ಭರವಸೆ ಮುರಿದ ಶಾಸಕ ಮೊಯ್ದಿನ್ ಬಾವಾ ಮನೆಗೆ ಡಿವೈಎಫ್‌ಐ ವತಿಯಿಂದ “ಶಾಸಕರ ಮನೆಗೆ ಚಲೋ”

Monday, July 3rd, 2017
dyfi

ಮಂಗಳೂರು : ದ.ಕ. ಜಿಲ್ಲಾ ಡಿವೈಎಫ್‌ಐ  ವತಿಯಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರಲ್ಲಿ  ಪಂಜಿಮೊಗರು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಿಸಲ್ಪಟ್ಟ ‘ಸಿಐಡಿ’ ಬದಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿತು. ಪಂಜಿಮೊಗರು ಬಳಿ ತಾಯಿ ರಝಿಯಾ ಮತ್ತು ಮಗಳು ಫಾತಿಮಾ ಝುವಾ ಎಂಬವರನ್ನು 2011ರ ಜೂ.28ರಂದು ಈ ಕೊಲೆ ಮಾಡಲಾಗಿತ್ತು. ಪ್ರಕರಣ ನಡೆದು  5 ವರ್ಷವಾದರೂ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು. ಐದು ವರ್ಷದಿಂದ  ಡಿವೈಎಫ್‌ಐ ಸಾಕಷ್ಟು ಹೋರಾಟ […]

ಪಾವೂರು ಮರಳುಗಾರಿಕೆಯನ್ನು ನಿಯಂತ್ರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿ

Thursday, December 10th, 2015
Sand

ಮಂಗಳೂರು : ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನಾ ಧರಣಿಯನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಜಿಲ್ಲಾಡಳಿತದ ನಿಯಮಗಳನ್ನು ಗಾಳಿಗೆ ತೂರಿ ಮರಳುಗಾರಿಕೆ ನಡೆಯುತ್ತಿದ್ದು ಇದನ್ನು ಕಡಿವಾಣ ಹಾಕಲು ಜಿಲ್ಲಾಡಳಿತಕ್ಕೆ ಏಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದರು. ಜಿಲ್ಲೆಯ ಜನಪ್ರತಿನಿಧಿಗಳ ಹಿಂಬಾಲಕರು ಮರಳುಗಾರಿಕೆಯನ್ನು ನಡೆಸುತ್ತಿದ್ದು […]

ಆರ್ಲಪದವು ದುರಂತ – ಸೂಕ್ತ ತನಿಖೆಗೆ DYFI ಆಗ್ರಹ

Wednesday, March 25th, 2015
muneer Katipalla

ಮಂಗಳೂರು : ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿಯ ಇಬ್ಬರು ರೋಗಿಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮೃತಪಟ್ಟ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಹಾಗೂ ತಪ್ಪಿತಸ್ಥ ವೈದ್ಯರನ್ನು ತಕ್ಷಣ ಬಂಧಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ಪರಿಹಾರ ನೀಡಬೇಕು ಎಂದು DYFI ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ. ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಅನ್ವಯ ಆರ್ಲಪದವಿನಲ್ಲಿ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಒಮೇಗಾ ಆಸ್ಪತ್ರೆ ಆಯೋಜಿಸಿದ್ದ […]

ಸಿಐಡಿ ಪೊಲೀಸರ ಬಗ್ಗೆ ನಮಗೆ ಎಳ್ಳಷ್ಟೂ ವಿಶ್ವಾಸವಿಲ್ಲ : ಡಿವೈಎಫ್‍ಐನ ಜಿಲ್ಲಾ ಧ್ಯಕ್ಷ ಮುನೀರ್ ಕಾಟಿಪಳ್ಳ

Saturday, September 7th, 2013
Dyfc

ಮಂಗಳೂರು: ಪಂಜಿಮೊಗರು ಜೋಡಿ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಸೆ.6 ರಂದು 24 ಗಂಟೆಗಳ ಹಗಲು ರಾತ್ರಿ ಧರಣಿ ನಡೆಯಿತು. ಡಿವೈಎಫ್‍ಐನ ಜಿಲ್ಲಾ ಧ್ಯಕ್ಷ ಮುನೀರ್ ಕಾಟಿಪಳ್ಳ ಜೋಡಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ಬಗ್ಗೆ ನಮಗೆ ಎಳ್ಳಷ್ಟೂ ವಿಶ್ವಾಸವಿಲ್ಲ. ಅವರು ಎರಡೂ ಕುಟುಂಬಗಳನ್ನು ಜಗಳಕ್ಕೆ ಬಿಟ್ಟು ಶಾಂತಿ ಕದಡಿದ್ದಾರೆ ಎಂದು ಡಿವೈಎಫ್‍ಐನ ಜಿಲ್ಲಾ ಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಇದರಿಂದ ಇದೀಗ ಆ ಕುಟುಂಬಗಳಲ್ಲಿ ಜಗಳ ನಡೆಯುತ್ತಿದ್ದು, […]

ಎ.ಎಸ್.ಐ ಶ್ರೀಕಲಾ ನೀಡಿರುವ ದೂರಿನ ಹಿನ್ನಲೆಯಲ್ಲಿ ಎಸಿಪಿ ಜಗನ್ನಾಥ್ ರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿವೈಎಫ್ ಐ ಒತ್ತಾಯ

Saturday, May 25th, 2013
DYFI protest at DC office

ಮಂಗಳೂರು : ಎಸಿಪಿ ಜಗನ್ನಾಥ್ ರಿಂದ ದೌರ್ಜನ್ಯಕ್ಕೊಳಗಾದ ಪಾಂಡೇಶ್ವರ ಠಾಣಾ ಎ.ಎಸ್.ಐ ಶ್ರೀಕಲಾ ರವರಿಗೆ ಕಿರುಕುಳ ನೀಡಿದ ಎಸಿಪಿ ಟಿ.ಆರ್. ಜಗನ್ನಾಥ್ ರವರ ಮೇಲೆ ಈ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ  ಶುಕ್ರವಾರ ಡಿವೈಎಫ್ ಐ ಜಿಲ್ಲಾ ಘಟಕ ಹಾಗೂ ಜಿಲ್ಲಾ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಡಿ.ವೈ.ಎಫ್.ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ತೀವ್ರ […]