ಬೀದಿಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾಮೂಹಿಕ ಧರಣಿ

Thursday, August 1st, 2024
Talapady-protest

ಮಂಗಳೂರು : ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು (01-08-2024) ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ದ‌.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘದ ಗೌರವಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ರವರು, *ಬದುಕಿಗೆ ಯಾವುದೇ […]

ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

Thursday, November 2nd, 2023
citu

ಮಂಗಳೂರು : ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು ಜಗಜ್ಜಾಹೀರಾಗಿದೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕತ್ತಲು ಮಾಡಲು ಹೊರಟಿದೆ. ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು […]

ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಬ್ರಹತ್ ಪ್ರತಿಭಟನಾ ಪ್ರದರ್ಶನ

Tuesday, March 29th, 2022
citu

ಮಂಗಳೂರು  : ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು(29-03-2022) ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಮೆರವಣಿಗೆ ಹಾಗೂ ಬ್ರಹತ್ ಪ್ರತಿಭಟನಾ ಪ್ರದರ್ಶನ ನಿರೀಕ್ಷೆಗೂ ಮೀರಿ ಕಾರ್ಮಿಕರು ಭಾಗವಹಿಸುವುದರೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸುಮಾರು ಮೂರು ಸಾವಿರಕ್ಕೂ ಮಿಕ್ಕಿದ ವಿವಿಧ ವಿಭಾಗದ ಕಾರ್ಮಿಕರು ಡಾ.ಬಿ.ಆರ್.ಅಂಬೇಡ್ಕರ್ ವ್ರತ್ತದಿಂದ ಮೆರವಣಿಗೆಯಲ್ಲಿ ಹೊರಟು ಕೇಂದ್ರ ಸರಕಾರದ ರೈತ ಕಾರ್ಮಿಕ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ನಗರದ […]

ಕಾರ್ಪೋರೇಟ್ ಕಂಪೆನಿ ಗಳಿಂದ ದೇಶ ಉಳಿಸಿ – ಪ್ರತಿಭಟನಾ ಪ್ರದರ್ಶನ

Monday, August 9th, 2021
cpim

ಮಂಗಳೂರು  : ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತ್ರತ್ವದಲ್ಲಿ ಸೋಮವಾರ ಕ್ಲಾಕ್ ಟವರ್ ಬಳಿಯಲ್ಲಿ  ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ ದೇಶವನ್ನು ಉಳಿಸಿ ದಿನಾಚರಣೆಯ ಭಾಗವಾಗಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು […]

ಜಿಲ್ಲಾಧಿಕಾರಿಗಳ ಕಚೇರಿಯೆದುರು ಅಖಿಲ ಭಾರತ ಮಹಾಮುಷ್ಕರ ಪ್ರದರ್ಶನ

Tuesday, January 8th, 2019
CITU

ಮಂಗಳೂರು  : ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ(JCTU) ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ಬೆಳಿಗ್ಗೆ ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತಿಭಟನೆಯಲ್ಲಿ INTUC ಜಿಲ್ಲಾ ನಾಯಕರಾದ ಮನೋಹರ್ ಶೆಟ್ಟಿ, ಬೊಂಡಾಲ ಚಿತ್ತರಂಜನ್ ಶೆಟ್ಟಿ,CITU ಜಿಲ್ಲಾ ನಾಯಕರಾದ ವಸಂತ ಆಚಾರಿ,ಜೆ.ಬಾಲಕ್ರಷ್ಣ ಶೆಟ್ಟಿ,ಸುನಿಲ್ ಕುಮಾರ್ ಬಜಾಲ್,AITUC ಜಿಲ್ಲಾ ನಾಯಕರಾದ ಎಚ್.ವಿ.ರಾವ್,ವಿ.ಕುಕ್ಯಾನ್,ಕರುಣಾಕರ್ ಸೇರಿದಂತೆ ಬ್ಯಾಂಕ್, ವಿಮೆ, BSNL, RMS, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಜನಪರ ಮರಳು ನೀತಿಗಾಗಿ ಆಗ್ರಹಿಸಿ ಧರಣಿ ಸತ್ಯಾಗ್ರಹ

Monday, December 3rd, 2018
protest

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾದಿಸಿರುವ ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಹಾಗೂ ಜನಪರ ಮರಳು ನೀತಿಗಾಗಿ ಆಗ್ರಹಿಸಿ CITU ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘಟನೆಯ ನೇತ್ರತ್ವದಲ್ಲಿ ನಗರದಲ್ಲಿಂದು(03-12-2018) ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು 24 ಗಂಟೆಗಳ ನಿರಂತರ ಧರಣಿ ಸತ್ಯಾಗ್ರಹವು ಪ್ರಾರಂಭಗೊಂಡಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಟ್ಟಡ ಕಾರ್ಮಿಕರ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿದ ಕಟ್ಟಡ ಕಾರ್ಮಿಕರ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ರವರು ಮಾತನಾಡುತ್ತಾ, *ಕರಾವಳಿ ಜಿಲ್ಲೆಗಳಲ್ಲಿ ಬಹಳ ವ್ಯವಸ್ಥಿತವಾಗಿ ಕ್ರತಕ ಮರಳು ಅಭಾವವನ್ನು ಸ್ರಷ್ಠಿಸಿ,ಜನಸಾಮಾನ್ಯರ ಬದುಕಿಗೆ ಮಾರಕ […]

ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಕ್ಕೆ ತಡೆಯೊಡ್ಡಿದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

Monday, October 22nd, 2018
dyfi

ಮಂಗಳೂರು  : ಚಿಲ್ಲರೆ ಬೀಡಿ ಸಿಗರೇಟ್-ತಂಬಾಕು ಪದಾರ್ಥಗಳ ಮಾರಾಟಕ್ಕೆ ಪ್ರತ್ಯೇಕ ಲೈಸೆನ್ಸ್ ಪಡೆಯಬೇಕೆಂಬ ರಾಜ್ಯ ಸರ್ಕಾರದ ಅವೈಜ್ಞಾನಿಕ ತೀರ್ಮಾನದ ವಿರುದ್ಧ, ವಿನಾ:ಕಾರಣ ಪೋಲಿಸ್ ದೌರ್ಜನ್ಯದ ವಿರುದ್ಧ, ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಗಾರರ ಬದುಕನ್ನು ರಕ್ಷಿಸಲು ಒತ್ತಾಯಿಸಿ ದ.ಕ.ಜಿಲ್ಲಾ ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಗಾರರ ಸಂಘದ ನೇತ್ರತ್ವದಲ್ಲಿ ನಗರದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯೆದುರು ಬೃಹತ್ ಪ್ರತಿಭಟನಾ ಪ್ರದರ್ಶನ ಜರುಗಿತು. 300ಕ್ಕೂ ಮಿಕ್ಕಿದ ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಗಾರರು ನಗರದ ಮಿನಿ ವಿಧಾನಸೌಧದಿಂದ ಮೆರವಣಿಗೆಯಲ್ಲಿ ಹೊರಟು,ಬೀಡಿ ಸಿಗರೇಟ್ ಮಾರಾಟಕ್ಕೆ ಪ್ರತ್ಯೇಕ ಲೈಸನ್ಸ್ […]

ಸಿಐಟಿಯು: ದ.ಕ. ಜಿಲ್ಲಾ ಸಮಿತಿ ವತಿಯಿಂದ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಧರಣಿ

Wednesday, October 25th, 2017
CITU

ಮಂಗಳೂರು: ದ.ಕ. ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿಯ ಮುಂಭಾಗ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಬುಧವಾರ ಧರಣಿ ನಡೆಯಿತು. ಕರ್ನಾಟಕ ಕಾರ್ಮಿಕರಿಗೆ ಕನಿಷ್ಠ ಕೂಲಿ 18 ಸವಾರ ರೂ. ನೀಡಲು ಒತ್ತಾಯಿಸಿ, ಗುತ್ತಿಗೆ ಪದ್ಧತಿ ನಿಷೇದಕ್ಕಾಗಿ, ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಲು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಒತ್ತಾಯಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಯಿತು. ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ […]