಾಗಿ ಮಾತನಾಡುವುದು ಈಗ ಸರ್ವೇಸಾಮಾನ್ಯವಾಗಿದೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದರ ವಿರುದ್ಧ ಬಿಜೆಪಿಯ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮೇಲೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿ ಸಚಿವ ರಮಾನಾಥ ರೈಯವರನ್ನು ಪಿಲಿಗೊಬ್ಬುನ ಅರೆಮರ್ಲ (ಹುಲಿವೇಷ ಆಡುವ ಅರೆಹುಚ್ಚ) ಹಾಗೂ ಶಾಸಕಿ ಶಕುಂತಳಾ ಶೆಟ್ಟಿಯವರನ್ನು ಏಕವಚನದಲ್ಲಿ […]

ರೋಶನ್ ಬೇಗ್ ವಿರುದ್ಧ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರ ಪ್ರತಿಭಟನೆ

Tuesday, October 17th, 2017
BJP

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ರಾಜ್ಯ ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಶನ್ ಬೇಗ್ ವಿರುದ್ಧ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಪಿವಿಎಸ್ ವೃತ್ತದ ಬಳಿ ರಸ್ತೆ ತಡೆದು ಪ್ರತಿಭಟಿಸಿದರು. ರಸ್ತೆಯಲ್ಲಿ ಕುಳಿತು ಪ್ರತಿಭಟಿಸುವ ಮೂಲಕ ಸಂಚಾರವನ್ನು ತಡೆದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಮಹಿಳಾ ಕಾರ್ಯಕರ್ತರು ಕೂಡಾ ಪ್ರತಿಭಟನೆಯಲ್ಲಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕ ಎನ್. […]

ಕಾಪು: ಬಿಜೆಪಿಯ ಪರಿವರ್ತನಾ ಯಾತ್ರೆ

Saturday, October 14th, 2017
kapu

ಉಡುಪಿ: ಬೆಂಗಳೂರಿನಿಂದ ಹೊರಟ ಬಿಜೆಪಿಯ ಪರಿವರ್ತನಾ ಯಾತ್ರೆ ಉಡುಪಿ ಜಿಲ್ಲೆಯ ಹೆಜಮಾಡಿ ಗಡಿಗೆ ಆಗಮಿಸುವ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಹಾಗೂ ಕಾಪುವಿನಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು ಎಂದು ಕಾಪುವಿನ ಪಕ್ಷದ ಕಚೇರಿನಲ್ಲಿ ನಡೆದ ಪೂರ್ವಭಾವಿ ಸಭೆ ತಿಳಿಸಿದೆ. ಜಿಲ್ಲಾ ಅಧ್ಯಕ್ಷ ರತ್ನಾಕರ ಹೆಗ್ಡೆ ಮಾತನಾಡಿ, ನ. 2ರಂದು ಬೆಂಗಳೂರಿನಿಂದ ಹೊರಡುವ ಪರಿವರ್ತನಾ ಯಾತ್ರೆ ನ.11ರಂದು ಉಡುಪಿ ಜಿಲ್ಲೆಗೆ ತಲುಪಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಸಮಾವೇಶ ಹಾಗೂ ಯಾತ್ರೆಯನ್ನು ಸ್ವಾಗತಿಸಬೇಕು. ಈ ಕಾರ್ಯಕ್ರಮಕ್ಕೆ ಕ್ಷೇತ್ರದ […]

ರೋಷನ್ ಬೇಗ್ ವಿರುದ್ಧ ಬಿಜೆಪಿ ನಾಯಕರ ಕಾನೂನು ಸಮರ

Saturday, October 14th, 2017
arun kumar

ಮಂಗಳೂರು :  ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಸಚಿವ ರೋಷನ್ ಬೇಗ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ನ್ಯಾಯಾಲಯದಲ್ಲಿ ಸಚಿವ ರೋಷನ್ ಬೇಗ್ ವಿರುದ್ಧ ದೂರು ದಾಖಲಿಸುವುದಾಗಿ ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದ ಬಳಸಿ ಅವಹೇಳನಕಾರಿ ಹೇಳಿಕೆ ನೀಡಿದ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ವಿರುದ್ಧ ಬಿಜೆಪಿ ನಾಯಕರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಪುಲಕೇಶಿನಗರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ರೋಷನ್ ಬೇಗ್, ಪ್ರಧಾನಿ ಮೋದಿಯವರನ್ನು ಸೂ…. ಮಗ, […]

ಜಿಲ್ಲಾ ಉಸ್ತುವಾರಿ ಸಚಿವರು ಸಿಎಂ ಸಿದ್ದರಾಮಯ್ಯನವರಂತೆ ನಿದ್ದೆ ಮಾಡುತ್ತಿದ್ದಾರೆ

Wednesday, May 17th, 2017
bjp

ಮಂಗಳೂರು:  ಮಂಗಳೂರು ಮತ್ತು ಬಂಟ್ವಾಳವನ್ನು ಬರ ಪೀಡಿತ ತಾಲೂಕುಗಳಾಗಿ ಘೋಷಿಸಿರುವ ಸರಕಾರ ಅದಕ್ಕೆ ಏನನ್ನೂ ಮಾಡಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರು ಸಿಎಂ ಸಿದ್ದರಾಮಯ್ಯನವರಂತೆ ನಿದ್ದೆ ಮಾಡುತ್ತಿದ್ದಾರೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಮಠಂದೂರು, ಬರ ಪರಿಹಾರಕ್ಕೆ ತುರ್ತಾಗಿ ಸ್ಪಂದಿಸಿ ಪರಿಹಾರ ನೀಡಬೇಕಾದವರು ವ್ಯರ್ಥ ಕಾಲಹರಣ ಮಾಡಿ ನಿದ್ದೆ ಮಾಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆ ವೇಳೆ ತಾನು ನೀಡಿದ ಭರವಸೆಗಳನ್ನು ಮರೆತು ಭ್ರಷ್ಟಾಚಾರ, ನಿರ್ಲಕ್ಷ್ಯ […]

ಮೋದಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದ್ದು ಬಿಜೆಪಿಯಲ್ಲ, ಆರೆಸ್ಸೆಸ್: ಸಿದ್ದು

Thursday, March 13th, 2014
Siddaramaiah

ಬೆಂಗಳೂರು: ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ್ದು ಬಿಜೆಪಿಯಲ್ಲ. ಬದಲಾಗಿ ಆರೆಸ್ಸೆಸ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದೆ. ಮೋದಿ ಆರೆಸ್ಸೆಸ್ ಮನುಷ್ಯ. ಆರೆಸ್ಸೆಸ್ ಹೇಳಿದಂತೆ ಕೇಳುತ್ತಾರೆ ಹೊರತು ಬಿಜೆಪಿ ಹೇಳಿದಂತಲ್ಲ. ಬಿಜೆಪಿಯಲ್ಲಿ ಸಾಕಷ್ಟು ಹಿರಿಯ ನಾಯಕರಿದ್ದರು. ಲಾಲ್‌ಕೃಷ್ಣ ಆಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರನ್ನೆಲ್ಲ ಬಿಟ್ಟು ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಲು ಆರೆಸ್ಸೆಸ್ಸೇ ಕಾರಣ. ಚುನಾವಣೆ ಸಿದ್ಥತೆಯ ನಡುವೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಸಾಮೂಹಿಕ ಸಂದರ್ಶನ ನೀಡಿದರು. ಸಂದರ್ಶನದುದ್ದಕ್ಕೂ ದ್ವಂದ್ವ ನೀತಿಯ ಮಾತುಗಳಿಗೆ […]

ಮಮತಾಗೆ ಕೈಕೊಟ್ಟ ‘ಅಣ್ಣಾ’ ರಾಜಕೀಯ!

Thursday, March 13th, 2014
Mamata-Banerjee

ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮುಂದಿಟ್ಟುಕೊಂಡು ದೆಹಲಿಯಲ್ಲಿ ರಾಜಕೀಯ ಮಾಡಲು ಹೊರಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯೋಜನೆ ವಿಫಲವಾಗಿದೆ. ರಾಮಲೀಲಾ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ ರ್ಯಾಲಿಗೆ ಅಣ್ಣಾ ಕೈಕೊಟ್ಟಿದ್ದಾರೆ. ಬೆರಳೆಣಿಕೆ ಸಂಖ್ಯೆಯ ಜನರಿಗೆ ಮಮತಾ ಅವರೊಬ್ಬರೇ ಭಾಷಣ ಮಾಡಿ ಹೋಗಿದ್ದಾರೆ. ಅಣ್ಣಾ ಗೈರು ಹಾಜರಾಗಲು ಅನಾರೋಗ್ಯದ ಕಾರಣ ನೀಡಲಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಬೆಂಬಲಿಗ, ಭೂ ಸೇನೆ ನಿವೃತ್ತ ಮುಖ್ಯಸ್ಥ ಜ. ವಿ.ಕೆ. ಸಿಂಗ್ ಪ್ರಭಾವವೇ ರ್ಯಾಲಿಯಿಂದ ಅಣ್ಣಾ ದೂರ ಉಳಿಯಲು […]