ನೂತನ ಪೊಲೀಸ್ ಮಹಾ ನಿರ್ದೇಶಕ ಲಾಲ್ರೊಖುಮಾ ಪಚಾವ್ ಮಂಗಳೂರು ಭೇಟಿ
Friday, June 29th, 2012ಮಂಗಳೂರು : ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕ ಲಾಲ್ರೊಖುಮಾ ಪಚಾವ್ ಮೇ 31ರಂದು ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಅವರು ಜಿಲ್ಲಾಡಳಿತ ಮತ್ತು ಇಲ್ಲಿನ ಪೊಲೀಸ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದರು. ಪೊಲೀಸ್ ಇಲಾಖೆಯಲ್ಲಿ ಮಾನವ ಸಂಪದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಠಾಣೆಗಳಿಗೆ ಆಧುನಿಕ ತಂತ್ರಜ್ಞಾನದ ಮತ್ತು ವೈಜ್ಞಾನಿಕ ಉಪಕರಣ ಮತ್ತು ಇತರ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುತ್ತಿದೆ […]