ಮಂಗಳೂರು ಐಜಿ ಕಚೇರಿಯ ಡಿವೈಎಸ್ಪಿ ಆತ್ಮಹತ್ಯೆ

Friday, July 8th, 2016
Ganapathi

ಮಂಗಳೂರು : ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈ ಎಸ್ ಪಿಯಾಗಿ ಕೆಲಸ ಮಾಡುತ್ತಿದ್ದ ಕೊಡಗು ಕುಶಾಲನಗರದ ಎಂ ಕೆ ಗಣಪತಿ ಗುರುವಾರ ಸಂಜೆ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹಿರಿಯ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಹೇಳಲಾಗಿದೆ. ಗಣಪತಿ ಅವರನ್ನು ಇತ್ತೀಚೆಗೆ ಬೆಂಗಳೂರಿನಿಂದ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಮಾಧ್ಯಮಗಳಿಗೆ ಸಿಕ್ಕಿರುವ ವಿಡಿಯೋ ಒಂದರಲ್ಲಿ ಗಣಪತಿ ಹಿರಿಯ ಅಧಿಕಾರಿಗಳ ಮೇಲೆ ನೇರವಾಗಿ ಆರೋಪ ಮಾಡಿದ್ದು ದಾಖಲಾಗಿದೆ. ಸಬ್ ಇನ್ಸ್ ಪೆಕ್ಟರ್ […]

ಫೆಬ್ರವರಿ 6 : ಪುತ್ತೂರಿನಲ್ಲಿ ಕುಮ್ಕಿ ರೈತರ ಜಾಗೃತಿ ಸಮಾವೇಶ

Thursday, January 28th, 2016
Kumki land

ಮಂಗಳೂರು : ಫೆಬ್ರವರಿ 6ರಂದು ಪುತ್ತೂರಿನಲ್ಲಿ ಕುಮ್ಕಿ ರೈತರ ಜಾಗೃತಿ ಸಮಾವೇಶ ನಡೆಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ರೈತರು ಕುಮ್ಕಿ ಹಕ್ಕು ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದು ಆ ಸಲುವಾಗಿ ಜಾಗೃತಿ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ‘ರೈತರಿಗೆ ಕುಮ್ಕಿ ಹಕ್ಕನ್ನು ನೀಡಿಯೇ ನೀಡುತ್ತೇವೆ. ಬಿಜೆಪಿ, ಈ ಪರವಾಗಿ ಕಾನೂನು ಮತ್ತು ಜನತಾ ನ್ಯಾಯಾಲಯದಲ್ಲಿ ಹೋರಾಟ ನಡೆಸಲಿದೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ರಾಜಕೀಯ ಲಾಭಕ್ಕಾಗಿ ಕುಮ್ಕಿ ಹೋರಾಟ ನಡೆಸುತ್ತಿಲ್ಲ. ನಮಗೆ […]