ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕು : ದ.ಕ ಜಿಲ್ಲಾ ಯುವ ಮೋರ್ಚಾ

Tuesday, November 26th, 2013
BJP-Y.M

ಮಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪ ಸಂಖ್ಯಾತರ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ  ಹಾಗಾಗಿ ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಪಿ.ಮುನಿರಾಜು, ಇಂಡಿಯನ್ ಮುಜಾಹಿದ್ದೀನ್ ಎಂಬ ಭಯೋತ್ಪಾದನಾ ಸಂಘಟನೆಯನ್ನು ಹುಟ್ಟು ಹಾಕಿ ಭಯೋತ್ಪಾದನಾ ಕೃತ್ಯಗಳನ್ನು ನಡೆಸುತ್ತಿರುವ ಕರ್ನಾಟಕದವನೇ ಆಗಿರುವ ಯಾಸಿನ್ ಭಟ್ಕಳ್ ಯಾರೆಂಬುದು ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯದ […]

ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಸಮಿತಿಯಿಂದ ಕಾಲ್ನಡಿಗೆ ಜಾಥಾ

Saturday, November 16th, 2013
Yuva Morcha

ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಸಮಿತಿ ವತಿಯಿಂದ ನಗರದ ನೆಹರೂ ಮೈದಾನದಿಂದ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಜೆಪಿ ಕಚೇರಿವರೆಗೆ, ಬೆಂಗಳೂರಿನಲ್ಲಿ ನ. 17 ರಂದು ನಡೆಯಲಿರುವ ‘ಭಾರತ ಗೆಲ್ಲಿಸಿ’ ಶಕ್ತಿಶಾಲಿ ಭಾರತಕ್ಕಾಗಿ ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಕಾಲ್ನಡಿಗೆ ಜಾಥಾ ನ15, ಶುಕ್ರವಾರ ನಡೆಯಿತು. ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್‌ಕುಮಾರ್‌ ಕಟೀಲು ಮಕ್ಕಳಿಂದ ಹಿಡಿದು ಮುದುಕರ ವರೆಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಉತ್ಸುಕರಾಗಿದ್ದಾರೆ. ಮೋದಿ ಅಲೆ ಸರ್ವ ಭಾರತೀರ ಹೃದಯದಲ್ಲಿ ಮೋದಿ ಮಿಳಿತಗೊಂಡಿದ್ದಾರೆ ಎಂದು ಹೇಳಿದರು. ಗುಜರಾತ್‌ನಲ್ಲಿ ಮೋದಿ […]

ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತೊಕ್ಕೊಟ್ಟಿನಲ್ಲಿ ಪ್ರತಿಭಟನೆ

Thursday, November 14th, 2013
BJP-YM

ಮಂಗಳೂರು: ಮಂಗಳೂರು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತೊಕ್ಕೊಟ್ಟು-ಬಬ್ಬುಕಟ್ಟೆವರೆಗಿನ ರಸ್ತೆಯ ದುರಸ್ತಿಯನ್ನು ಖಂಡಿಸಿ  ಬುಧವಾರ ನಗರದ ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜಯರಾಂ ಶೆಟ್ಟಿ ಮಾತನಾಡಿ, ಒಳಚರಂಡಿ ಕಾಮಗಾರಿಗಾಗಿ ತೊಕ್ಕೊಟ್ಟಿನಿಂದ ಬಬ್ಬುಕಟ್ಟೆವರೆಗೆ ಅಗೆಯಲಾಗಿರುವ ರಸ್ತೆ ದುರಸ್ಥಿಪಡಿಸುವಂತೆ ಒತ್ತಾಯಿಸಿ , ರಾಜ್ಯ ಸರಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ತೊಕ್ಕೊಟ್ಟಿ ನಿಂದ ಬಬ್ಬುಕಟ್ಟೆವರೆಗಿನ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ಆರು ತಿಂಗಳ ಹಿಂದೆಯೂ ನಡೆದಂತಹ ಪ್ರತಿಭಟನೆ ವೇಳೆ ಅಧಿಕಾರಿಗಳು ನೀಡಿ ರುವ ಭರವಸೆಗಳು ಇನ್ನೂ ಈಡೇರಿಲ್ಲ. ಎಡಿಬಿಯಿಂದ ಲೋಕೋಪಯೋಗಿ ಇಲಾಖೆಗೆ […]

ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

Saturday, July 30th, 2011
BJP Yuva Morcha/ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಸಂಘ ನಿಕೇತನದಲ್ಲಿ ಶುಕ್ರವಾರ ಆಯೋಜಿಸಿದ ಯುವ ಸಂಘರ್ಷ ಆಂದೋಲನವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್‌ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಬಿಜೆಪಿ ವಿವಿಧ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಮತ್ತೆಮತ್ತೆ ಎದ್ದುಬಂದಿದೆ, ಸರಕಾರವನ್ನು ಉರುಳಿಸಲು ರಾಜಕೀಯ ವಿರೋಧಿಗಳ ಪ್ರಯತ್ನ ನಿರಂತರ ನಡೆಯುತ್ತಿದೆ ಎಂದರು. ಕಾರ್ಯಕರ್ತರು ಇನ್ನಷ್ಟು ಪಕ್ಷದ ಬೆಳವಣಿಗೆಯಲ್ಲಿ ಶ್ರಮವಹಿಸುವುದು ಅತ್ಯಗತ್ಯ. ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರವನ್ನು […]