ನಿಗಧಿತ ಅವಧಿಯಲ್ಲಿ ಪಾಲಿಕೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಸೂಚನೆ

Thursday, May 16th, 2013
N.Prakash

ಮಂಗಳೂರು : ಮಳೆಗಾಲ ಪ್ರಾರಂಭವಾಗುವುದಕ್ಕು ಮುನ್ನ ನಗರದ ಚರಂಡಿಗಳ ಹೂಳೆತ್ತುವಿಕೆ ಕಾಮಗಾರಿಗಳನ್ನು ಮೇ 25 ರೊಳಗೆ ಪೂರ್ಣಗೊಳಿಸಬೇಕೆಂದು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಹಾಗು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ತಿಳಿಸಿದರು. ಅವರು ಬುಧವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾದ ಅಭಿವೃದ್ಧಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಪಾಲಿಕೆ ಮುಖ್ಯ ಅಧೀಕ್ಷಕ ಎಂಜಿನಿಯರ್ ಬಿ.ಎಸ್.ಬಾಲಕೃಷ್ಣ ಮಾತನಾಡಿ, ನೆರೆ ಪೀಡಿತ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, 10 ತಂಡಗಳ ಟಾಸ್ಕ್ಫೋರ್ಸ್‌ ರಚಿಸಲಾಗಿದೆ. ಇನ್ನುಳಿದಂತೆ  ಪಾಲಿಕೆಯಲ್ಲಿ ಈಗಾಗಲೇ 71 ಲಕ್ಷ ರೂಪಾಯಿ […]

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾಧ್ಯಮಗಳಿಗೆ ನೀಡುವ ಜಾಹೀರಾತು ಪರಿಶೀಲಿಸಲು ಸಮಿತಿ ; ಜಿಲ್ಲಾಧಿಕಾರಿ

Friday, February 15th, 2013
DC prakash

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಮಾರ್ಚ್ ಏಳರಂದು ಚುನಾವಣೆ ನಡೆಯಲಿದ್ದು,  ಎಂಸಿಸಿಯನ್ನು ಹೊರತುಪಡಿಸಿ ಮೂಡಬಿದ್ರೆ, ಉಳ್ಳಾಲ, ಪುತ್ತೂರು ನಗರಸಭೆ, ಬೆಳ್ತಂಗಡಿ ಮತ್ತು ಸುಳ್ಯದ ಪಟ್ಟಣ ಪಂಚಾಯತ್ ಚುನಾವಣೆಗಳು ಮಾರ್ಚ್ 7ರಂದು ನಡೆಯಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಲಾಗುತ್ತದೆ. ಎಂಸಿಸಿ ಚುನಾವಣೆಗೆ ನಿಲ್ಲುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 3 ಸಾವಿರ ರೂ. ಠೇವಣೆ ಮತ್ತು ಇತರ ವರ್ಗದ ಅಭ್ಯರ್ಥಿಗಳು 1500 ರೂ. ಠೇವಣಿ ಇಡಬೇಕು ಎಂದು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಇಂದು […]