ಪತ್ರಕರ್ತ ನವೀನ್ ಸೂರಿಂಜೆ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
Tuesday, December 11th, 2012ಮಂಗಳೂರು :ಮಾನವಹಕ್ಕುಗಳ ದಿನವಾದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಡಿವೈಎಫ್ಐ, ಎಸ್ಎಫ್ಐ ಮತ್ತು ಜನವಾದಿ ಮಹಿಳಾ ಸಂಘಟನೆಗಳಿಂದ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ದಾಳಿ ಪ್ರಕರಣದ ಬಗ್ಗೆ ವರದಿ ಮಾಡಿದ ಪತ್ರಕರ್ತ ನವೀನ್ ಸೂರಿಂಜೆಯ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ಇದರ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೈ ಕೋಳ ತೊಟ್ಟು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ ಡಿವೈಎಫ್ಐಯ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ […]