ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ:
Thursday, December 10th, 2015
ಧರ್ಮಸ್ಥಳ : ಲಕ್ಷದೀಪೋತ್ಸವ ಸಂದರ್ಭದಲ್ಲಿ ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ ಎಂಬತ್ತಮೂರನೆ ಅಧಿವೇಶನವನ್ನು ಖ್ಯಾತ ಸಂಶೋಧಕ ಡಾ. ಷ. ಶೆಟ್ಟರ್ ಉದ್ಘಾಟಿಸಿ ಮಾತನಾಡಿದರು. ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ. ಮುಕ್ತ ಮನಸ್ಸಿನಿಂದ ಇಂದು ಸಂಶೋಧನೆ ಮಾಡುವುದೇ ಅಪರಾಧವಾಗಿದೆ ಎಂದು […]