ಸಿಎಂ ಅವರನ್ನು ಅವಮಾನಿಸಿದ ಪೊಲೀಸ್ ಸಿಬ್ಬಂದಿ ಅಮಾನತು

Friday, November 3rd, 2017
police suspend

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯದ ಸಂದೇಶ ಪ್ರಕಟಿಸಿದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್’ಟೇಬಲ್ ರಾಜ ಶಿವಪ್ಪ ಬೆಣ್ಣೆ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇವರು ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಮಾನಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿದ್ದರು. ಇದರ ವಿರುದ್ಧ ದೂರು ಕೂಡ ಸಲ್ಲಿಕೆಯಾಗಿತ್ತು. ಇದೀಗ ಅವರನ್ನು ಕೆಲಸದಿಂದ ವಜಾ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ […]

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ವ್ಯಂಗ್ಯ

Thursday, November 2nd, 2017
Face book comment

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುರಿತಂತೆ ವ್ಯಂಗ್ಯ ಮಾಡಿ ಸಂದೇಶವನ್ನು ಶೇರ್‌ ಮಾಡಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್‌ಸ್ಟೇಬಲ್ ರಾಜ ಶಿವಪ್ಪ ಎಂಬುವವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಮಾನಿಸಿದ ಫೇಸ್‌ಬುಕ್‌ನಲ್ಲಿನ ಸಂದೇಶವನ್ನು ಶೇರ್ ಮಾಡಿಕೊಂಡಿದ್ದರು. ‘ಕೋಟ್ಯಂತರ ಹಿಂದೂ ಜನ ಆರಾಧಿಸುವ ನಾಡಿನ ಪ್ರಮುಖ ದೇವಸ್ಥಾನವನ್ನು ಮಾಂಸದ ಊಟ ಸೇವಿಸಿ ದೇವರ ದರ್ಶನ ಮಾಡಿದ ಮುಖ್ಯಮಂತ್ರಿ’ ಎಂದು ಫೇಸ್‌ಬುಕ್ ಖಾತೆಯೊಂದರಲ್ಲಿ ಹಾಕಲಾಗಿತ್ತು. ಅಲ್ಲದೇ, ‘ಮೈಲಾರಿ ಕಂಡಾಗ ಸಿಡುಕಿದ […]

ಸಿಎಂ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ

Tuesday, October 24th, 2017
nalin kumar kateel

ಮಂಗಳೂರು: ಮಾಂಸ ಸೇವನೆ ಮಾಡಿ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಮಾಂಸ ತಿನ್ನುತ್ತೇನೆ ಎನ್ನುವ ಮುಖ್ಯಮಂತ್ರಿಯಿಂದ ಇನ್ನೇನು‌ ನಿರೀಕ್ಷಿಸಲು ಸಾಧ್ಯ ಎಂದು ಸಿದ್ದರಾಮಯ್ಯರನ್ನು ಜರಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಜುನಾಥ್‌‌ ದೇವಸ್ಥಾನದ ಬಗೆಗಿರುವ ನಂಬಿಕೆ, ಭಾವನೆಗಳಿಗೆ ಬೆಲೆ ಕೊಡಲಿಲ್ಲ ಎಂದು ಕಿಡಿಕಾರಿದ್ದಾರೆ.

ಗ್ರಾಮೀಣ ಜನತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳಷ್ಟು ಕೊಡುಗೆ ನೀಡಿದೆ: ಸಿದ್ದರಾಮಯ್ಯ

Monday, October 23rd, 2017
SKDRDP

ಮಂಗಳೂರು: ಗ್ರಾಮೀಣ ಪ್ರದೇಶಗಳ ಪ್ರಗತಿ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೊಡ್ಡ ಕೊಡುಗೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಗ್ರಾಮೀಣ ಜನತೆಯ ನೆಮ್ಮದಿಯ ಜೀವನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳಷ್ಟು ಕೊಡುಗೆ ನೀಡಿದೆ. ಯೋಜನೆಯ ಕಾರ್ಯಕ್ರಮಗಳು ಬಡತನ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದರು. ಜನ ಸ್ವಾಭಿಮಾನದಿಂದ […]

ಟಿಪ್ಪು ಜಯಂತಿ ಸರ್ಕಾರದ ವತಿಯಿಂದ ಮಾಡುತ್ತೇವೆ: ಸಿದ್ದರಾಮಯ್ಯ

Monday, October 23rd, 2017
tippu jayanthi

ಮಂಗಳೂರು:  ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಮಾಡಿಯೇ ಮಾಡುತ್ತೇವೆ,  ಬಿಜೆಪಿ ರಾಜಕೀಯ ಕಾರಣದಿಂದ ಟಿಪ್ಪು ಜಯಂತಿ ವಿರೋಧಿಸುತ್ತಿದೆಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಆಗಮಿಸಿದ ಅವರು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದಾರೆ. ಶೋಭಾ ಕೂಡಾ ಅವರಿಗೆ ಸಾಥ್ ನೀಡಿದ್ದರು. ಟೊಪ್ಪಿ ಹಾಕಿ ಖಡ್ಗ ಝಳಪಿಸಿ ಅಂದು ಯಡಿಯೂರಪ್ಪ ಫೋಸ್ ನೀಡಿದ್ದರು ಎಂದು ವ್ಯಂಗ್ಯವಾಡಿದರು. ಸಚಿವ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ ಪ್ರೋಟೊಕಾಲ್ ಪ್ರಕಾರ […]

ಮಂಜೇಶ್ವರದಲ್ಲಿಯೂ ಸಿಎಂ ಸಿದ್ದರಾಮಯ್ಯನನ್ನು ಕಾಡಿದ ಕಾಗೆ

Thursday, January 19th, 2017
cm crow

ಮಂಜೇಶ್ವರ : ಮಂಜೇಶ್ವರದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಗೌರವಾರ್ಥ ಅವರ ಹುಟ್ಟೂರು ಮಂಜೇಶ್ವರದಲ್ಲಿ ಕೇರಳ ಸರಕಾರದ ಸಹಾಯದೊಂದಿಗೆ ನಿರ್ಮಿಸಲಾಗಿರುವ ಗಿಳಿವಿಂಡು ಸಾಂಸ್ಕೃತಿಕ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಭಾಗವಹಿದ್ದ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರಿಗೆ ಕಾಗೆಯೊಂದು ಅಡ್ಡಿಪಡಿಸಿತು. ವೇದಿಕೆಯ ಮೇಲೆ ಕುಳಿತಿದ್ದ ಸಿಎಂ ಮೇಲೆ ಪಕ್ಕದ ಮರದಲ್ಲಿ ಕುಳಿತಿದ್ದ ಕಾಗೆಯೊಂದು ಹಿಕ್ಕೆ ಹಾಕಿತು. ಇದರಿಂದ ಸಿಎಂ ಮುಜುಗರಕ್ಕೊಳಗಾದರು. ತಕ್ಷಣ ಶಾಸಕ ಮೊಯ್ದೀನ್ ಬಾವಾ ಸ್ವಚ್ಛಗೊಳಿಸಲು ಟಿಶ್ಯೂ ಪೇಪರ್ ಕೊಟ್ಟರು.ಮೂಡಾದ ಮಾಜಿ ಅಧ್ಯಕ್ಷ ತೇಜೋಮಯ ಅವರು ಸಿಎಂ ಪಂಚೆ […]